Asianet Suvarna News Asianet Suvarna News

ಬೆಂಗಳೂರು ದಕ್ಷಿಣ ಲೋಕಸಭಾ ಕದನ: ಬಿಜೆಪಿ ಟಿಕೆಟ್‌ಗೆ ತೇಜಸ್ವಿ, ಜೈಶಂಕರ್ ಪೈಪೋಟಿ?

ತೇಜಸ್ವಿ ಸೂರ್ಯ ಅವರ ಬದಲು ಜೈಶಂಕರ್‌ ಅವರಿಗೆ ಟಿಕೆಟ್ ನೀಡಬಹುದು ಎಂಬ ವದಂತಿ ಹಬ್ಬಿದೆ. ಇದು ನಿಜವಾಗುತ್ತದೆಯೇ ಎಂಬುದಕ್ಕೆ ಇನ್ನಷ್ಟು ದಿನ ಕಾಯಬೇಕಾಗಿ ಬರಬಹುದು. ಈ ನಡುವೆ ತೇಜಸ್ವಿ ಸೂರ್ಯ ಅವರು ಚುನಾವಣಾ ತಯಾರಿ ಆರಂಭಿಸಿದ್ದಾರೆ.

Competition between Tejasvi Surya and Jaishankar to Lok Sabha Elections 2024 grg
Author
First Published Jan 27, 2024, 9:43 AM IST

ವಿಜಯ್ ಮಲಗಿಹಾಳ

ಬೆಂಗಳೂರು(ಜ.27):  ಏಳು ಬಾರಿ ಸತತವಾಗಿ ಗೆಲುವು ಸಾಧಿಸುವ ಮೂಲಕ ತನ್ನ ಭದ್ರಕೋಟೆಯನ್ನಾಗಿ ಮಾಡಿ ಕೊಂಡಿರುವ ಬಿಜೆಪಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿನ ಸದ್ಯದ ಪರಿಸ್ಥಿತಿ ಅವಲೋಕಿಸಿದರೆ ಈ ಬಾರಿಯೂ ಅನುಕೂ ಲಕರ ವಾತಾವರಣವೇ ಕಂಡು ಬರುತ್ತಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜೆಡಿಎಸ್‌ ಅಸ್ತಿತ್ವಕ್ಕೆ ಇಲ್ಲಿ ಇಲ್ಲ ಎಂದೇ ಹೇಳಬಹುದು. 

ಬಿಜೆಪಿಯಿಂದ ಪಕ್ಷದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರೇ ಇಲ್ಲಿ ಮತ್ತೊಮ್ಮೆ ಅಭ್ಯರ್ಥಿಯಾಗುತ್ತಾರೆ ಎಂಬುದು ಇದುವರೆಗಿನ ಬೆಳವಣಿಗೆ. ಈ ಕ್ಷೇತ್ರದಿಂದ ಸತತವಾಗಿ ಆರು ಬಾರಿ ಸಂಸದರಾಗಿ ಗೆಲುವು ಸಾಧಿಸಿದ್ದ ಅನಂತಕುಮಾ‌ರ್ ಅವರ ನಿಧನದ ಬಳಿಕ ಅನಂತಕುಮಾರ್‌ಪತ್ನಿ ತೇಜಸ್ವಿನಿ ಅವರು ಪ್ರಬಲ ಆಕಾಂಕ್ಷಿಯಾಗಿದ್ದರೂ ಕುಟುಂಬ ರಾಜಕಾರಣದ ನೆಪವೊಡ್ಡಿ ನಿರಾಕರಿಸಿ ಅಚ್ಚರಿ ಅಭ್ಯರ್ಥಿ ಎಂಬಂತೆ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಯಿತು. ಯುವ ಮುಖಂಡ ರಾಗಿದ್ದ ಹಾಗೂ ಮೊದಲ ಬಾರಿಗೆ ಚುನಾವಣೆ ಎದುರಿಸಿದ ತೇಜಸ್ವಿ ಸೂರ್ಯ ಅವರು ಕಾಂಗ್ರ ಸ್ಸಿನ ಅಭ್ಯರ್ಥಿಯಾಗಿದ್ದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ದಾಖಲೆ ಎಂಬಂತೆ 3.31 ಲಕ್ಷ ಮತಗಳ ಅಂತರದಿಂದ ಸೋಲಿಸಿ ಸಂಸತ್ ಪ್ರವೇಶಿಸಿದರು.

