ರಾಯಚೂರು: ಕಾಂಗ್ರೆಸ್ 3ನೇ ಪಟ್ಟಿಯಲ್ಲಿ, ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
ಕಾಂಗ್ರೆಸ್ ಪಕ್ಷ ಹೊರಡಿಸಿದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ, ದೇವದುರ್ಗದಿಂದ ಶ್ರೀದೇವಿ ನಾಯಕ ಮತ್ತು ಸಿಂಧನೂರಿನಿಂದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ನೀಡಿದ್ದು, ರಾಯಚೂರು ನಗರ ಮತ್ತು ಲಿಂಗಸುಗೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯನ್ನು ಬಾಕಿ ಉಳಿಸಿಕೊಂಡಿದೆ.
ರಾಯಚೂರು (ಏ.15) : ಕಾಂಗ್ರೆಸ್ ಪಕ್ಷ ಹೊರಡಿಸಿದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ, ದೇವದುರ್ಗದಿಂದ ಶ್ರೀದೇವಿ ನಾಯಕ ಮತ್ತು ಸಿಂಧನೂರಿನಿಂದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ನೀಡಿದ್ದು, ರಾಯಚೂರು ನಗರ ಮತ್ತು ಲಿಂಗಸುಗೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯನ್ನು ಬಾಕಿ ಉಳಿಸಿಕೊಂಡಿದೆ.
ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನೇ ದಿನೆ ಕಾವು ಪಡೆದುಕೊಳ್ಳುತ್ತಿದೆ. ಜಿಲ್ಲೆ 7 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ್ದು ಅಭ್ಯರ್ಥಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಹಾಲಿ ಶಾಸಕ ಬಸನಗೌಡ ದದ್ದಲ್ ಮತ್ತು ಮಸ್ಕಿಯಿಂದ ಹಾಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರಿಗೆ ಟಿಕೆಟ್ ನೀಡಿತ್ತು. ನಂತರ ಎರಡನೇ ಪಟ್ಟಿಯಲ್ಲಿ ಜಿಲ್ಲೆಗೆ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಇದೀಗ ಶನಿವಾರ ಪ್ರಕಟಗೊಂಡಿರುವ ಮುರನೇ ಪಟ್ಟಿಯಲ್ಲಿ ನಿರೀಕ್ಷೆಯಂತೆಯೇ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಿದ್ದು, ಉಳಿದೆರಡು ಕ್ಷೇತ್ರಗಳಿಗೆ ಟಿಕೆಟ್ ವಿಳಂಬವು ಕಾರ್ಯಕರ್ತರಲ್ಲಿ ಬೇಸರ ತರಿಸುತ್ತಿದೆ.
ರಾಯಚೂರು: ಚುನಾವಣೆ ಪ್ರಚಾರದ ವೇಳೆ ಡಾಬಾಕ್ಕೆ ಹೋಗುವ ಮದ್ಯ ಪ್ರಿಯರೇ ಎಚ್ಚರ..!
ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಹುಡುಕುವುದು ಕಾಂಗ್ರೆಸ್ಗೆ ಸವಾಲಾಗಿ ಮಾರ್ಪಟ್ಟಿದೆ. ಮಾಜಿ ಶಾಸಕ ಸೈಯದ್ ಯಾಸೀನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದು, ಅಂತಿಮ ಪಟ್ಟಿಯಲ್ಲಿ ಸೇರಿದ್ದ ಬೋಸರಾಜು ಹೆಸರಿನ ಜೊತೆಗೆ ಮುಸ್ಲಿಂ ಸಮಾಜದ ಮುಖಂಡರಿಗೆ ಟಿಕೆಟ್ ನೀಡಬೇಕು ಎನ್ನುವ ಸಮಾಲೋಚನೆಯು ಪಕ್ಷದಲ್ಲಿ ಸುದೀರ್ಘವಾಗಿ ಚರ್ಚೆಯಾಗಿದೆ. ಕೊನೆಗೆ ಟಿಕೆಟ್ ಅಲ್ಪಸಂಖ್ಯಾತ ಸಮುದಾಯದ ಪಾಲಾಗಿದೆ ಎನ್ನುವುದು ಇದೀಗ ಪಕ್ಷದಲ್ಲಿ ಹಾಟ್ ಟಾಪಿಕ್ಕ್ಕಾಗಿ ಮಾರ್ಪಟ್ಟಿದೆ.
ಇನ್ನು ಲಿಂಗಸುಗೂರಿನಲ್ಲಿ ಹಾಲಿ ಶಾಸಕ ಡಿ.ಎಸ್.ಹೂಲಗೇರಿ ಜೊತೆಗೆ ಆರ್.ರುದ್ರಪ್ಪ, ಮುರಾರಿ ಕುಟುಂಬಸ್ಥರು ಸೇರಿದಂತೆ ದಲಿತ ಸಮುದಾಯದ ಅಸ್ಪೃಶ್ಯ ಜನಾಂಗಕ್ಕೆ ಟಿಕೆಟ್ ನೀಡಬೇಕು ಎನ್ನುವ ಒತ್ತಾಸೆಯು ಕ್ಷೇತ್ರದಾದ್ಯಂತ ಬಲವಾಗಿ ಕೇಳಿಬರುತ್ತಿರುವುದರಿಂದ ಟಿಕೆಟ್ ಆಯ್ಕೆ ಸಲೀಸಾಗಿಲ್ಲ. ಇದೀಗ ಎರಡ್ಮೂರು ವಾರದಲ್ಲಿಯೇ ಮತದಾನ ಆಗುತ್ತಿರುವ ಹಿನ್ನೆಲೆಯಲ್ಲಿ ಕೈ ಮುಖಂಡರು ಯಾರಿಗೆ ಮನ್ನಣೆ ಕೊಡುತ್ತಾರೆ ಎನ್ನುವ ಕುತೂಹಲವು ಎಲ್ಲೆಡೆ ಮನೆ ಮಾಡಿದೆ.
ರಾಯಚೂರು ಕದನ: ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?