ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಸ್ಕೀಂ ಬಗ್ಗೆ ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ.
ಬೆಂಗಳೂರು (ಮೇ.23): ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಸ್ಕೀಂ ಬಗ್ಗೆ ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್‌ನಿಂದ, ಕಂಪನಿಯಿಂದ ಬಂದವರ ರೀತಿ ಹೋಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್‌ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ ಎಂದರು.
ಯುವತಿಯ ಸಾವಿಗೆ ಬಿಬಿಎಂಪಿ ನಿರ್ಲಕ್ಷ್ಯ ಕಾರಣ: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವರು ಮಾಡಲಿಲ್ಲ ಎಂದರು.
ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ: ಸಚಿವ ಮುನಿಯಪ್ಪ
ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆಮರಗಳು ಬಿದ್ದಿವೆ. ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಮುಂದಿನ ಐದು ದಿನ ಹೀಗೆಯೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆದ್ಯತೆಯಿಂದ ಮುಖ್ಯಮಂತ್ರಿ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು ಕೆಲಸ ಮಾಡೋರು ಮಾಡುತ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಲಿಂಗಾಯತರಿಗೆ ಕಾಂಗ್ರೆಸ್ ಯಾವ ಹುದ್ದೆ ಕೊಡುತ್ತೆ?: ಕಾಂಗ್ರೆಸ್ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನಕ್ಕೂ ಮೊದಲು ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆಂದು ಕಾದು ನೋಡೋಣ ಎಂದರು.
ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಟಾಪಟಿ!
ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರು ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಆಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ. ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟುಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸುವ ಮೂಲಕ ಜನರ ಸೇವೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.
