Karnataka BJP 15ಕ್ಕೂ ಹೆಚ್ಚು ಸಚಿವರ ವಿರುದ್ಧ ದೂರು ಕೊಟ್ಟಿರುವುದು ನಿಜ: ರೇಣುಕಾಚಾರ್ಯ ಬಾಂಬ್

* ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ
* ನಾನು ಹದಿನೈದಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ದೂರು ಕೊಟ್ಟಿದ್ದು ಸತ್ಯ ಎಂದ ರೇಣುಕಾಚಾರ್ಯ
* ತಮ್ಮದೇ ಪಕ್ಷದ ಸಚಿವರ ವಿರುದ್ಧ ರೇಣುಕಾಚಾರ್ಯ ಅಸಮಧಾನ

complained against ministers about non cooperations says bjp mla renukacharya rbj

ಬೆಂಗಳೂರು, (ಜ.30): ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ (CM Basavaraj Bommai) ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ  (Honnali MLA Renukacharya) ಹೊಸ ಬಾಂಬ್ ಸಿಡಿಸಿದ್ದಾರೆ.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಲಿಖಿತ ರೂಪದಲ್ಲಿ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ನಾನು ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೋನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.

Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ

ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಪಕ್ಷನಿಷ್ಠರಿಗೆ ಅವಕಾಶ ಕೊಡಬೇಕು. 15ಕ್ಕೂ ಹೆಚ್ಚು ಸಚಿವರು ನಮ್ಮ ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ. ಕಡೆಪಕ್ಷ ನಮ್ಮನ್ನು ಗೌರವದಿಂದಲೂ ಕಾಣುವುದಿಲ್ಲ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಿದ್ದೇನೆ. ನಾಲ್ಕು ದಿನದೊಳಗೆ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಪಡಿಸುವ ಭರವಸೆ ಇದೆ ಎಂದರು.

ನಮಗೆ ಸಿಎಂ ಬೊಮ್ಮಾಯಿ ಹಾಗೂ ಕಟೀಲ್ ಬಗ್ಗೆ ಅಪಾರ ಗೌರವವಿದೆ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಗಮನಕ್ಕೂ ಇದನ್ನು ತರಲಿದ್ದೇವೆ. ನಾನು ಸರ್ಕಾರ ಅಥವಾ ಸಂಘಟನೆ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಐದು ನಿಮಿಷದಲ್ಲೇ ಭೇಟಿಯಾಗಿ ನಮ್ಮ ಕ್ಷೇತ್ರಗಳ ಕೆಲಸ ಕಾರ್ಯಗಳು, ಅನುದಾನ ಬಿಡುಗಡೆ ಸೇರಿದಂತೆ ಯಾವುದೇ ಕೆಲಸಕಾರ್ಯಗಳನ್ನು ಮಾಡಿಸಿಕೊಳ್ಳಬಹುದಿತ್ತು. ಈಗಲೂ ಕೂಡ ಬೊಮ್ಮಾಯಿ ಅವರು ನಮ್ಮನ್ನು ಅಷ್ಟೇ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಆದರೆ ಕೆಲವು ದುರಹಂಕಾರಿ ಸಚಿವರಿಂದ ಮುಜುಗರ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios