Asianet Suvarna News Asianet Suvarna News

ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ, ಮೀಸಲಾತಿ ಬದಲಾಯಿಸಲೂ ಆಗಲ್ಲ: ಪ್ರಲ್ಹಾದ್ ಜೋಶಿ ಟಾಂಗ್

ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಮೀಸಲಾತಿಯಲ್ಲಿ ಬದಲಾವಣೆ ತರಲಾಗಿದ್ದು, ಲಿಂಗಾಯಿತರಿಗೆ, ಒಕ್ಕಲಿಗರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರಕ್ಕೂ ಬರಲ್ಲ, ಮೀಸಲಾತಿ ಬದಲಾಯಿಸುವುದಕ್ಕೂ ಆಗುವುದಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟಾಂಗ್‌ ನೀಡಿದರು.

Congress cannot come to power  and  nor can reservation be changed says union minister pralhad joshi at hubballi rav
Author
First Published Mar 28, 2023, 3:13 AM IST | Last Updated Mar 28, 2023, 3:13 AM IST

ಹುಬ್ಬಳ್ಳಿ (ಮಾ.28) : ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಮೀಸಲಾತಿಯಲ್ಲಿ ಬದಲಾವಣೆ ತರಲಾಗಿದ್ದು, ಲಿಂಗಾಯಿತರಿಗೆ, ಒಕ್ಕಲಿಗರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರಕ್ಕೂ ಬರಲ್ಲ, ಮೀಸಲಾತಿ ಬದಲಾಯಿಸುವುದಕ್ಕೂ ಆಗುವುದಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Pralhad joshi) ಟಾಂಗ್‌ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬಹು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿ(Inner reservation)ಯನ್ನು ಜಾರಿಗೆ ತಂದಿದ್ದೇವೆ. ಕಾಂಗ್ರೆಸ್‌ ಕಾಲದಲ್ಲೇ ಆಯೋಗ ರಚಿಸಲಾಗಿತ್ತು. ಆದರೆ, ಅವರ ಅಧಿಕಾರದಲ್ಲಿ ಜಾರಿಗೆ ತರಲಿಲ್ಲ. ಈಗ ನಾವು ತಂದಿರುವುದಕ್ಕೆ ಅವರಿಗೆ ಹೊಟ್ಟೆಕಿಚ್ಚು ಆಗುತ್ತಿದೆ. ಅದಕ್ಕೆ ತಾವು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿಯನ್ನು ರದ್ದು ಮಾಡ್ತೇವೆ ಎನ್ನುತ್ತಿದ್ದಾರೆ. ಒಕ್ಕಲಿಗರು, ಲಿಂಗಾಯಿತರಿಗೆ ಮೀಸಲಾತಿ ನೀಡಿರುವುದಕ್ಕೆ ಕಾಂಗ್ರೆಸ್‌ ಸಹಮತ ಇಲ್ಲ ಎನ್ನುವುದು ಇದರಲ್ಲಿಯೇ ತಿಳಿಯುತ್ತದೆ ಎಂದರು.

 

ಕಾಂಗ್ರೆಸ್‌ ಈಗ ಡೇಟ್‌ ಬಾರ್‌ ಆದ ಪಕ್ಷ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj ommai) ಶ್ರೀಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರ ಆರೋಪ ಬಾಲಿಶನತನದಿಂದ ಕೂಡಿದೆ. ಭಾರತೀಯ ಹಿಂದೂ ಸಂಸ್ಕೃತಿಯನ್ನು ಬಿಜೆಪಿ ಪಾಲಿಸಿಕೊಂಡು ಬಂದಿದೆ. ಕಾಂಗ್ರೆಸ್‌ನವರು ಮಾಡುತ್ತಿರುವ ಆರೋಪ ಶ್ರೀಗಳಿಗೆ ಮಾಡುತ್ತಿರುವ ಅಪಮಾನವಾಗಿದೆ. ಧಮ್ಕಿ ಹಾಕುವುದು ಡಿ.ಕೆ. ಶಿವಕುಮಾರ ಹಾಗೂ ಹೊಡೆಯುವುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಂಸ್ಕೃತಿಯಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಬಿಜೆಪಿ ಸರ್ಕಾರ(BJP Government)ವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಶಾಸಕರು ಸೇರಿ ಹೋರಾಟ ಮಾಡಿದ್ದರು. ಪಂಚಮಸಾಲಿ ಸಮುದಾಯ(Panchamasali community)ದ ಹೋರಾಟ ಮುಂದುವರಿಸುವ ಯೋಚನೆ ಕಾಂಗ್ರೆಸ್‌ನವರದಾಗಿತ್ತು. ಆದರೆ, ಬಿಜೆಪಿ ಸರ್ಕಾರ ಎಲ್ಲ ಮೀಸಲಾತಿ ಸಮಸ್ಯೆ ಪರಿಹರಿಸಿ ತಾರ್ಕಿಕ ಅಂತ್ಯ ಹಾಡಿದೆ ಎಂದರು.

