ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಕೆಲ ನಾಯಕರು ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಗಳನ್ನು ಮಾಡಿದ್ದಾರೆ.
ಬೆಂಗಳೂರು, (ಜ.02): ಶಿವಮೊಗ್ಗದಲ್ಲಿ ಜನವರಿ 2 ಹಾಗೂ 3ರಂದು ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದರಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಜನವರಿ 1ರಂದೇ ಅರುಣ್ ಸಿಂಗ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯಹೂಡಿದ್ದರು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿಎಂ ತವರಲ್ಲಿ ಮಹತ್ವದ ಸಭೆ: ಬಿಎಸ್‌ವೈ, ಅರುಣ್ ಸಿಂಗ ನೇತೃತ್ವದಲ್ಲಿ ಕಾರ್ಯತಂತ್ರ...! .
ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯಹೂಡಿದ್ದ ಅರುಣ್ ಸಿಂಗ್ ಅವರನ್ನ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಚರ್ಚೆ ನಡೆಸಿದರು.
ಕೆಲವೇ ಆಪ್ತ ನಾಯಕರಿಗೆ ಮಾತ್ರ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ಕೆಲವು ನಾಯಕರು ಅವರನ್ನು ಭೇಟಿಯಾಗುವ ಇಚ್ಛೆ ಹೊಂದಿದ್ದರಾದರೂ ಅವಕಾಶ ಸಿಗಲಿಲ್ಲ. ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಅರುಣ್ ಸಿಂಗ್ ಜೊತೆ ಬಿಎಸ್‍ವೈ, ಗೋವಿಂದ ಕಾರಜೋಳ ಅವರುಗಳು, ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ, ಪಕ್ಷದೊಳಗಿನ ಭಿನ್ನಮತ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 2, 2021, 3:45 PM IST