ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜೂ.13): ಮುಖ್ಯಮಂತ್ರಿಗಳ ಅದೃಷ್ಟದ ನಿವಾಸ ಎಂದೇ ಕರೆಯಲ್ಪಡುವ ‘ಕಾವೇರಿ’ಗೆ ಆದಷ್ಟು ಬೇಗ ತಮ್ಮ ವಾಸ್ತವ್ಯ ಬದಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಮನಹರಿಸಿದ್ದು ಈ ನಿಟ್ಟಿನಲ್ಲಿ ಕಾವೇರಿ ನಿವಾಸದ ನವೀಕರಣದ ಮಾಹಿತಿ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ಹಾಗೂ ಅಧಿಕಾರಿಗಳು ನವೀಕರಣದ ಕುರಿತು ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ತಮ್ಮ ಆಸಕ್ತಿಗೆ ತಕ್ಕಂತೆ ನವೀಕರಣಕ್ಕೆ ಕೆಲ ಸಲಹೆ-ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಸದ್ಯ ಕಾವೇರಿ ನಿವಾಸದಲ್ಲಿ ಪೇಂಟಿಂಗ್‌ ಕಾರ್ಯ ಆರಂಭವಾಗಿದೆ. ಸಂಪೂರ್ಣ ನವೀಕರಣಕ್ಕೆ ಇನ್ನೂ ಒಂದು ತಿಂಗಳು ಬೇಕಾಗಬಹುದು. ಆ ನಂತರವೇ ಮುಖ್ಯಮಂತ್ರಿಗಳು ಈ ನಿವಾಸಕ್ಕೆ ವಾಸ್ತವ್ಯ ಬದಲಿಸಲು ಸಾಧ್ಯವಾಗಲಿದೆ ಎನ್ನುತ್ತವೆ ಮೂಲಗಳು.