Asianet Suvarna News Asianet Suvarna News

ಕೋಮುವಾದಿ ರಾಜಕಾರಣ ಕೊನೆಗಾಣಿಸಬೇಕು: ಸಚಿವ ಮಹದೇವಪ್ಪ

ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. 

Communal politics must end Says Minister Dr HC Mahadevappa gvd
Author
First Published Dec 29, 2023, 8:34 PM IST

ಮೈಸೂರು (ಡಿ.29): ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಸಹಯೋಗದಲ್ಲಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ 138ನೇ ಭಾರತದ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 100ನೇ ಕಾಂಗ್ರೆಸ್ ಸೇವಾದಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಳವಳಿಗೆ ಆಗಾಧವಾದ ಶಕ್ತಿ ಇದೆ. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ಹೇಳಿದರು. ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ ಭಾರತಕ್ಕೆ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ಇಂದು ಕೋಮುವಾದ, ಮತೀಯವಾದ, ಧರ್ಮಾಂದತೆ, ಸ್ವಾತಂತ್ರ್ಯದ ಉದ್ದೇಶ ಕಾಂಗ್ರೆಸ್ ಹೋರಾಟದ ಆಶಯಗಳನ್ನು ನಾಶ ಮಾಡಲು ಹೊರಟಿದ್ದಾರೆ. ಭಾರತದ ಇಡೀ ಚರಿತ್ರೆಯನ್ನು ತಿರುಚುವ ಕೆಲಸ ಮಾಡಲಾಗುತ್ತದೆ. 

ದೇಶದ ಅಭಿವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ

ನಮ್ಮ ನಾಗರೀಕ ಬದುಕನ್ನು, ಸಾಂಸ್ಕೃತಿಕ ಜೀವನ ನಾಶಮಾಡಿ ಬಹುತ್ವಕ್ಕೆ ಭಂಗ ತರುವ ಕೆಲಸ ನಡೆಯುತ್ತಿದೆ. ಹೀಗಾಗಿ ಸರ್ವಾಧಿಕಾರ ಆಡಳಿತವನ್ನು ಕೊನೆಗಾಣಿಸಬೇಕು ಎಂದು ಅವರು ಕರೆ ನೀಡಿದರು. ಕಾಂಗ್ರೆಸ್ ಎಂದರೆ ಒಗ್ಗೂಡುವಿಕೆ ಎಂದರ್ಥ. ಜನರನ್ನು ಒಗ್ಗೂಡಿಸಿ ಜನಶಕ್ತಿಯ ಮೂಲಕ ಪರಕೀಯರು ನಮ್ಮನ್ನು ಆಳುವಿಕೆಯ ವಿರುದ್ಧವಾಗಿ ಕಾಂಗ್ರೆಸ್ ಹೋರಾಟ ಮಾಡಿದೆ. ವಸಹಾತು ಶಾಹಿ ಸಾಮ್ರಾಟದ ವಿರುದ್ಧವಾಗಿ ಸಂಘಟನಾತ್ಮಕವಾಗಿ ಅಹಿಂಸೆ ಮತ್ತು ಅಸಹಕಾರ ಚಳುವಳಿಯನ್ನು ಮಾಡಿರುವ ಕಾಂಗ್ರೆಸ್ನ ಉದ್ದೇಶ ಕೋಮುಸೌರ್ಹದತೆ ಕಾಪಾಡುವುದು, ಅಸ್ಪೃಶ್ಯತೆ ನಿವಾರಣೆ ಮಾಡುವುದು ಆಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಹೋರಾಟ ರಾಜಕೀಯ ಉದ್ದೇಶವನ್ನು ಇಟ್ಟುಕೊಂಡು ಮಾಡಿದ್ದಲ್ಲ. ಜನರು ಮತ್ತು ದೇಶದ ಹಿತಕ್ಕಾಗಿ ಮಾಡಿದ ಚಳವಳಿ. ಕಾಂಗ್ರೆಸ್ ನ ಅನೇಕ ನಾಯಕರು ತ್ಯಾಗ, ಬಲಿದಾನ ಮಾಡಿರುವುದು ಚರಿತ್ರೆಯಲ್ಲಿ ದಾಖಲಾಗಿದೆ. ಹೀಗಾಗಿ ಕಾಂಗ್ರೆಸ್ಪಕ್ಷದ ಸದಸ್ಯರು ಎಂದೇಳಲು ನಮ್ಮೆಲ್ಲರಿಗೂ ಹಮ್ಮೆ ಇದೆ. ಸಿದ್ಧಾಂತದ ಅನ್ವಯ ಹೋರಾಟಗಳನ್ನು ಕೈಗೊಂಡು ಗುಲಾಮಗಿರಿ ಕೊನೆಗೊಳಿಸಲಾಗಿದೆಎಂದರು.

