ಚಾಮರಾಜನಗರ ಟಿಕೆಟ್‌ಗೆ ಬಿಜೆಪಿ, ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಿದ್ದರಾಮಯ್ಯ ಪಾಲಿಗಿದು ಪ್ರತಿಷ್ಠೆಯ ಕ್ಷೇತ್ರ!

ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಹಾಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ರಾಜ ಕೀಯ ನಿವೃತ್ತಿ ಮತ್ತು ಕಾಂಗ್ರೆಸ್‌ನಿಂದ ಎರಡು ಬಾರಿ ಆಯ್ಕೆಯಾಗಿದ್ದ ಆರ್.ಧ್ರುವ ನಾರಾಯಣ ಅವರ ನಿಧನದಿಂದ ಈ ಬಾರಿಯ ಲೋಕಸಭಾ ಚುನಾವಣೆ ಟಿಕೆಟ್ ಯಾರಿಗೆನ್ನುವ ವಿಚಾರ ತೀವ್ರ ಕುತೂಹಲ ಮೂಡಿಸಿದೆ.

Competition between BJP and Congress for Chamarajanagar Lok Sabha ticket gvd

ದೇವರಾಜು ಕಪ್ಪಸೋಗೆ

ಚಾಮರಾಜನಗರ (ಜ.21): ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಹಾಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ರಾಜ ಕೀಯ ನಿವೃತ್ತಿ ಮತ್ತು ಕಾಂಗ್ರೆಸ್‌ನಿಂದ ಎರಡು ಬಾರಿ ಆಯ್ಕೆಯಾಗಿದ್ದ ಆರ್.ಧ್ರುವ ನಾರಾಯಣ ಅವರ ನಿಧನದಿಂದ ಈ ಬಾರಿಯ ಲೋಕಸಭಾ ಚುನಾವಣೆ ಟಿಕೆಟ್ ಯಾರಿಗೆನ್ನುವ ವಿಚಾರ ತೀವ್ರ ಕುತೂಹಲ ಮೂಡಿಸಿದೆ. ಚಾಮರಾಜನಗರ 1952 ಮತ್ತು 1957ರಲ್ಲಿ ಮೈಸೂರು ದ್ವಿಸದಸ್ಯ ಲೋಕಸಭಾ ಕ್ಷೇತ್ರವಾ ಗಿತ್ತು. 1962ರಲ್ಲಿ ಚಾಮರಾಜನಗರ ಮೀಸಲು ಕ್ಷೇತ್ರ ಉದಯವಾಯಿತು. ಅಲ್ಲಿಂದ ಕಾಂಗ್ರೆಸ್ 10, ಜನತಾದಳ 2, ಜೆಡಿಎಸ್, ಜೆಡಿಯು ತಲಾ ಒಂದು ಬಾರಿ ಗೆದ್ದಿದೆ. 

2019ರ ಚುನಾವಣೆ ಯಲ್ಲಿ ಮೊದಲ ಬಾರಿಗೆ ಇಲ್ಲಿ ಬಿಜೆಪಿ ಖಾತೆ ತೆರೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲೇ ಇರುವುದರಿಂದ ಸಹಜವಾಗಿಯೇ ಕಾಂಗ್ರೆಸ್‌ಗೆ ಇದು ಪ್ರತಿಷ್ಠೆಯ ಕ್ಷೇತ್ರ, ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್ ನಿವೃತ್ತಿ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನದಿಂದಾಗಿ ಎರಡೂ ಪಕ್ಷಗಳಿಗೂ ಅಭ್ಯರ್ಥಿಗಳ ಆಯ್ಕೆಯೇ ಇಲ್ಲಿ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರ ವರುಣ ಸೇರಿ ಚಾಮರಾಜನಗರ ಕ್ಷೇತ್ರ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಹನೂರು ಕ್ಷೇತ್ರ ಮಾತ್ರ ಜೆಡಿಎಸ್ ತೆಕ್ಕೆಯಲ್ಲಿದೆ. 

