ಈವರೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದ ಪ್ರೀತಂ ಗೌಡ, ಬುಧವಾರ ಮೊದಲ ಬಾರಿಗೆ ಪ್ರಜ್ವಲ್‌ ಪರ ಪ್ರಚಾರ ನಡೆಸಿದ್ದರು. ಆದರೆ, ಎನ್‌ಡಿಎ ಅಭ್ಯರ್ಥಿಗೆ ಮತ ನೀಡಿ ಎನ್ನುವ ಮೂಲಕ ಪ್ರಜ್ವಲ್‌ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 

ಅರಕಲಗೂಡು(ಏ.12):  ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹಾಗೂ ಬಿಜೆಪಿ ಮುಖಂಡ, ಮಾಜಿ ಶಾಸಕ ಪ್ರೀತಂ ಗೌಡ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ. 

ಈವರೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದ ಪ್ರೀತಂ ಗೌಡ, ಬುಧವಾರ ಮೊದಲ ಬಾರಿಗೆ ಪ್ರಜ್ವಲ್‌ ಪರ ಪ್ರಚಾರ ನಡೆಸಿದ್ದರು. ಆದರೆ, ಎನ್‌ಡಿಎ ಅಭ್ಯರ್ಥಿಗೆ ಮತ ನೀಡಿ ಎನ್ನುವ ಮೂಲಕ ಪ್ರಜ್ವಲ್‌ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 

ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿಯ ಅಪ್ಪನಿಗಿಂದ ಒಂದು ವೋಟು ಜಾಸ್ತಿನೇ ಲೀಡ್ ಕೊಡಿಸ್ತೇನೆ: ಪ್ರೀತಂ ಗೌಡ ವಾಗ್ದಾನ

ಇದಕ್ಕೆ ಪ್ರತಿಯಾಗಿ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಗುರುವಾರ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಬಿಜೆಪಿ ಮುಖಂಡರಾದ ಎಚ್.ಯೋಗಾರಮೇಶ್, ಪ್ರೀತಂಗೌಡ ಅವರು ಗೈರಾಗಿದ್ದರು. ಕಾರ್ಯಕ್ರಮದ ವೇಳೆ ಪಕ್ಷದ ಬ್ಯಾನರ್‌ನಲ್ಲಿ ಪ್ರೀತಂಗೌಡರ ಭಾವಚಿತ್ರ ಕೂಡ ಹಾಕಿರಲಿಲ್ಲ.