ಜವಹರ ಲಾಲ್ ನೆಹರು ಅವರಿಗೆ ಬದ್ಧತೆ ಇತ್ತು. ವೈಚಾರಿಕ ಮತ್ತು ವೈಜ್ಞಾನಿಕ ಆಲೋಚನೆ ಮೈಗೂಡಿಸಿಕೊಂಡಿದ್ದರು. ದೇಶವನ್ನು ಮುನ್ನಡೆಸುವ ದಾರಿ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ನೆಹರು ಅವರು ಈ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಅಹರ್ನಿಶಿ ಶ್ರಮಿಸಿದ್ದಾರೆ. ಸ್ವಾತಂತ್ರ್ಯ ದೊರೆತಾಗ ದೇಶದ ಶಿಕ್ಷಣ ಸಾಕ್ಷರತೆ ಕೇವಲ ಶೇ. 10 ರಷ್ಟಿತ್ತು, ಪ್ರಸ್ತುತ ಶೆ. 84ರಷ್ಟಿದೆ. ಆದರೆ ಶ್ರೇಣಿಕೃತ ಸಮಾಜ ಬಹುಸಂಖ್ಯಾತರನ್ನು ಶಿಕ್ಷಣದಿಂದ ವಂಚಿಸಿತ್ತು. ತಳಸಮುದಾಯಕ್ಕೆ ಮತ್ತು ಶೂದ್ರ ಸಮುದಾಯಗಳಿಗೆ ಶಿಕ್ಷಣ ವಂಚಿಸುವ ಕಾರ್ಯಕ್ರಮ ರೂಪಿಸಿತ್ತು ಎಂದರು.

ಆರೋಗ್ಯ, ಉದ್ಯೋಗ ಹಾಗೂ ಬದುಕಿನ ಅವಶ್ಯಗಳಿಗೆ ಪ್ರೇರಣ ಶಕ್ತಿಯಾಗಿ ಕಾಂಗ್ರೆಸ್ ಕೆಲಸ ಮಾಡಿದೆ. ಆಹಾರ ಸ್ವಾವಲಂಬನೆಗಾಗಿ ದೇಶದಲ್ಲೇ ಅತ್ಯಂತ ಬಹುದೊಡ್ಡ ಬಾಕ್ರನಂಗಲ್ ಅಣೆಕಟ್ಟು ಕಟ್ಟಿದೆ. ದೇಶವನ್ನು ಸಮೃದ್ಧಿಯಾಗಿ ನಿರ್ಮಿಸಲು ಪಂಚವಾರ್ಷಿಕ ಯೋಜನೆ ಜಾರಿಗೆ ತಂದಿದೆ. ಉಳುವವನೆ ಹೊಲದೊಡೆಯ ಕಾಯ್ದೆ ಅನುಷ್ಠಾನ ಮಾಡಿದೆ. ಅನಾರೋಗ್ಯದಿಂದರುವವರು ಅರೋಗ್ಯವಾಗಬೇಕು, ಅನಕ್ಷರಸ್ಥರು ಅಕ್ಷರಸ್ಥರಾಗಬೇಕು. ಸ್ವಾಭಿಮಾನ ಮತ್ತು ಸ್ವಾವಲಂಬನೆ ಆರ್ಥಿಕ ಸ್ವಾತಂತ್ರ್ಯ ತಳಹದಿಯ ಮೇಲೆ ನಮ್ಮ ಹೋರಾಟ ಮಾಡಬೇಕು ಎಂಬ ಪರಿಕಲ್ಪನೆಯೊಂದಿಗೆ ಕಾಂಗ್ರೆಸ್ ಕೆಲಸ ಮಾಡಿದೆ ಎಂದು ಅವರು ತಿಳಿಸಿದರು.ಇದೇ ವೇಳೆ 'ಡೊನೆಟ್ ಫಾರ್ ದೇಶ್' ವಂತಿಕೆ ಸಂಗ್ರಹ ಅಭಿಯಾನಕ್ಕೆ ಸಚಿವರು ವೈಯಕ್ತಿಕವಾಗಿ 1.38 ಲಕ್ಷ ರೂ. ನೀಡುವ ಮೂಲಕ ಚಾಲನೆ ನೀಡಿದರು.

ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಂ. ಶಿವಣ್ಣ, ಮಾಜಿ ಸಂಸದ ಶಿವಣ್ಣ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ನಗರ ಮಹಿಳಾ ಕಾಂಗ್ರೆಸ್ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಜಿಲ್ಲಾ ಮಹಿಳಾ ಕಾಂಗ್ರೆಸ್ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮಾಜಿ ಮೇಯರ್ಗಳಾದ ಮೋದಾಮಣಿ, ಟಿ.ಬಿ. ಚಿಕ್ಕಣ್ಣ ಮೊದಲಾದವರು ಇದ್ದರು.

Follow Us:
Download App:
  • android
  • ios