ನಮ್ಮಿಂದ ‍4 ಲಕ್ಷ ಕೋಟಿ ಪಡೆದು 50000 ಕೋಟಿ ಮಾತ್ರ ಕೊಡ್ತಾರೆ: ಕೇಂದ್ರದ ಆರ್ಥಿಕ ಅನ್ಯಾಯ ವಿರುದ್ಧ ಸಿದ್ದು ಕಿಡಿ!

ಪ್ರಧಾನಿ ಮೋದಿ ಅವರ ವರ್ಚಸ್ಸಿನಿಂದ ಈ ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳಬಹುದು ಎಂಬ ಲೆಕ್ಕಾಚಾರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳದ್ದಾಗಿ ದ್ದರೆ, ಇನ್ನು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಶಾಸಕರೇ ಇರುವುದರಿಂದ ಗೆಲುವು ಸುಲಭ ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದು. ಗೆದ್ದೇ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಟಿಕೆಟ್‌ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ನಡೆದ ಸಭೆಯಲ್ಲಿ ಸಚಿವ ಎಚ್‌ .ಸಿ. ಮಹದೇವಪ್ಪ, ಅವರ ಪುತ್ರ ಸುನಿಲ್ ಬೋಸ್, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾಜಿ ಸಚಿವ ಬಿ. ಸೋಮಶೇಖರ್,  ಮುಖಂಡರಾದ ಜಿ.ಸಿ.ಕಿರಣ್, ಡಿ.ಎನ್.ನಟ ರಾಜು, ಪ್ರೊ. ಮಹದೇವ್‌ ಹೆಸರು ಪ್ರಸ್ತಾಪವಾಗಿದೆ. 

ರಾಮಮಂದಿರ ಉದ್ಘಾಟನೆ ದಿನವೇ ಹೆರಿಗೆಗೆ ಕಾಯ್ತಿರೋ ತುಂಬು ಗರ್ಭಿಣಿಯರು: ಆಸ್ಪತ್ರೆಗಳಲ್ಲಿ ಅಡ್ವಾನ್ಸ್ ರೆಜಿಸ್ಟ್ರೇಶನ್!

ಆದರೆ ಕ್ಷೇತ್ರದ ಕಾಂಗ್ರೆಸ್ ಶಾಸಕರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಹೆಸರನ್ನು ಪ್ರಬಲವಾಗಿ ಸೂಚಿಸಿದ್ದಾರೆ. ಹಿಂದೆ 1991ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ಹೆಚ್ಚು ಪರಿಚಿತರು ಎನ್ನುವ ಕಾರಣಕ್ಕೆ ಇಂಥದ್ದೊಂದು ಪ್ರಸ್ತಾಪ ಮಾಡಿದ್ದಾರೆ. ಆದರೆ, ಮಹದೇವಪ್ಪ ಮಾತ್ರ ಪುತ್ರ ಸುನೀಲ್ ಬೋಸ್ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಬಿಜೆಪಿ ಟಿಕೆಟ್‌ಗಾಗಿ 2009 ಮತ್ತು 2014ರಲ್ಲಿ ಜೆಡಿಎಸ್‌ನಿಂದಸ್ಪರ್ಧಿಸಿಸೋತಿರುವ ಮಾಜಿ ಸಚಿವ ಕೋಟೆ ಎಂ.ಶಿವಣ್ಣ, 2009ರಲ್ಲಿ ಬಿಎಸ್ಪಿಯಿಂದ ಕಣಕ್ಕಿಳಿದು ಸೋತಿದ್ದ ಮಾಜಿ ಸಚಿವ ಎನ್.ಮಹೇಶ್, ಶಾಸಕರಾದ ಎಸ್. ಬಾಲರಾಜು, ಸಿ.ರಮೇಶ್, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ, ನಿವೃತ್ತ ಎಎಫ್‌ಎಸ್ ಅಧಿಕಾರಿ ಡಾ.ರಾಜು, ಜಿಪಂ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪುತ್ರ ಜಿಪಂ ಮಾಜಿ ಸದಸ್ಯ ಎ.ಆರ್.ಬಾಲರಾಜು, ಹಾಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅಳಿಯಂದಿರು ಪೈಪೋಟಿ ನಡೆಸುತ್ತಿದ್ದಾರೆ.

Latest Videos
Follow Us:
Download App:
  • android
  • ios