Asianet Suvarna News Asianet Suvarna News

'ವಿಧಾನ ಪರಿಷತ್ ಆಯ್ಕೆ ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ'

ಕೊರೋನಾ ಮಧ್ಯೆ ವಿಧಾನಪರಿಷತ್ ಚುನಾವಣೆ ರಂಗೇರಿದ್ದು, ಬಿಜೆಪಿ ಭರ್ಜರಿ ಲಾಬಿ ಶುರುವಾಗಿದೆ. ಇನ್ನು ಈ ಬಗ್ಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೀಳಿದ್ದು ಹೀಗೆ...

comparative Minister ST Somashekar Reacts On Karnataka MLC Elections
Author
Bengaluru, First Published May 29, 2020, 3:03 PM IST

ಮೈಸೂರು, (ಮೇ.29) : ವಿಧಾನಪರಿಷತ್ ಸದಸ್ಯರ ಆಯ್ಕೆ ವಿಷಯವನ್ನು ಸಚಿವ ಸಂಪುಟ ಸದಸ್ಯರೆಲ್ಲರೂ ಸೇರಿ ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ಬಿಟ್ಟಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು.

ಪಿರಿಯಾಪಟ್ಟಣ ತಾಲೂಕಿನ ಚಿಕ್ಕಹೊಸೂರು ಗ್ರಾಮ ಹಾಗೂ ಸುತ್ತಲಿನ 15 ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಬಹುಗ್ರಾಮ  ಕುಡಿಯುವ ನೀರಿನ ಯೋಜನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಸ್ಥಾನಗಳಿಗೆ ಚುನಾವಣೆಗಳು ಆಗಬೇಕಿದೆ. ಒಟ್ಟು 16 ಸ್ಥಾನಗಳಿಗೆ ಆಯ್ಕೆಯಾಗಬೇಕಿದ್ದು ಅದನ್ನು ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟಿದ್ದೇವೆ ಎಂದು ತಿಳಿಸಿದರು.

ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ

ಮೈಸೂರಿನ ಬಿಜೆಪಿ ಪ್ರಮುಖ ನಾಯಕರು ಹಾಗೂ ಮಾಜಿ ಸಚಿವರಾದ ಎಚ್. ವಿಶ್ವನಾಥ್ ಸೇರಿದಂತೆ, ಎಂಟಿಬಿ ನಾಗರಾಜ್, ಜಿ.ಶಂಕರ್ ಎಲ್ಲರ ಬಗ್ಗೆಯೂ ಸ್ಥಾನ ನೀಡುವಂತೆ ನಾನು ಹಾಗೂ ಗೆಳೆಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಅವರ ನಿರ್ಧಾರವೇ ಅಂತಿಮ. ಸಾಮಾಜಿಕ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೂ ಸ್ಥಾನ ದೊರೆಯಲಿದೆ ಎಂದರು.

ಪಕ್ಷದಲ್ಲಿ ಯಾವುದೇ ಒಡಕಿಲ್ಲ
comparative Minister ST Somashekar Reacts On Karnataka MLC Elections

ಆಯಾ ಜಿಲ್ಲೆಗಳಲ್ಲಿ ಪಕ್ಷಕ್ಕೆ ದುಡಿದವರು ಪರಿಷತ್ತಿನ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ. ಪಕ್ಷದಲ್ಲಿ ಒಂದೇ ಒಂದು ಪರ್ಸೆಂಟ್ ಸಹ ಒಡಕಿಲ್ಲ. ಮುಖ್ಯಮಂತ್ರಿಗಳು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಅಂತಿಮವಾಗಿ ಯಾರಿಗೆ ಸ್ಥಾನ ನೀಡಬೇಕೆಂದು ನಿರ್ಧರಿಸುತ್ತಾರೆ ಎಂದು ಹೇಳಿದರು.

Follow Us:
Download App:
  • android
  • ios