ಅಭ್ಯರ್ಥಿ ಆಯ್ಕೆಗೆ ಮಾ.15ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ: ಖರ್ಗೆ, ಸೋನಿಯಾ, ರಾಹುಲ್ ನೇತೃತ್ವ
ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಸುವ ನಿಟ್ಟಿನಲ್ಲಿ ಮಾ.15ರಂದು (ಬುಧವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು (ಮಾ.13): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಸುವ ನಿಟ್ಟಿನಲ್ಲಿ ಮಾ.15ರಂದು (ಬುಧವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಸಲು ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಸಮಿತಿ (ಪರಿಶೀಲನಾ ಸಮಿತಿ) ಕಳೆದ ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ರಾಜ್ಯದಲ್ಲಿ ಸರಣಿ ಸಭೆ ನಡೆಸಿತ್ತು.
ಈ ವೇಳೆ 120 ಕ್ಷೇತ್ರಗಳಿಗೆ ಒಂಟಿ ಹೆಸರಿನ ಸಂಭಾವ್ಯರ ಪಟ್ಟಿ ಅಂತಿಮಗೊಳಿಸಿ ಎಐಸಿಸಿಗೆ ಕಳುಹಿಸಿಕೊಟ್ಟಿದೆ. ಈ ಪಟ್ಟಿ ಪರಿಶೀಲಿಸಿ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಬುಧವಾರ ಎಐಸಿಸಿ ಮಟ್ಟದಲ್ಲಿ ಚುನಾವಣಾ ಸಮಿತಿಯ ಮಹತ್ವದ ಸಭೆ ನಿಗದಿಯಾಗಿದೆ. ಸ್ಕ್ರೀನಿಂಗ್ ಸಮಿತಿಯು ಮೊದಲ ಹಂತದಲ್ಲಿ ಕಳುಹಿಸಲಿರುವ 120 ಕ್ಷೇತ್ರದ ಅಭ್ಯರ್ಥಿಗಳ ಹೆಸರುಗಳನ್ನು ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಅಂತಿಮಗೊಳಿಸಲಿದೆ. ಬೆನ್ನಲ್ಲೇ ಅಭ್ಯರ್ಥಿಗಳ ಪಟ್ಟಿಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯರಿಂದ ಬುರುಡೆ ಬಿಡುವ ಕೆಲಸ: ಸಿ.ಟಿ.ರವಿ ಆರೋಪ
ಸ್ಕ್ರೀನಿಂಗ್ ಸಮಿತಿಯು ಮೊದಲ ಪಟ್ಟಿಯಲ್ಲಿ ಕಳುಹಿಸಿರುವ 120 ಮಂದಿಯ ಹೆಸರುಗಳಲ್ಲಿ ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಶಿಡ್ಲಘಟ್ಟಶಾಸಕ ವಿ.ಮುನಿಯಪ್ಪ, ಅಫ್ಜಲ್‌ಪುರ ಶಾಸಕ ಎಂ.ವೈ.ಪಾಟೀಲ್, ಪಾವಗಡ ಶಾಸಕ ವೆಂಕಟರಮಣಪ್ಪ ಅವರ ಹೆಸರುಗಳ್ನು ವಿವಿಧ ಕಾರಣಗಳಿಗೆ ಕೈಬಿಡಲಾಗಿದೆ. ಉಳಿದಂತೆ ವಿಧಾನಪರಿಷತ್ ಸದಸ್ಯರ ಪೈಕಿ ಯು.ಟಿ.ವೆಂಕಟೇಶ್ ಅವರಿಗೆ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಿದ್ದು, ಉಳಿದ ಯಾವ ಪರಿಷತ್ ಸದಸ್ಯರಿಗೂ ಪಟ್ಟಿಯಲ್ಲಿ ಅವಕಾಶ ನೀಡಿಲ್ಲ.