ಎಲ್ಲರಿಗೂ ಮೀಸಲಾತಿ ಹೆಚ್ಚಿಸುವ ತಾಕತ್ತು ಕಾಂಗ್ರೆಸ್‌ನವರಿಗೆ ಇರಲಿಲ್ಲ. ಅವರಿಗೆ ಬದ್ಧತೆ ಇರಲಿಲ್ಲ. ಒಳಮೀಸಲಾತಿ ಜಾರಿ, ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಸಮಸ್ಯೆ ಬಗೆಹರಿಸಲಿಲ್ಲ. ತಮ್ಮ ಕಾಲದಲ್ಲಿ ಅವೈಜ್ಞಾನಿಕವಾಗಿ ಮೀಸಲಾತಿ ನೀಡಿದ್ದರು. ಕಾಂಗ್ರೆಸ್‌ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮುಸ್ಲಿಮರ ಮೀಸಲಾತಿಯನ್ನು ನಾವು ರದ್ದು ಮಾಡಿದ್ದೇವೆ. ಬಿಜೆಪಿ ನಿರ್ಣಾಯಕ ಸರ್ಕಾರವಾಗಿದೆ. ನಮ್ಮ ಪಕ್ಷದ ಬದ್ಧತೆ ಸ್ಪಷ್ಟವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ(Siddaramaiah) ಅಧಿಕಾರಕ್ಕೆ ಬಂದರೆ ಮೀಸಲಾತಿ ಸ್ಥಗಿತ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಅವರಿಗೆ ತಾವು ಅಧಿಕಾರಕ್ಕೆ ಬರುವುದಿಲ್ಲ ಎಂದು ಗ್ಯಾರಂಟಿಯಾಗಿ ಗೊತ್ತಿದೆ. ಅದಕ್ಕೆ ಹಾಗೆ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇಲ್ಲಿಯವರೆಗೆ ಕ್ಷೇತ್ರದ ಆಯ್ಕೆ ಮಾಡಲು ಆಗಿಲ್ಲ. ಕಳೆದ ಬಾರಿ ಬಾದಾಮಿಯಲ್ಲಿ 1500 ಮತ ಹೆಚ್ಚು ಬೀಳದಿದ್ದರೆ ಅವರು ಮಾಜಿ ಮುಖ್ಯಮಂತ್ರಿ ಅಲ್ಲ, ಮಾಜಿ ಶಾಸಕರಾಗಿರುತ್ತಿದ್ದರು. 11 ಬಜೆಟ್‌ ಮಂಡಿಸಿದವರಿಗೆ ಈಗ ಸ್ಪರ್ಧಿಸಲು ಒಂದು ಕ್ಷೇತ್ರವಿಲ್ಲ. ಗೆಲ್ಲುವ ವಿಶ್ವಾಸವೂ ಅವರಲ್ಲಿ ಇಲ್ಲವಾಗಿದೆ ಎಂದು ಟೀಕಿಸಿದರು.

 

Karnataka election 2023: ಸೋಲಿನ ಭೀತಿಯಿಂದ ಕಾಂಗ್ರೆಸ್‌-ಎಸ್‌ಡಿಪಿಐ ಒಪ್ಪಂದ : ಪ್ರಲ್ಹಾದ್ ಜೋಶಿ

ಸಿದ್ದರಾಮಯ್ಯ ಅವರು ಪರಮೇಶ್ವರ, ಮುನಿಯಪ್ಪ ಹಾಗೂ ಖರ್ಗೆ ಅವರಿಗೆ ಸತತವಾಗಿ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹಳೆ ಪರಂಪರೆಯೇ ಇದ್ದು, ದಲಿತರ ಹೆಸರು ಹೇಳಿ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios