ವಿಧಾನಸಭೆ ಉಪ ಚುನಾವಣೆ ಜೊತೆಗೆ ಎರಡು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೂ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರುಗಳನ್ನು ಘೋಷಣೆ ಮಾಡಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರುಗಳು ಪ್ರಕಟವಾಗಿದೆ.

ಬೆಂಗಳೂರು, [ಅ.31]: ರಾಜ್ಯದಲ್ಲಿ ಡಿಸೆಂಬರ್​ 5ರಂದು ನಡೆಯಲಿರುವ 15ಕ್ಷೇತ್ರಳ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್​ ವಾಸ್ನಿಕ್​​ ಇಂದು [ಗುರುವಾರ] ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದರು.

Add Asianetnews Kannada as a Preferred SourcegooglePreferred

15ಕ್ಷೇತ್ರಳ ಪೈಕಿ ಸದ್ಯ 8 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದುಮ ಇನ್ನುಳಿದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಬಾಕಿ ಇದೆ.

Breaking: ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನಸಭೆ ಉಪ ಚುನಾವಣೆ ಜೊತೆಗೆ ಎರಡು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೂ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. 

15 ವಿಧಾನಸಭೆ ಉಪಚುನಾವಣೆಗೆ ಡಿ.5ರಂದು ಮತದಾನ ನಡೆಯಲಿದ್ದು, ಡಿ.9ಕ್ಕೆ ಫಲಿತಾಂಶ ಹೊರಬೀಳಲಿದೆ. ಆದ್ರೆ, ಮೇಲೆ ತಿಳಿಸಲಾಗಿರುವ ಎರಡು ವಿಧಾನಪಡಿಷತ್ ಕ್ಷೇತ್ರಗಳಿಗೆ 2020ರ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. 

* ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಡಾ. ಆರ್. ಎಂ. ಕುಬೇರಪ್ಪ 
* ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು ಅಭ್ಯರ್ಥಿಗಳು