ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ
ದೇಶದಲ್ಲಿ ಕಾಂಗ್ರೆಸ್‌ಗೆ ಇತಿಹಾಸವಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿತ್ತು, ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ದೇಶ ಸಮಗ್ರ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸ್ಮರಣೀಯ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಮಾಲೂರು (ಡಿ.29): ದೇಶದಲ್ಲಿ ಕಾಂಗ್ರೆಸ್‌ಗೆ ಇತಿಹಾಸವಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿತ್ತು, ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ದೇಶ ಸಮಗ್ರ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸ್ಮರಣೀಯ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನದ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಯಾವುದಾದರೂ ಒಂದೇ ಪಕ್ಷ ಇತಿಹಾಸ ಇದ್ದರೆ ಅದು ಕಾಂಗ್ರೆಸ್‌ಗೆ ಮಾತ್ರ ಎಂದರು.
ಕಾಂಗ್ರೆಸ್ ಕೊಡುಗೆ ಸ್ಮರಣೀಯ: ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.
ಈ ನಾಯಕರುಗಳ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮುಂದಾಳತ್ವದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಬಲಿಷ್ಟಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತಕ್ಕೆ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವು ಉತ್ತಮ ಆಡಳಿತ ನೀಡುತ್ತಿದ್ದೆ. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೨ ಬಾರಿ ಸಹ ಜನತೆ ಆಶೀರ್ವಾದ ಮಾಡಿದ್ದು, ಸರ್ಕಾರದಿಂದ ಹೆಚ್ಚಿನ ಅನುದಾನಗಳನ್ನು ತಂದು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮಾಡಲಾಗುವುದು ಎಂದರು.
ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್
ಬಗರ್‌ಹುಕುಂ ಸಮಿತಿ ಸದಸ್ಯರು: ಇದೇ ಸಂದರ್ಭದಲ್ಲಿ ಕಸಬಾ ಹೋಬಳಿ ಹಾಗೂ ಲಕೂರು ಹೋಬಳಿ ಬಗರ್ ಹುಕುಂ ಸಮಿತಿಗೆ ಅಧ್ಯಕ್ಷರಾದ ಶಾಸಕ ಕೆ.ವೈ.ನಂಜೇಗೌಡ ಅವರು ಸಮಿತಿಯ ಇತರೆ ಸದಸ್ಯರಾದ ಎಟ್ಟಕೋಡಿ ವೀರಭದ್ರಪ್ಪ, ತಂಬಿಹಳ್ಳಿ ಗೋಪಿನಾಥ್, ಹುಂಗೇನಹಳ್ಳಿ ಕವಿತಾ ಹಾಗೂ ಹೆಚ್ಚುವರಿಯಾಗಿ ಮಾಸ್ತಿ ಹಾಗೂ ಟೇಕಲ್ ಹೋಬಳಿ ಬಗರ್ ಹುಕುಂ ಸಮಿತಿಗೆ ಕೃಷಿಕ ಸಮಾಜದ ಅಧ್ಯಕ್ಷ ಆನೇಪುರ ಹನುಮಂತಪ್ಪ ಅಧ್ಯಕ್ಷರು, ಬೆಡಶೆಟ್ಟಹಳ್ಳಿ ಧನಲಕ್ಷ್ಮಿ, ನಾಗಾಪುರ ನವೀನ್ ಕುಮಾರ್, ಬನಹಳ್ಳಿ ಸತೀಶ್ ಬಾಬು, ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಅಂಜನಿ ಸೋಮಣ್ಣ, ಪ್ರದೀಪ್‌ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಧುಸೂಧನ್, ವಿಜಯನರಸಿಂಹ, ಪುರಸಭಾ ಸದಸ್ಯ ರಾಜಪ್ಪ, ಇನ್ನಿತರರು ಹಾಜರಿದ್ದರು.