ಸಿಎಂ ಸಿದ್ದರಾಮಯ್ಯ ಒಂದು ಸಮುದಾಯದ ಓಲೈಕೆ ಸರಿಯಲ್ಲ: ಯಡಿಯೂರಪ್ಪ
ಮುಖ್ಯಮಂತ್ರಿಯಾಗಿ ಅವರು ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ. ಈ ಬಗ್ಗೆ ಈಗಾಗಲೇ ಹಲವು ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇವಲ ಮುಸ್ಲಿಂ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ತಪ್ಪಾಗಲಿದೆ ಎಂದು ಭವಿಷ್ಯ ನುಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ(ಡಿ.07): ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಸ್ಲಿಂ ಸಮುದಾಯಕ್ಕೆ ಹಣ ನೀಡುವುದರಲ್ಲಿ ತಪ್ಪೇನಿಲ್ಲ. ಆದರೆ. ಅದನ್ನೇ ದೊಡ್ಡದಾಗಿ 10 ಸಾವಿರ ಕೋಟಿ ಕೊಡುತ್ತೀನಿ ಎಂದು ಬಿಂಬಿಸುವುದು ಸರಿಯಲ್ಲ. ಇದು ಹಿಂದುಗಳ ಆಕ್ರೋಶಕ್ಕೆ ಕಾಣವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿ ಅವರು ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ. ಈ ಬಗ್ಗೆ ಈಗಾಗಲೇ ಹಲವು ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇವಲ ಮುಸ್ಲಿಂ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ತಪ್ಪಾಗಲಿದೆ ಎಂದು ಭವಿಷ್ಯ ನುಡಿದರು.
ಮೋದಿಯಿಂದಾಗಿ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಭಾರತ: ಯಡಿಯೂರಪ್ಪ
ಬೆಳಗಾವಿ ಅಧಿವೇಶನದಲ್ಲಿ ವೀರ ಸಾವರ್ಕರ್ ಫೋಟೋ ತೆರವು ಕ್ರಮ ಸರಿಯಲ್ಲ. ಈ ರೀತಿಯ ಪ್ರಯತ್ನಕ್ಕೆ ಯಾರೂ ಕೈ ಹಾಕಬಾರದು. ಮುಂದೆ ಮೋದಿ ಹೆಸರಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜ್ಯದ ಎಲ್ಲ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಇದೇ ವೇಳೆ ಮಾಜಿ ಸಚಿವ ಸೋಮಣ್ಣ ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ. ನಮ್ಮ ಪಕ್ಷದಲ್ಲೇ ಇರುತ್ತಾರೆ, ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬರ ಪರಿಹಾರಕ್ಕೆ ಮನವಿ
ರಾಜ್ಯದಲ್ಲಿ ಈ ಬಾರಿ ತೀವ್ರ ಬರಗಾಲವಿದೆ. ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದವರು ಕೇಂದ್ರದತ್ತ ಬೊಟ್ಟು ತೋರಿಸಿದರೆ ತಮ್ಮ ಪಾಲಿನ ಪರಿಹಾರ ಬಿಡುಗಡೆ ಮಾಡಬೇಕು. ಶೀಘ್ರದಲ್ಲೇ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಹಣ ಬಿಡುಗಡೆ ಮಾಡುವಂತೆ ಕೋರುತ್ತೇವೆ ಎಂದು ಹೇಳಿದರು.