'ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌, ಜೆಡಿಎಸ್‌ಗೆ ಠೇವಣಿ ಸಹ ಸಿಗಲ್ಲ'

*  ಮಹಿಳಾ ದಿನಾಚರಣೆಯಲ್ಲಿ ಪತ್ನಿ ಜೊತೆಗೆ ಯಲಹಂಕ ಶಾಸಕ ಸಖತ್‌ ಸ್ಟೇಪ್‌
*  ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರ ಕಚ್ಚಾಟ
*  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತ 
 

Congress and JDS Don't Get Deposit in Bye Election Says SR Vishwanath grg

ಬೆಂಗಳೂರು(ಅ.25):  ಕೆಲವೇ ತಿಂಗಳಲ್ಲಿ ನಡೆಯುವ ಮಾದನಾಯಕನಹಳ್ಳಿ ನಗರಸಭೆ ಚುನಾವಣೆಯಲ್ಲಿ(Election) ಮಹಿಳೆಯರಿಗೆ(Women)ಸಿಂಹಪಾಲು ನೀಡಲಾಗುವುದು ಎಂದು ಶಾಸಕ ಎಸ್‌.ಆರ್‌.ವಿಶ್ವನಾಥ್‌(SR Vishwanath) ಹೇಳಿದ್ದಾರೆ. 

ಪೀಣ್ಯ ದಾಸರಹಳ್ಳಿ ಸಮೀಪದ ಮಾದಾವರದಲ್ಲಿ ಬಿಜೆಪಿ(BJP) ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳೆಯರ ದಿನಾಚರಣೆಗೆ(World Women's Day) ದಂಪತಿ ಸಮೇತ ಚಾಲನೆ ನೀಡಿದ ಶಾಸಕರು, ಹಾನಗಲ್‌(Hanagal) ಮತ್ತು ಸಿಂದಗಿ(Sindagi)ಉಪಚುನಾವಣೆಯಲ್ಲಿ(Byelection) ಕಾಂಗ್ರೆಸ್‌(Congress) ನಾಯಕರ ಕಚ್ಚಾಟದಿಂದ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌(JDS) ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಪೆಟ್ರೋಲ್‌(Petrol) ಬೆಲೆ 200 ರು. ಆಗಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಟ್ವೀಟ್‌ಗೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ದರ ಎಷ್ಟಿತ್ತು ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸಮಯದಲ್ಲಿ ನಿಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ 30 ರು.ಗೆ ಪೆಟ್ರೋಲ್‌ ಕೊಡುತ್ತಿದ್ರಾ ಎಂದು ತಿರುಗೇಟು ನೀಡಿದರು.

ಉಪ ಚುನಾವಣೆ : ' ಬಿಜೆಪಿ ಅಭ್ಯರ್ಥಿ ಗೆಲ್ಲುವುದಿಲ್ಲ ಎನ್ನುವುದು ಪಕ್ಕಾ '

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ(International Market) ಕಚ್ಚಾತೈಲ ಬೆಲೆ ಏರಿಳಿತದಿಂದ ಪೆಟ್ರೋಲ್‌ ಮತ್ತು ಡೀಸೆಲ್‌(Diesel) ಬೆಲೆಗಳು ಏರಿಕೆಯಾಗಿವೆ. ಇದು ಶಾಶ್ವತ ಅಲ್ಲ, ಮುಂದಿನ ದಿನಗಳಲ್ಲಿ ಕಡಿಮೆ ಆಗಲಿದೆ ಎಂದರು.
ಇದೇ ವೇಳೆ ವಿಶ್ವನಾಥ್‌ ದಂಪತಿ, ಬಿಜೆಪಿ ಮುಖಂಡ ಗೋವಿಂದಪ್ಪ ದಂಪತಿ ನೃತ್ಯ ಮಾಡುವ ಮೂಲಕ ನೆರದಿದ್ದವರ ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಡಾ.ವಾಣಿಶ್ರೀ ವಿಶ್ಬನಾಥ್‌, ಲಲಿತಮ್ಮ ಗೋವಿಂದಪ್ಪ, ಹನುಮಯ್ಯ, ರಾಮಕೃಷ್ಣ ಸೇರಿದಂತೆ ಹಲವಾರು ಸ್ತ್ರೀ ಶಕ್ತಿ ಸಂಘಗಳ ಸಾವಿರಾರು ಸದಸ್ಯರು ಪಾಲ್ಗೊಂಡಿದ್ದರು.

ಹಾನಗಲ್‌ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು: 

ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು: ನಿಯಾಜ್ ಶೇಖ್ (ಜೆಡಿಎಶ್), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್ಎಸ್.ದೊಡ್ಡ ಲಿಂಗಣ್ಣನವರ (ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ (ಪಕ್ಷೇತರ) 

ಸಿಂದಗಿಯಲ್ಲಿ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು: 

ಇನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಅಶೋಕ ಮನಗೊಳಿ(ಕಾಂಗ್ರೆಸ್‌), ರಮೇಶ್ ಬೂಸನೂರ್(ಬಿಜೆಪಿ), ನಜಿಯಾ ಅಂಗಡಿ(ಜೆಡಿಎಸ್), ಡಾ. ಸುನಿಲ್‌ಕುಮಾರ್‌ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮಿತಿ) ಹಾಗೂ ಜಿಲಾನಿ ಗುಡುಸಾಬ್‌ಮುಲ್ಲಾ, ದೀಪಿಕಾ ಎಸ್‌. ಪಡಸಲಗಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. 

ಹಾನಗಲ್‌ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದ್ದು ನ.2ರಂದು ಫಲಿತಾಂಶ ಹೊರಬೀಳಲಿದೆ. 
 

Latest Videos
Follow Us:
Download App:
  • android
  • ios