ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಹೈಡ್ರಾಮಾ ನಡೆದಿದೆ. ಇದರ ಮಧ್ಯೆ ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ನಿಯೋಗ ಶಾಕ್ ಕೊಟ್ಟಿದೆ.

ಬೆಂಗಳೂರು, (ಮಾ.28): ರಾಸಲೀಲೆ ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಕಬ್ಬನ್ ಪಾರ್ಕ್ ಠಾಣೆಗೆ ಮನವಿ ಸಲ್ಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಪುಟ್ಟರಾಜು ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ಮನವಿ ಪತ್ರ ನೀಡಲಾಗಿದೆ.

ಸಿ.ಡಿ.ಕೇಸ್: ರಮೇಶ್ ಜಾರಕಿಹೊಳಿಗೆ ನೋಟಿಸ್!

ರಮೇಶ್ ಜಾರಕಿಹೊಳಿ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದರೂ, ಅವರನ್ನು ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆ ಮೇಲೆ ಅನುಮಾನಕ್ಕೆ ಕಾರಣವಾಗಿವೆ. ಜಾರಕಿಹೊಳಿ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳಿವೆ. ಪೊಲೀಸ್ ಇಲಾಖೆ ತಕ್ಷಣ ರಮೇಶ್ ಅವರನ್ನು ಬಂಧಿಸಬೇಕು ಹಾಗೂ ನೊಂದ ಯುವತಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಕಾಂಗ್ರೆಸ್ ಮುಖಂಡ ಮನೋಹರ್ ಮಾತನಾಡಿ, ತಕ್ಷಣವೇ ಪೊಲೀಸರು ರಮೇಶ್ ಜಾರಕಿಹೊಳಿ ಬಂಧಿಸಬೇಕು. ಎಸ್​ಐಟಿ ಕೂಡಲೇ ಸಿಡಿ ಕೇಸ್ ಸಂಬಂಧ ಕ್ರಮ ತೆಗೆದುಕೊಳ್ಳಬೇಕು ಆಗ್ರಹಿಸಿದರು.

ಇನ್ನು ಕನಪುರದಲ್ಲಿ ಡಿಕೆಶಿ ಅವರನ್ನು ಸೋಲಿಸುವುದಾಗಿ ಜಾರಕಿಹೊಳಿ ಹೇಳಿಕೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಈ ಭಾಗದಲ್ಲಿ ಒಂದು ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲುವುದಕ್ಕೆ ಆಗುವುದಿಲ್ಲ ಎಂದು ಅವರು ವ್ಯಂಗವಾಡಿದರು.