Asianet Suvarna News Asianet Suvarna News

ಸಿದ್ದರಾಮೋತ್ಸವಕ್ಕೆ ಇಂದು ರಾಹುಲ್‌ ಗಾಂಧಿಗೆ ಆಹ್ವಾನ: ಕೆ.ಎನ್‌.ರಾಜಣ್ಣ

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಮಂಗಳವಾರ ದೆಹಲಿಗೆ ಹೋಗಿ ನಾಯಕರಾದ ರಾಹುಲ್‌ ಗಾಂಧಿ ಅವರಿಗೆ ಅಧಿಕೃತ ಆಹ್ವಾನ ನೀಡುತ್ತೇವೆ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. 

congress ex mla kn rajanna reaction about siddaramotsava gvd
Author
Bangalore, First Published Jul 26, 2022, 5:00 AM IST

ಬೆಂಗಳೂರು (ಜು.26): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಮಂಗಳವಾರ ದೆಹಲಿಗೆ ಹೋಗಿ ನಾಯಕರಾದ ರಾಹುಲ್‌ ಗಾಂಧಿ ಅವರಿಗೆ ಅಧಿಕೃತ ಆಹ್ವಾನ ನೀಡುತ್ತೇವೆ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಜನ್ಮದಿನ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರೂ ಆದ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. 

ಇದಕ್ಕೆ ಅಗತ್ಯವಿರುವ ಸಿದ್ಧತೆ ನಡೆಯುತ್ತಿದ್ದು ಮಂಗಳವಾರ ರಾಹುಲ್‌ಗಾಂಧಿ ಅವರಿಗೆ ಆಹ್ವಾನ ನೀಡಲು ದೆಹಲಿಗೆ ತೆರಳುತ್ತಿದ್ದೇವೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇದು ಸಿದ್ದರಾಮಯ್ಯ ಅವರ ಜನ್ಮದಿನ ಕಾರ್ಯಕ್ರಮವಷ್ಟೇ. ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಅಹಿಂದ ಪರ. ಅದನ್ನು ಪ್ರತ್ಯೇಕವಾಗಿ ಯಾರೂ ಹೇಳಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದು ಇಷ್ಟವಿಲ್ಲ. ಹೀಗಾಗಿ ಇದನ್ನು ಕಾರ್ಯಕರ್ತರ ಸಮಾವೇಶ ಎನ್ನಬಹುದು. ಸಂಚಾರ ವ್ಯವಸ್ಥೆ ಹಾಗೂ ಊಟಕ್ಕೆ ನಾವು ಯಾವುದೇ ವ್ಯವಸ್ಥೆ ಮಾಡಿಲ್ಲ. ಸ್ವಯಂ ಪ್ರೇರಿತವಾಗಿ ಅಭಿಮಾನಿಗಳೇ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ನಾಡಹಬ್ಬದಂತೆ ಸಿದ್ದರಾಮೋತ್ಸವ ಆಚರಿಸಲು ಜನ ಸಿದ್ಧ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಒಂದು ಜಾತಿಗೆ ಸೀಮಿತರಾದ ನಾಯಕರಲ್ಲ. ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಂಡು ಸರ್ವ ಜನಾಂಗದ ಅಭಿವೃದ್ಧಿಗಾಗಿ ಆಡಳಿತ ನೀಡಿದ ಸಿದ್ದರಾಮಯ್ಯ ನಮ್ಮೆಲ್ಲರ ನೆಚ್ಚಿನ ನಾಯಕರು. ಅವರ ಜನ್ಮದಿನವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲು ಜನತೆ ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಜಮೀರಅಹ್ಮದ್‌ ಖಾನ್‌ ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಆಚರಣೆ ಪೂರ್ವಭಾವಿಯಾಗಿ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಸೋಮವಾರ ಆಯೋಜಿಸಿದ್ದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಸಿದ್ದರಾಮಯ್ಯ ಅವರು ಎಂದೂ ಜನ್ಮದಿನ ಆಚರಿಸಿಕೊಂಡವರಲ್ಲ. 75ನೇ ವರ್ಷಕ್ಕೆ ಅವರು ಕಾಲಿಡುತ್ತಿರುವ ಈ ಸಂಭ್ರಮವನ್ನು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಅವರು ಜನ್ಮದಿನ ಆಚರಣೆಗೆ ಒಪ್ಪಿಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದವರಾದರೂ ಎಲ್ಲರಿಗಿಂತಲೂ ಅಲ್ಪಸಂಖ್ಯಾತರ ಮೇಲೆ ಹೆಚ್ಚು ಪ್ರೀತಿ ಹೊಂದಿದ್ದರು. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ ಕೀರ್ತಿಯೂ ಅವರದಾಗಿದೆ. ಹೀಗಾಗಿ ಅವರ ಜನ್ಮದಿನವನ್ನು ನಮ್ಮೆಲ್ಲರ ಹುಟ್ಟುಹಬ್ಬ ಎಂದು ಭಾವಿಸಬೇಕು. ಆ. 3ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವಕ್ಕೆ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಎಚ್‌ಡಿಡಿ ಕುರಿತ ರಾಜಣ್ಣ ಹೇಳಿಕೆಗೆ ಟಿ.ಎ.ಶರವಣ ಕಿಡಿ

ರಾಜ್ಯದಲ್ಲಿ ಬಿಜೆಪಿ ಹಿಂದೂ-ಮುಸ್ಲಿಮರ ಮಧ್ಯೆ ವಿಷಬೀಜ ಬಿತ್ತಿ ಭಾವೈಕ್ಯತೆಗೆ ಧಕ್ಕೆ ತರುತ್ತಿದೆ. ಬ್ರಿಟಿಷರ ಒಡೆದಾಳುವ ನೀತಿಯನ್ನೇ ಆರ್‌ಎಸ್‌ಎಸ್‌ ಜತೆಗೆ ಸೇರಿ ಬಿಜೆಪಿ ಮಾಡುತ್ತಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಕೊಡುಗೆಯಿದ್ದು, ನಾವೂ ಹಿಂದೂಸ್ತಾನಿಗಳೇ. ಈ ಕಾರಣಕ್ಕೇ ಸಾರೇ ಜಹಾಂಸೆ ಅಚ್ಛಾ ಹಿಂದೂಸ್ತಾನ್‌ ಹಮಾರಾ ಎನ್ನುವ ಮೂಲ ಮಂತ್ರವನ್ನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದರು. ಸೂರಿಲ್ಲದ ಅಲ್ಪಸಂಖ್ಯಾತ ಸಮುದಾಯದವರಿಗೆ ವಕ್ಫ್ ಆಸ್ತಿಯಲ್ಲೇ ಮನೆ ಕಟ್ಟಿಸಿಕೊಟ್ಟು ಕಡಿಮೆ ಬಾಡಿಗೆ ನೀಡುವ ಬಗ್ಗೆ ನಾನು ಮಂತ್ರಿಯಾಗಿದ್ದಾಗ ಚಿಂತನೆ ನಡೆಸಿದ್ದೆ. ಕುಮಾರಸ್ವಾಮಿ ಅವರು ಹೆಚ್ಚಿನ ಅನುದಾನ ಸಾಧ್ಯವಿಲ್ಲ ಎಂದಿದ್ದರು. ಆದರೆ, ಸಮ್ಮಿಶ್ರ ಸರ್ಕಾರದ ವೇಳೆ ಸಿದ್ದರಾಮಯ್ಯ ಅವರಿಗೆ ಈ ವಿಷಯ ತಿಳಿಸಿದಾಗ ನಾನು ಸಿಎಂ ಆಗಿದ್ದಾಗ ಯಾಕೆ ಹೇಳಿಲ್ಲ ಎಂದು ಕೇಳಿದರು. 

Follow Us:
Download App:
  • android
  • ios