120 ಕ್ಷೇತ್ರ ಹೊರತುಪಡಿಸಿ ಉಳಿದ 75 ಕ್ಷೇತ್ರಗಳ ಸಂಭವನೀಯರ ಆಯ್ಕೆಗೆ ಸ್ಕ್ರೀನಿಂಗ್ ಸಮಿತಿಯು ಮತ್ತೊಮ್ಮೆ ಸಭೆ ನಡೆಸಲಿದೆ. ಜೆಡಿಎಸ್ ಹಾಗೂ ಬಿಜೆಪಿಯಿಂದ ಪಕ್ಷಕ್ಕೆ ಬರಲಿರುವ ಶಾಸಕರು, ಸಚಿವರಿಗಾಗಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾದು ನೋಡುವ ತಂತ್ರ ಅನುಸರಿಸಲು ಇತ್ತೀಚೆಗಿನ ಸ್ಕ್ರೀನಿಂಗ್ ಸಮಿತಿಯಲ್ಲಿ ನಿರ್ಧರಿಸಲಾಗಿದೆ.
ಕಾಂಗ್ರೆಸ್ 120 ಸಂಭಾವ್ಯರ ಪಟ್ಟಿ ಫೈನಲ್: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿ ಕಸರತ್ತು ಮಾಡಿರುವ ಎಐಸಿಸಿ ಸ್ಕ್ರೀನಿಂಗ್ ಸಮಿತಿಯು 120 ಕ್ಷೇತ್ರಗಳಿಗೆ ಒಂಟಿ ಹೆಸರಿನ ಸಂಭಾವ್ಯರ ಪಟ್ಟಿಅಂತಿಮಗೊಳಿಸಿದೆ. ಜತೆಗೆ 104 ಕ್ಷೇತ್ರಗಳಿಗೆ 2-3 ಅಭ್ಯರ್ಥಿಗಳ ಪಟ್ಟಿಯನ್ನು ಶಾರ್ಚ್‌ಲಿಸ್ಟ್ ಮಾಡಿದ್ದು, ಶೀಘ್ರ ಮತ್ತೊಂದು ಸಭೆ ನಡೆಸಿ ಈ ಪೈಕಿ 75 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿ ಎಐಸಿಸಿ ಚುನಾವಣಾ ಸಮಿತಿಗೆ ರವಾನಿಸಲು ನಿರ್ಧರಿಸಲಾಗಿದೆ.
ಉಳಿದ ಸುಮಾರು 30 ಸ್ಥಾನಗಳನ್ನು ಪಕ್ಷಾಂತರ ಸೇರಿದಂತೆ ವಿವಿಧ ಕಾರಣಗಳಿಗೆ ಕೊನೆ ಹಂತದಲ್ಲಿ ಮುನ್ನೆಲೆಗೆ ಬರಲಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಕಾಯ್ದಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಕ್ರೀನಿಂಗ್ ಸಮಿತಿಯು ಮೊದಲ ಹಂತದಲ್ಲಿ ಕಳುಹಿಸಲಿರುವ 120 ಕ್ಷೇತ್ರದ ಅಭ್ಯರ್ಥಿಗಳ ಹೆಸರುಗಳನ್ನು ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರನ್ನು ಒಳಗೊಂಡ ಎಐಸಿಸಿ ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಅಂತಿಮಗೊಳಿಸಲಿದೆ. ಬೆನ್ನಲ್ಲೇ ಅಭ್ಯರ್ಥಿಗಳ ಪಟ್ಟಿಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.
ನಾನು ಬಡವರ ಬದುಕು ಕಟ್ಟುತ್ತಿದ್ದರೆ ಕಾಂಗ್ರೆಸ್ ನನ್ನ ಗೋರಿ ತೋಡುತ್ತಿತ್ತು: ಪ್ರಧಾನಿ ಮೋದಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಅಧ್ಯಕ್ಷತೆಯ ಸ್ಕ್ರೀನಿಂಗ್ ಸಮಿತಿಯು ಮಂಗಳವಾರ ಹಾಗೂ ಬುಧವಾರ ರಾಜ್ಯ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬುಧವಾರ ಸಂಜೆ ವೇಳೆಗೆ ಮೊದಲ ಹಂತದಲ್ಲಿ 120 ಕ್ಷೇತ್ರಗಳಿಗೆ ಒಂಟಿ ಹೆಸರಿನ ಸಂಭಾವ್ಯರ ಪಟ್ಟಿಯನ್ನು ಅಂತಿಮಗೊಳಿಸಿದೆ.