Asianet Suvarna News Asianet Suvarna News

ಕಾಂಗ್ರೆಸ್‌ನದು 45 ಪರ್ಸೆಂಟ್‌ ಸರ್ಕಾರ: ಎಚ್‌.ಡಿ.ಕುಮಾರಸ್ವಾಮಿ

ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್‌ ಸರ್ಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್‌, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಮಾಡುತ್ತಿದೆ. ಹಿಂದಿನ ಸರ್ಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ ಎಲ್‌ಒಸಿ ಕೊಡುವುದಕ್ಕೆ ಈ ಸರ್ಕಾರದಲ್ಲಿ ಶೇ.5ರಷ್ಟುಫಿಕ್ಸ್‌ ಮಾಡಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ

Congress 45 Percent Government in Karnataka Says HD Kumaraswamy grg
Author
First Published Jun 11, 2023, 1:30 AM IST | Last Updated Jun 11, 2023, 1:30 AM IST

ಬೆಂಗಳೂರು(ಜೂ.11): ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದ 675 ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಎಲ್‌ಒಸಿ (ಲೆಟರ್‌ ಆಫ್‌ ಕ್ರೆಡಿಟ್‌) ಬಿಡುಗಡೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಶೇ.5ರಷ್ಟುಪ ರ್ಸೆಂಟೇಜ್‌ ಕೇಳುತ್ತಿದ್ದು, ಹಿಂದಿನ 40 ಪರ್ಸೆಂಟ್‌ ಜೊತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್‌ ಕೊಟ್ಟರೆ ಎಲ್‌ಒಸಿ ಬಿಡುಗಡೆ ಮಾಡುವುದಾಗಿ ಹೇಳುವ ಮೂಲಕ ಈ ಸರ್ಕಾರ ಶೇ. 45 ಪರ್ಸೆಂಟ್‌ ಸರ್ಕಾರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್‌ ಸರ್ಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್‌, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಮಾಡುತ್ತಿದೆ. ಹಿಂದಿನ ಸರ್ಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ ಎಲ್‌ಒಸಿ ಕೊಡುವುದಕ್ಕೆ ಈ ಸರ್ಕಾರದಲ್ಲಿ ಶೇ.5ರಷ್ಟುಫಿಕ್ಸ್‌ ಮಾಡಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಜನ ನಮ್ಮ ಜೊತೆ ಇದ್ದಾರೆ; ನಾವು ಸುಮ್ಮನೆ ಕೂರುವುದಿಲ್ಲ: ಎಚ್‌ಡಿ ದೇವೇಗೌಡ

ಸರ್ಕಾರ ಬಂದ ಪ್ರಾರಂಭದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ತಮಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂಬ ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದರು.

ಹಿಂದಿನ ಟೆಂಡರ್‌ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರ್ಕಾರ 600 ಕೋಟಿ ರು.ಗಿಂತ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು. ಕಳೆದ ಮೇ 6ರಂದು 675 ಕೋಟಿ ರು. ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್‌ಒಸಿ ಬಿಡುಗಡೆಗೆ ಕಾರ್ಯಾದೇಶ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್‌ ಸಂಸದರೊಬ್ಬರು ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಎಂದು ಹೇಳಿದ್ದರಂತೆ ಅವರು. ಯಾಕೆ ಹೇಳಿದ್ದರು, ಯಾರು ಆ ಎಂಪಿ ಯಾರು ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಹೊಸ ಬಾಂಬ್‌

ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್‌ ಸರ್ಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್‌, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಮಾಡುತ್ತಿದೆ. ಹಿಂದಿನ ಸರ್ಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ ಎಲ್‌ಒಸಿ ಕೊಡುವುದಕ್ಕೆ ಈ ಸರ್ಕಾರದಲ್ಲಿ ಶೇ.5ರಷ್ಟುಫಿಕ್ಸ್‌ ಮಾಡಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಅಂತ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios