ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು
ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಸಚಿವ ಬಿ.ಶ್ರೀರಾಮುಲು ಘೋಷಿಸಿದ್ದಾರೆ. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗ್ರಾಮೀಣ ಕ್ಷೇತ್ರ ನನಗೆ ರಾಜಕೀಯ ಪುನರ್ಜನ್ಮ ನೀಡಿದೆ.
ಬಳ್ಳಾರಿ (ಮಾ.16): ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಸಚಿವ ಬಿ. ಶ್ರೀರಾಮುಲು ಘೋಷಿಸಿದ್ದಾರೆ. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗ್ರಾಮೀಣ ಕ್ಷೇತ್ರ ನನಗೆ ರಾಜಕೀಯ ಪುನರ್ಜನ್ಮ ನೀಡಿದೆ. ಬಹುತೇಕರ ಆಪೇಕ್ಷೆಯ ಮೇರೆಗೆ ನಾನು ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡಿರುವೆ. ಅನೇಕ ವರ್ಷಗಳ ಕಾಲ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಇಂದಿಗೂ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕ ಇದ್ದು, ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧಿಸುವ ನಿಲುವು ತೆಗೆದುಕೊಂಡಿರುವೆ. ಈ ಕುರಿತು ಹೈಕಮಾಂಡ್ ಗಮನಕ್ಕೂ ತಂದಿರುವೆ ಎಂದರು.
ಸಂಡೂರು ಅಥವಾ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದುಕೊಂಡಿದ್ದೆ. ಗ್ರಾಮೀಣದಿಂದ ಸ್ಪರ್ಧಿಸಿದರೆ ಗೆಲ್ಲುವ ಅವಕಾಶಗಳು ಹೆಚ್ಚಾಗಿವೆ ಎಂದು ಗೊತ್ತಾಗಿದ್ದರಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದೇನೆ. ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವೆ. ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ಉಗ್ರ ಸ್ವರೂಪ ಪಡೆದ ಧರಣಿ: ರೈತರು ಪೊಲೀಸರ ಮಧ್ಯೆ ತಳ್ಳಾಟ, ನೂಕಾಟ!
ಮಂಗಳವಾರ ಸಂಜೆ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಸಹ ತನ್ನ ಚುನಾವಣೆ ಅಖಾಡದ ಕ್ಷೇತ್ರ ಕುರಿತು ಪ್ರಸ್ತಾಪಿಸಿದ ಶ್ರೀರಾಮುಲು, ‘ನಾನು ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ನನಗೆ ಸೂಚನೆ ನೀಡಿದ್ದಾರೆ. ಚೇಳ್ಳಗುರ್ಕಿಯ ಎರಿತಾತನ ಸನ್ನಿಧಿಯಲ್ಲಿಯೇ ಈ ಸೂಚನೆ ನನಗೆ ಕೊಟ್ಟಿದ್ದಾರೆ. ಹೀಗಾಗಿ ಅವರ ಸೂಚನೆಯನ್ನು ತಪ್ಪದೆ ಪಾಲಿಸುವೆ. ಗ್ರಾಮೀಣದಿಂದಲೇ ಸ್ಪರ್ಧಿಸುವೆ’ ಎಂದರು.
ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿದ್ಧ: ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೇತನ ಪರಿಷ್ಕರಣೆ ಮಾಡುವುದು ನಿಜ. ನಮಗಿರುವ ಹಣಕಾಸಿನ ಇತಿಮಿತಿಯಲ್ಲಿ ಮಾಡಲಾಗುವುದು ಎಂದು ಹೇಳಿದ್ದೆ. ಆದರೆ, ಸಿಬ್ಬಂದಿ ಒಪ್ಪಿಲ್ಲ. ಫೆಡರೇಶನ್ ಮುಖಂಡರ ಜತೆ ಮಾತನಾಡಿ ಮನವೊಲಿಸುವಂತೆ ಇಲಾಖೆಯ ಎಂಡಿ ಅನ್ಬೂಕುಮಾರ್ ಅವರಿಗೆ ಹೇಳಿರುವೆ. ಇಂದೇ(ಬುಧವಾರ) ಸಿಎಂ ಜತೆ ಸಹ ಮಾತನಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಶ್ರೀರಾಮುಲು ಮಾತು ಕೊಟ್ಟರೆ ಉಳಿಸಿಕೊಳ್ಳುತ್ತಾನೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ್ದೇವೆ. ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲು ಸಹ ನಾವು ಸಿದ್ಧರಿದ್ದೇವೆ. ಮುಷ್ಕರಕ್ಕೆ ಹೋಗುವ ಪರಿಸ್ಥಿತಿ ಬರುವುದಿಲ್ಲ. ಸಾರಿಗೆ ನೌಕರರು ಹಾಗೂ ಸಿಬ್ಬಂದಿಯ ಮುಷ್ಕರದ ಹಿಂದೆ ಯಾರ ಕೈವಾಡವೂ ಇಲ್ಲ. ಇಲಾಖೆಯ ಸಚಿವನಾಗಿ ನನ್ನ ಸಿಬ್ಬಂದಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸಿಬ್ಬಂದಿ ತೃಪ್ತಿಯಾಗುವ ರೀತಿಯಲ್ಲಿಯೇ ಸೂಕ್ತ ನಿಲುವು ತೆಗೆದುಕೊಳ್ಳುತ್ತೇವೆ ಎಂದರು. ಇದೇ ವೇಳೆ ಸಾರಿಗೆ ನೌಕರರ ಮರುನೇಮಕ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶ್ರೀರಾಮುಲು, ಬಿಎಂಟಿಸಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರು ಮಾತ್ರ ಕೆಲವರಿದ್ದಾರೆ.
ಗೋವಿನ ಕೋವಿ ಬಳಿ ರೌಡಿಗಳ ಅಟ್ಟಹಾಸ: ಸ್ಥಳದಲ್ಲೇ ಒಬ್ಬನ ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ
ಅವರನ್ನು ಸಹ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ. ಸಿಬ್ಬಂದಿ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಕಚ್ಚಾಟದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರಕ್ಕೆ ಬಂದ ಬಳಿಕ ನನಗೆ ಒಳ್ಳೆಯ ಅವಕಾಶ ಸಿಕ್ಕೇ ಸಿಗುತ್ತದೆ. ಕಾಂಗ್ರೆಸ್ ಜಗಳ ನೋಡಿ ನೋಡಿ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ನಾಡಿನ ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ. ಹೀಗಾಗಿ ನಾವು ಮತ್ತೆ ಅಧಿಕಾರಕ್ಕೆ ಬಂದು ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತೇವೆ ಎಂದರು.