ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ಗೆ ಮತ ನೀಡಿ: ಡಾ.ಜಿ.ಪರಮೇಶ್ವರ್
ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.
ಮಾಗಡಿ (ಏ.15): ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು. ತಾಲೂಕಿನ ಹೆಬ್ಬಳಲು ಸಮೀಪದ ಮುಳ್ಕಟ್ಟಮ್ಮ ಮನೆದೇವರಿಗೆ ಏ.19ರಂದು ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರತಿ ವರ್ಷವೂ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಮನೆ ದೇವರಾದ ಮುಳ್ಕಟ್ಟಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವುದು ವಾಡಿಕೆಯಾಗಿದ್ದು, ಅದೇ ರೀತಿ ಇಂದು ಕೂಡ ನಾಮಪತ್ರ ಸಲ್ಲಿಸಲು ಜಿ.ಪರಮೇಶ್ವರ್ ಆಗಮಿಸಿದ್ದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದ್ದು ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ರಾಮನಗರದ 4 ಕ್ಷೇತ್ರಗಳಲ್ಲೂ ಬಿಜೆಪಿಯದ್ದೇ ಗೆಲುವು: ಸಚಿವ ಅಶ್ವತ್ಥ ನಾರಾಯಣ
ಮಲ್ಲಿಕಾರ್ಜುನ ಖರ್ಗೆ ಸಿಎಂ ವಿಚಾರ ಗೊತ್ತಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಗಳಾದರೆ ಅವರ ಕೆಳಗೆ ನಾನು ಕೆಲಸ ಮಾಡಲು ಸಿದ್ಧನಿದ್ದೇನೆ ಎಂಬ ಹೇಳಿಕೆಗೆ ಜಿ.ಪರಮೇಶ್ವರ್ ಅವರು ಡಿ.ಕೆ.ಶಿವಕುಮಾರ್ ಬಳಿ ಈ ಪ್ರಶ್ನೆಗೆ ಉತ್ತರ ಕೇಳಿ, ನನಗೂ ಅದಕ್ಕೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿ, ದಲಿತ ಸಿಎಂ ಬಗ್ಗೆ ಕೂಗು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಒಂದು ಜಾತಿಗೆ ಸೀಮಿತರಾಗಿಲ್ಲ. ಅವರೀಗ ರಾಷ್ಟ್ರೀಯ ನಾಯಕರಾಗಿದ್ದಾರೆ.
ಸಿಎಂ ಆಗುವ ವಿಚಾರ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಟಿಕೆಟ್ ವಂಚಿತರು ಸಾಕಷ್ಟುಮಂದಿ ಕಾಂಗ್ರೆಸ್ ಟಿಕೆಟ್‌ಗಾಗಿ ಒಲಸೆ ಬರುತ್ತಿದ್ದಾರೆ. ಅವರನ್ನು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಡಿಸಿಎಂ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಬರುವ ಎಲ್ಲ ಪಕ್ಷಗಳ ಮುಖಂಡರಿಗೂ ಕಾಂಗ್ರೆಸ್ ಮನೆಯ ಬಾಗಿಲು ತೆರೆದಿರುತ್ತದೆ. ಎಲ್ಲ ಪಕ್ಷಗಳಲ್ಲೂ ಭಿನ್ನಾಭಿಪ್ರಾಯ ಸಹಜ ಆದರೆ ಅದನ್ನು ನಿಭಾಯಿಸಿಕೊಂಡು ಹೋಗುವುದು ಜಾಣತನ ಎಂದರು.
ವಿರೋಧಿಗಳು ಬಲಿಷ್ಠರಾಗಿರುವ ಕಡೆ ಪ್ರಬಲ ಅಭ್ಯರ್ಥಿ: ಸಿ.ಪಿ.ಯೋಗೇಶ್ವರ್
ಈ ವೇಳೆ ಮಾಜಿ ಡಿಸಿಎಂ ಜೊತೆ ರಾಜ್ಯ ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಸೇರಿದಂತೆ ಮುಳ್ಕಟ್ಟಮ್ಮ ಪಾಳ್ಯದ ಗ್ರಾಮಸ್ಥರು ಮುಖಂಡರು ಭಾಗವಹಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.