3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಗೆ ಅಭಿನಂದನೆ: ಸಿಎಂ ಸಿದ್ದರಾಮಯ್ಯ
ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ. ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿ ಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು(ಜೂ.09): 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ. ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿ ಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಮೋದಿ ಕ್ಯಾಬಿನೆಟ್‌ನಲ್ಲಿ 6 ಮಾಜಿ ಸಿಎಂ, 9 ಹೊಸ ಮುಖ; 72 ಸಚಿವರ ಪಟ್ಟಿ ಇಲ್ಲಿದೆ!
ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎನ್‌ಡಿಎ ಮಿತ್ರ ಇದೀಗ ಹೊಸ ಸರ್ಕಾರ ರಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣವಚನ ತೆಗೆದುಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮೂರನೇ ಅವಧಿಯ ನರೇಂದ್ರ ಮೋದಿ ಸರ್ಕಾರದಲ್ಲಿ ಕರ್ನಾಟಕದಿಂದ ಐವರಿಗೆ ಮಂತ್ರಿಗಿರಿ ಭಾಗ್ಯ ದೊರೆತಿದೆ.