ಸೂಸೈಡ್‌ ಕೇಸ್‌: ಈಶ್ವರಪ್ಪ ಬಂಧಿಸಬೇಕೆಂದು ಒತ್ತಾಯಿಸಿ ಎಡಿಜಿಪಿಗೆ ದೂರು ನೀಡಿದ ಕಾಂಗ್ರೆಸ್

ಡೆತ್‌ನೋಟ್ ಬರೆದು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

Congress complains to ADGP demanding Eshwarappas arrest on santosh patil suicide case gvd

ಬೆಂಗಳೂರು (ಏ.13): ಡೆತ್‌ನೋಟ್ ಬರೆದು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಸಾವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. 40 ಪರ್ಸೆಂಟ್ ಕಮೀಷನ್ ಡಿಮ್ಯಾಂಡ್ ಮಾಡಿರುವುದಾಗಿ ಆರೋಪಿಸಿ ಕಳೆದ ಒಂದು ತಿಂಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ (PM Narendra Modi) ಪತ್ರ ಬರೆದಿದ್ದರು‌. ಅಲ್ಲದೆ ರಾಜ್ಯ ಸರ್ಕಾರದ ಗಮನಕ್ಕೂ ತಂದಿದ್ದರು. ಈ ಬೆಳವಣಿಗೆ ಮಧ್ಯೆಯೇ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ್ ಲಾಡ್ಜ್‌ವೊಂದರಲ್ಲಿ ಡೆತ್‌ನೋಟ್ ಬರೆದು ಸುಸೈಡ್ ಮಾಡಿಕೊಂಡಿದ್ದಾರೆ. 

ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಅವರೇ‌ ನೇರ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ (Congress) ಆರೋಪಿಸಿ ಎಡಿಜಿಪಿಗೆ (ADGP) ದೂರು ನೀಡಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಕಾರಣ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದರೂ ಪೊಲೀಸರು ಇನ್ನು ಬಂಧಿಸಿಲ್ಲ. ಆರಾಮಾಗಿ ಸಚಿವರು ಓಡಾಡಿಕೊಂಡಿದ್ದಾರೆ.‌ ಈ ಸಂಬಂಧ ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಲಾಗಿದೆ.

ಬೊಮ್ಮಾಯಿ ಸರ್ಕಾರಕ್ಕೆ ಸೂಸೈಡ್‌ ಇಕ್ಕಟ್ಟು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ

ರಾಹುಲ್‌ ಗಾಂಧಿ ನಕಲಿ ಸಹಿ ಮಾಡಿದ್ದ ಸಂತೋಷ್‌: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ಗೂ ಬಿಜೆಪಿಗೂ ಸಂಬಂಧ ಇಲ್ಲ. ಆತನೊಬ್ಬ ವಂಚ​ಕ. ಐದು ವರ್ಷಗಳ ಹಿಂದೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವ​ರ ಬೋಗಸ್‌ ಸಹಿ ಮಾಡಿ ಹಿರೇಬಾಗೇವಾಡಿ ಜಿಲ್ಲಾ ಪಂಚಾ​ಯತಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಕೇಳಿದ್ದ ಎಂದು ಬೆಳ​ಗಾವಿ ಗ್ರಾಮೀಣ ಬಿಜೆಪಿ ಮಂಡಲ ಅಧ್ಯಕ್ಷ ಧನಂಜಯ ಜಾಧವ್‌ ಆರೋ​ಪಿ​ಸಿ​ದ್ದಾ​ರೆ. ಸುದ್ದಿ​ಗಾ​ರರ ಜತೆಗೆ ಮಾತ​ನಾಡಿ, ಸಂತೋಷ್‌ ವರ್ಕ್ ಆರ್ಡರ್‌ ಇಲ್ಲದೆ 12 ಗುತ್ತಿಗೆದಾರರಿಂದ ಹಿಂಡಲಗಾ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಮಾಡಿಸಿದ್ದಾನೆ. 

ನಿಮಗೆ ಬಿಲ್‌ ಮಂಜೂರು ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಗುತ್ತಿ​ಗೆ​ದಾ​ರ​ರಿಂದ 92 ಲಕ್ಷ ಹಣ ಪಡೆದಿದ್ದಾನೆ. ಆ ಎಲ್ಲ ಗುತ್ತಿಗೆದಾರರು ನನ್ನ ಬಳಿ ಬಂದಿದ್ದರು. ಅವರಿಗೆ ಪೊಲೀಸರಿಗೆ ದೂರು ನೀಡಲು ಹೇಳಿದ್ದೆ. ಆತ ಮೂಲತಃ ಬಡಸ ಕೆ.ಎಚ್‌. ಗ್ರಾಮದವನಾಗಿದ್ದು, ಬೆಳಗಾವಿಯ ವಿಜಯನಗರದಲ್ಲಿ ಆತನ ಎರಡು ಮನೆಗಳಿವೆ. ಸಚಿವ ಕೆ.ಎಸ್‌.ಈಶ್ವರಪ್ಪ ಗಮನಕ್ಕೆ ಈ ಎಲ್ಲ ವಿಷಯವನ್ನು ತಂದಿದ್ದು, ಅವರು ವಿಚಾರಿಸುತ್ತಿದ್ದಾರೆ. ಈಗ ನಡೆದಿರುವ ಘಟನೆಗಳ ಹಿಂದೆ ಯಾರೋ ಒಬ್ಬ ದೊಡ್ಡ ವ್ಯಕ್ತಿ ಇದ್ದಾರೆ ಎಂದು ಧನಂಜಯ ಜಾಧವ್‌ ಹೇಳಿ​ದ​ರು.

ಪ್ರಧಾನಿಗೆ ಪತ್ರ ಬರೆದಿದ್ದ ಸಂತೋಷ: ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಪಾಟೀಲ ಅವರು ಈ ಹಿಂದೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಕೆಲವು ಆರೋಪಗಳನ್ನು ಮಾಡಿ ಪ್ರಧಾನಿ, ಸಿಎಂ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮಾ.13, 2022ರಂದು ಪತ್ರ ಬರೆದಿದ್ದರು. ಅಲ್ಲದೆ, ಸಂತೋಷ ಗೊತ್ತಿಲ್ಲ ಎಂದಿದ್ದ ಈಶ್ವರಪ್ಪ ವಿರುದ್ಧ ಕೂಡ ಕಿಡಿಕಾರಿದ್ದ ವಿಡಿಯೋ ಕೂಡ ಬಿಡುಗಡೆ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋದಲ್ಲಿ ಕಾಮಗಾರಿ ವರ್ಕ್ ಆರ್ಡರ್‌, ಪೇಮೆಂಟ್‌ ಮಾಡಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಕ್ಕೆ ಸಚಿವ ಈಶ್ವರಪ್ಪನವರೇ ಹೊಣೆ ಎಂದು ಸಂತೋಷ ಮೊದಲೇ ಎಚ್ಚರಿಕೆ ನೀಡಿದ್ದ.  ಈ ಕುರಿತು 2022, ಮಾ.29 ರಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ. ಈ ವಿಡಿಯೋ ಜೊತೆಗೆ ಬಿಜೆಪಿ ಮೆಂಬರ್‌ಶಿಪ್‌ ಕಾರ್ಡ್‌ ಬಿಡುಗಡೆಗೊಳಿಸಿದ್ದರು. 

Chikkamagaluru: ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಕಂಡುಬಂದಿಲ್ಲ: ಸಿ.ಟಿ.ರವಿ

ನಿಮ್ಮ ಮೇಲೆ ವಿಶ್ವಾಸವಿಟ್ಟು ಕಾಮಗಾರಿ ಪೂರ್ಣ ಮಾಡಿದ್ದೇನೆ. ವರ್ಕ್ ಆರ್ಡರ್‌, ಪೇಮೆಂಟ್‌ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರಿಂದ ನಾನು ಕಾಮಗಾರಿ ಮಾಡಿದ್ದೇನೆ. ಆದರೆ, ಸುಮ್ಮನೆ ನುಣುಚಿಕೊಳ್ಳುವ ಸಲುವಾಗಿ ಅವನು ಯಾರು ಗೊತ್ತಿಲ್ಲ ಎನ್ನುವುದು ಸರಿಯಲ್ಲ ಎಂದೂ ಸಚಿವ ಈಶ್ವರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ್ದರು. 108 ಕಾಮಗಾರಿಗಳನ್ನು ಮಾಡಬೇಕಾದರೆ ಯಾರಾದರೂ ಸುಮ್ಮನಿರುತ್ತಾರಾ? ಮೇಲಿಂದ ದೇವರು ಬಂದು ಮಾಡಿಸುತ್ತಾರಾ? ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಪಕ್ಷಕ್ಕೂ ಒಳ್ಳೆಯ ಹೆಸರು ಬಂದಿದೆ. ಸುಮ್ಮನೆ ನುಣುಚಿಕೊಳ್ಳಲು, ಇದರಿಂದ ಪಾರಾಗಬೇಕು ಎಂದು ಏನೇನೋ ಹೇಳಿಕೆ ನೀಡಬೇಡಿ. ತಮ್ಮ ಹಿರಿತನಕ್ಕೆ ಇದು ಒಳ್ಳೆಯದಲ್ಲ. ನಾನು ಕೂಡ ಪಕ್ಷದ ಕಾರ್ಯಕರ್ತನಾಗಿದ್ದು, ನನ್ನ ಮೆಂಬರ್‌ಶಿಪ್‌ ಕಾರ್ಡ್‌ ಸಹ ಕಳುಹಿಸಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದರು.

Latest Videos
Follow Us:
Download App:
  • android
  • ios