ಕಾಂಗ್ರೆಸ್‌, ಜೆಡಿಎಸ್‌ ಹೋರಾಟದ ನಾಟಕ ಮಾಡುತ್ತಿದ್ದಾರೆ: ಆರ್‌ ಅಶೋಕ್ ಕಿಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪಥದತ್ತ ಸಾಗಿದೆ. ಅಭಿವೃದ್ಧಿ ಯೋಜನೆಗಳು ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ತಂದುಕೊಡಲಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಲ್ಲಿ ಆಗದಂತಹ ಹಲವಾರು ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದೆ.ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

Congress and JDS are making drama of struggle says r ashok at chitradurga rav

ಚಳ್ಳಕೆರೆ (ಮಾ.18) : ಕಳೆದ ಐದು ವರ್ಷಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಕೆಲ ದಿನಗಳ ಹಿಂದೆ ಲೋಕಾರ್ಪಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಹೆದ್ದಾರಿಗಳಲ್ಲೂ ಟೋಲ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದರೆ ಸರ್ಕಾರಕ್ಕೆ ಕೆಟ್ಟಹೆಸರು ತರಲು ಹೊಟ್ಟೆಕಿಚ್ಚಿನಿಂದ ಜೆಡಿಎಸ್‌, ಕಾಂಗ್ರೆಸ್‌ ಮುಖಂಡರು ಸಾರ್ವಜನಿಕರ ದಾರಿತಪ್ಪಿಸಲು, ಹೋರಾಟ ಮಾಡುವ ನಾಟಕವಾಡುತ್ತಿದ್ದಾರೆ. ಜನತೆಗೆ ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗಲಿದೆ ಎಂದು ರಾಜ್ಯ ಕಂದಾಯ ಸಚಿವ ಆರ್‌.ಅಶೋಕ್‌(R Ashok) ತಿಳಿಸಿದರು.

ಅವರು, ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ(Karnataka BJP govt) ಅಭಿವೃದ್ಧಿ ಪಥದತ್ತ ಸಾಗಿದೆ. ಅಭಿವೃದ್ಧಿ ಯೋಜನೆಗಳು ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ತಂದುಕೊಡಲಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಲ್ಲಿ ಆಗದಂತಹ ಹಲವಾರು ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ವಿಶೇಷವಾಗಿ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿವರ್ತಿಸಿ ಹಣ ನೀಡಲಾಗಿದೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ವಿರೋಧ ಪಕ್ಷಗಳು ಅಂತರಂಗದ ಕಣ್ಣಿನಿಂದ ನೋಡಬೇಕು. ಆದರೆ, ಇವರ ನೋಟ ಹಳದಿ ಕಣ್ಣಿನದ್ದಾಗಿದೆ ಎಂದರು.

ಲಿಂಗಾಯತ ವಿರೋಧಿ ನಾನಲ್ಲ: ರಘು ಆಚಾರ್‌

ಉರಿಗೌಡ ಮತ್ತು ನಂಜೆಗೌಡ(Urigowda Nanjegowda issue) ವಿಚಾರದಲ್ಲಿ ಇತಿಹಾಸದಲ್ಲಿರುವ ವಾಸ್ತಾಂಶದ ಪರಿಸ್ಥಿತಿಯನ್ನು ಅರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿದೆ. ಬಿಜೆಪಿಯ ಆಡಳಿತದಲ್ಲಿ ಯಾವುದೇ ಒಂದು ಜಾತಿ, ಸಮುದಾಯವನ್ನು ಒಲೈಸುವುದಿಲ್ಲ. ಪ್ರಾದೇಶಿಕ ಪಕ್ಷವಾಗಿದ್ದ ಜೆಡಿಎಸ್‌ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಇಂದು ಕೇವಲ ಹಾಸನ ಮತ್ತು ಮಂಡ್ಯಕ್ಕೆ ಸೀಮಿತವಾಗಿದೆ. ಕಾಂಗ್ರೆಸ್‌ ಪಕ್ಷದ ಸ್ಥಿತಿಯೂ ಇದೆಯಾಗಲಿದೆ. ರಾಷ್ಟ್ರದಲ್ಲಿ ನಡೆದ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದೆ. ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ನಡೆಯುವ ಚುನಾವಣೆ ಯಲ್ಲೂ ಸಹ ಕಾಂಗ್ರೆಸ್‌ಗೆ ಗದ್ದಿಗೆ ಏರಲಾಗದು. ಟಿಕೆಟ್‌ ಹಂಚಿಕೆಯ ನಂತರ ಕಾಂಗ್ರೆಸ್‌ ಪಕ್ಷದಲ್ಲಿ ಭಾರಿ ಪ್ರಮಾಣದ ಕಂದಕ ಮುಖಂಡರಲ್ಲಿ ಮೂಡಿ ಚುನಾವಣೆಯಲ್ಲಿ ಸೋಲು ಅನುಭವಿಸಲು ಖಡಾಕಂಡಿತ ಎಂದರು.

ಇತ್ತೀಚಿನ ದಿನಗಳಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಪಕ್ಷದ ಒಳಗಿನ ಜಗಳ ಬೇಸರವನ್ನು ತಣಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷದ ಅನೇಕ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಹೆಚ್ಚುತ್ತಿದೆ. ವಿಶೇಷವಾಗಿ ಪ್ರಧಾನಮಂತ್ರಿಯವರ ರೋಡ್‌ ಶೋ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಆತಂಕ ಉಂಟು ಮಾಡಿದೆ. ಎಲ್ಲಿ ನೋಡಿದರೂ ಮೋದಿಯವರ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಹಾಜರಾಗಿ ಜಯಘೋಷ ಹಾಕುತ್ತಿರುವುದನ್ನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಕ್ಕೆ ಸಹಿಸಲಾಗುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಪರವಾದ ಬಲವಾದ ಅಲೆ ಇದ್ದು, ಈ ಅಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕೊಚ್ಚಿ ಹೋಗಲಿವೆ ಎಂದರು.

ಟಿಪ್ಪು ಎಂದಿಗೂ ಧರ್ಮಾಂಧನಾಗಿಲ್ಲ; ಉರಿಗೌಡ, ನಂಜೇಗೌಡ ಪಾತ್ರಗಳಿಂದ ಇತಿಹಾಸ ತಿರುಚುವ ಯತ್ನ: ಚಂದ್ರಶೇಖರ್ ತಾಳ್ಯ

Latest Videos
Follow Us:
Download App:
  • android
  • ios