ಹೊರ ಜಿಲ್ಲೆಗಳಿಂದ ಜನರನ್ನು ಕರೆತಂದು ಕಾಂಗ್ರೆಸ್ ಪ್ರಚಾರ! ಒಬ್ಬರಿಗೆ 1000 ರೂ. ಹಣ ಹಂಚಿಕೆ!
ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಹೊರ ಜಿಲ್ಲೆಗಳಿಂದ ಜನರನ್ನು ಕರೆತಂದು ಹಣ ಹಂಚಿಕೆ ಮಾಡಲಾಗಿದೆ.
ತುಮಕೂರು (ಮೇ 07): ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಹೊರಜಿಲ್ಲೆಗಳಿಂದ ಜನರನ್ನು ಕರೆತಂದು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದು, ಕಾಂಗ್ರೆಸ್ ಗ್ಯಾರಂಟಿ ಕಾರ್ಡು ಕೊಡುವ ಜೊತೆಗೆ ತಲಾ 1 ಸಾವಿರ ರೂ. ಹಣವನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಕುಣಿಗಲ್ ಕಾಂಗ್ರೆಸ್ ಅಭ್ಯರ್ಥಿ ಡಾ.ರಂಗನಾಥ್ ಪರವಾಗಿ ಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕುಣಿಗಲ್ ತಾಲ್ಲೂಕಿನ ಕಗ್ಗೆರೆಯಲ್ಲಿ ಎರಡು ಬಸ್ ಸೀಜ್ ಮಾಡಲಾಗಿದೆ. ಖಾಸಗಿ ಬಸ್ ಗಳಲ್ಲಿ ಬಂದ 200 ಕ್ಕೂ ಹೆಚ್ಚು ಜನರನ್ನ ಬಿಜೆಪಿ ಕಾರ್ಯಕರ್ತರು ಹಿಡಿದಿಟ್ಟು, ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಖಾಸಗಿ ಬಸ್‌ಗಳಲ್ಲಿ ಬಂದಿದ್ದ ಹೊರ ಜಿಲ್ಲೆಯ ಜನರು ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿಕೆ ಮಾಡುವ ಜೊತೆಗೆ, ಮತದಾರರಿಗೆ ತಲಾ 1 ಸಾವಿರ ರೂ. ಹಣವನ್ನು ಹಂಚಿಕೆ ಮಾಡುತ್ತಿದ್ದರು ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಮಾಜಿ ಸಿಎಂ ಸಹೋದರಿಗೆ ಐಟಿ ಶಾಕ್: ಕಾಂಗ್ರೆಸ್ ಮುಖಂಡನ ಮನೆಯಲ್ಲಿ 2.8 ಕೋಟಿ ನಗದು
16 ಬಾಕ್ಸ್ ತುಂಬಾ ಗ್ಯಾರಂಟಿ ಕಾರ್ಡ್: ಇನ್ನು ಹೊರ ಜಿಲ್ಲೆಯ ಜನರನ್ನು ಕರೆತಂದಿದ್ದ ಖಾಸಗಿ ಬಸ್‌ಗಳಲ್ಲಿ 16 ಬಾಕ್ಸ್ ಗಳ ತುಂಬ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್, 50 ಮಾದರಿ ಮತಯಂತ್ರಗಳನ್ನು ಸೀಜ್ ಮಾಡಲಾಗಿದೆ. ಈ ವೇಳೆ ಡಾ.ರಂಗನಾಥ್ ಭಾವಚಿತ್ರವುಳ್ಳ ಕಾರ್ಡ್‌ಗಳನ್ನು ಸೀಜ್ ಮಾಡಲಾಗಿದೆ. ಹಣವನ್ನು ಹಂಚುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದವರನ್ನು ಹಿಡಿದು ಚುನಾವಣಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಈ ಕುರಿತು ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಚುನಾವಣಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ.ರಂಗನಾಥ್ ಸೇರಿ 11 ಜನರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.
ಯಾದಗಿರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಣ ಹಂಚಿಕೆ: ಭಾಲ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಮಗನಿಂದ ದುಡ್ಡು ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರಕಾಶ್ ಖಂಡ್ರೆ ಮಗ ಗುರುಪ್ರಸಾದ್, ಸೊಸೆಯಿಂದ ಮತದಾರರಿಗೆ ಹಣ ಹಂಚಿಕೆ. ದುಡ್ಡು ಕೊಟ್ಟು ಕಮಲ ಚಿನ್ಹೆಗೆ ಮತ ಹಾಕುವಂತೆ ಆಣೆ-ಪ್ರಮಾಣ ಮಾಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ದುಡ್ಡು ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಯಾದಗಿರಿ ಜೆಡಿಎಸ್ ಅಭ್ಯರ್ಥಿಯಿಂದ ಹಣ ಚಿಕೆ ಹಂಆರೋಪ: ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ ಎಪಿಎಂಸಿ ಯಾರ್ಡ್ ನಲ್ಲಿರುವ ತಮ್ಮ ಅಂಗಡಿಯಲ್ಲಿ ಹಣ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.
ಸಿದ್ದರಾಮಯ್ಯನ ಮಗ ವಿಕ್ಟೋರಿಯಾ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ ನಡೆಸ್ತಾರೆ!
ಪೊಲೀಸರಿಂದ ಮತದಾರರ ವಿಚಾರಣೆ: ಮತದಾರರನ್ನ ಸೇರಿಸಿ ಹಣ ಹಂಚಲಾಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಲಲಿತಾ ಅನಪುರ ಅವರಿಂದ ದೂರು ದಾಖಲಾಗಿತ್ತು. ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪ್ಯಾರಾ ಮಿಲಿಟರಿ ಪೋರ್ಸ್ ಹಾಗೂ ಪೊಲೀಸರು ಸ್ಥಳದಲ್ಲೇ ಇದ್ದ ಜನರನ್ನು ವಿಚಾರಣೆ ನಡೆಸಿದರು. ಅಂಗಡಿಯ ಪ್ರತಿಯೊಂದು ಕೋಣೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯಾವುದೇ ಹಣ ಪತ್ತೆಯಾಗದ ಕಾರಣ ಅಧಿಕಾರಿಗಳು ವಾಪಸ್ ಹೋದರು ಎಂದು ತಿಳಿದುಬಂದಿದೆ.