ಸಿಎಂ ಆಗಲು 1000 ಕೋಟಿ ರು. ಹೇಳಿಕೆ: ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು
ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ. ಅದರ ಭಾಗವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಯತ್ನಾಳ್ ಅವರನ್ನು ಕರೆದು ವಿಚಾರಣೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಇಡಿ, ಐಟಿ ಅಧಿಕಾರಿಗಳು ಯತ್ನಾಳ್ ಹೇಳಿಕೆಯನ್ನು ಗಮನಿಸಬೇಕು ಎಂದು ಆಗ್ರಹಿಸಿದ ವಿ.ಎಸ್. ಉಗ್ರಪ್ಪ
ಬೆಂಗಳೂರು(ಅ.01): ಕೆಲವರು ಸಿಎಂ ಆಗಲು 1000 ಕೋಟಿ ರು. ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ. ಅದರ ಭಾಗವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಯತ್ನಾಳ್ ಅವರನ್ನು ಕರೆದು ವಿಚಾರಣೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಇಡಿ, ಐಟಿ ಅಧಿಕಾರಿಗಳು ಯತ್ನಾಳ್ ಹೇಳಿಕೆಯನ್ನು ಗಮನಿಸಬೇಕು ಎಂದು ಆಗ್ರಹಿಸಿದರು.
ಬಿಎಸ್‌ವೈ ಜೈಲಿಗೆ ಹೋಗಿ ಬಂದು ನಂತರ ಸಿಎಂ ಆಗಿಲ್ಲವಾ?: ಸಿದ್ದರಾಮಯ್ಯಗೆ ಯತ್ನಾಳ್ ಪ್ರಶ್ನೆ!
ಇದೇ ವೇಳೆ ಸಿದ್ದರಾಮಯ್ಯ ವಿರುದ್ದ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿರುವ ಬಗ್ಗೆ ಮಾತನಾಡಿ, ಇಡಿ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಕ್ರಮ. ಸಿದ್ದರಾಮಯ್ಯ ಅವರ ಮೇಲೆ ವಿನಾಕಾರಣ ದೂರು ದಾಖ ಲಾಗುತ್ತಿದೆ. ಇದು ಬಿಜೆಪಿ ಸರ್ಕಾರ ಬೀಳಿಸಿ ಅಧಿಕಾರ ಹಿಡಿಯುವ ಯತ್ನ ಮಾಡುತ್ತಿದೆ. ಎಷ್ಟೇ ಪ್ರಕರಣ ದಾಖಲಾದರೂ ಅದನ್ನು ನಾವು ಎದುರಿಸುತ್ತೇವೆ ಎಂದರು.