ಸ್ವಪಕ್ಷೀಯರ ಮುನಿಸು ಖೂಬಾ ಲೋಕಸಭಾ ಟಿಕೆಟ್‌ಗೆ ಕತ್ತರಿ ಹಾಕುತ್ತಾ?: ಪುತ್ರನ ಕಣಕ್ಕಿಳಿಸಲು ಸಚಿವ ಖಂಡ್ರೆ ತಯಾರಿ

ಹೀಗಾಗಿಯೇ ಬಿಜೆಪಿಯಿಂದ ಯಾರು ಸ್ಪರ್ಧಿಸಿದರೂ ಗೆಲುವು ಸುಲಭ ಎಂಬ ಮಾತು ಪಕ್ಷದಲ್ಲಿ ಬಲವಾಗಿ ಕೇಳಿಬರುತ್ತಿರುವುದರಿಂ ದಲೇ ಈ ಬಾರಿ ಮತ್ತೊಬ್ಬ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಬಹುದು ಎಂಬ ವದಂತಿ ಹಬ್ಬಿದೆ. ಈ ಬಾರಿ ರಾಮಮಂದಿರ ಉದ್ಘಾಟನೆ ಮತ್ತು ಮೋದಿ ನಾಯಕತ್ವ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಪರ ಅಲೆಯಿದೆ ಎಂಬ ನಂಬಿಕೆಯಿಂದ ರಾಜ್ಯ ಸಭಾ ಸದಸ್ಯರಾಗಿ ಸಚಿವ ಸ್ಥಾನ ಅಲಂಕರಿಸಿರುವವರನ್ನು ಹೆಚ್ಚಿನ ಪ್ರಮಾಣದಲ್ಲಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ಹೈಕಮಾಂಡ್ ಮುಂದಾಗಿದೆ ಎಂಬಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ಪಕ್ಷದ ಹಾಗೂ ಪಕ್ಷದ ಪರವಾಗಿರುವ ಸಂಘಟನೆಗಳ ಹಲವು ಸಭೆ ಸಮಾರಂಭಗಳಲ್ಲಿ ಜೈಶಂಕ‌ರ್ ಅವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿ ರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇದೇ ಕಾರಣದಿಂದ ತೇಜಸ್ವಿ ಸೂರ್ಯ ಅವರ ಬದಲು ಜೈಶಂಕರ್‌ ಅವರಿಗೆ ಟಿಕೆಟ್ ನೀಡಬಹುದು ಎಂಬ ವದಂತಿ ಹಬ್ಬಿದೆ. ಇದು ನಿಜವಾಗುತ್ತದೆಯೇ ಎಂಬುದಕ್ಕೆ ಇನ್ನಷ್ಟು ದಿನ ಕಾಯಬೇಕಾಗಿ ಬರಬಹುದು. ಈ ನಡುವೆ ತೇಜಸ್ವಿ ಸೂರ್ಯ ಅವರು ಚುನಾವಣಾ ತಯಾರಿ ಆರಂಭಿಸಿದ್ದಾರೆ.

ದಾವಣಗೆರೆ ಲೋಕಸಭಾ ಟಿಕೆಟ್ ಯಾರಿಗೆ? ಸತತ 4 ಸಲ ಗೆದ್ದಿರುವ ಸಿದ್ದೇಶ್ವರ ಮತ್ತೆ ಸ್ಪರ್ಧೆ?

ಕಾಂಗ್ರೆಸ್‌ನಲ್ಲಿ ಅಸ್ಪಷ್ಟ ಇದೇ ವೇಳೆ ಕಾಂಗ್ರೆಸ್‌ನಿಂದ ಇಲ್ಲಿಯಾರನ್ನು ಕಣಕ್ಕಿಳಿಸಬೇಕು ಎಂಬುದು ಇನ್ನೂ ಅಸ್ಪಷ್ಟವಾ ಗಿಯೇ ಇದೆ. ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆದಿಲ್ಲ. ಸದ್ಯಕ್ಕೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾ‌ರ್ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ಹೆಸರುಗಳು ಪ್ರಸ್ತಾಪವಾಗಿವೆ.

ಈ ಪೈಕಿ ಸೌಮ್ಯ ರೆಡ್ಡಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದವರು, ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಅತ್ಯಲ್ಪ ಮತಗಳ ಅಂತರದಿಂದ ಸೋತಿದ್ದರು. ಅವರ ತಂದೆ ರಾಮಲಿಂಗಾರೆಡ್ಡಿ ಸಾರಿಗೆ ಸಚಿವರು. ಇನ್ನುಳಿದಂತೆ ಕ್ಷೇತ್ರದಲ್ಲಿ ಬ್ರಾಹ್ಮಣ ಸಮುದಾಯ ಮತದಾರರು ನಿರ್ಣಾಯಕರಾಗಿದ್ದಾರೆ ಎಂಬ ಕಾರಣಕ್ಕಾಗಿ ರಮೇಶ್‌ಕುಮಾರ್‌ ಮತ್ತು ಹೆಸರುಗಳು ಚರ್ಚೆಯಾಗಿವೆ.

Follow Us:
Download App:
  • android
  • ios