ಭೋಪಾಲ್[ಮಾ.10]: ಮಧ್ಯಪ್ರದೇಶ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಗಳಾಗುತ್ತಿದ್ದು, ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಒಂದೆಡೆ 20 ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದರೆ, ಮತ್ತೊಂದೆಡೆ ಮೋದಿ ಅಮಿತ್ ಶಾ ಭೇಟಿಯಾಗಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಸಿಂಧಿಯಾ ಕೂಡಾ ರಾಜೀನಾಮೆ ಸಲ್ಲಿಸಿದ್ದರು. ಆದರೀಗ ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಕಾಂಗ್ರೆಸ್‌ ಸಿಂಧಿಯಾರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಹಳೇ ಸೇಡು, ಹೊಸ ಪೆಟ್ಟು: ಕಾಂಗ್ರೆಸ್‌ಗೆ ಗುಡ್‌ಬೈ ಎಂದ ಸಿಂಧಿಯಾ!

ಹೌದು ಕಳೆದೊಂದು ವಾರದಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಸರ್ಕಾರ ಬಿಳಿಸುವ ಯತ್ನ ನಡೆಸಲಾಗುತ್ತಿದೆ ಎಂಬ ಮಾತುಗಳು ದಟ್ಟವಾದ ಬೆನ್ನಲ್ಲೇ ಸಿಂಧಿಯಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ 20 ಶಾಸಕರು ಮುಖ್ಯಮಂತ್ರಿ ಕಮಲನಾಥ್‌ಗೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಕಮಲನಾಥ್ ಇದೊಂದು ಷಡ್ಯಂತ್ರ, ಇದನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಗುಡುಗಿದ್ದರು. ಹೀಗಿರುವಾಗಲೇ ಇಂದು ಮಂಗಳವಾರ ಬೆಳಗ್ಗೆ ಸಿಂಧಿಯಾ ಪಿಎಂ ಮೋದಿ ಹಾಗೂ ಅಮಿತ್ ಶಾರನ್ನು ಭೇಟಿಯಾಗಿದ್ದರು.ಈ ಭೇಟಿ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮತ್ತಷ್ಟು ದಟ್ಟವಾಗಿತ್ತು.

ಇದಕ್ಕೆ ಇಂಬು ನೀಡುವಂತೆ ಮೋದಿ ಹಾಗೂ ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಂಧಿಯಾ ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ್ದರು ಹಾಗೂ ಸೋನಿಯಾ ಗಾಂಧಿಗೆ ರಾಜೀನಾಮೆ ಸಲ್ಲಿಸಿದ್ದರು. ಆದರೀಗ ರಾಜೀನಾಮೆ ಪ್ರಕಟಿಸಿದ ಕೆಲವೇ ಕ್ಷಣಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಕಾಂಗ್ರೆಸ್‌ ಸಿಂಧಿಯಾರನ್ನು ಪಕ್ಷದಿಂದ ಉಚ್ಚಾಟಿಸಿದೆ. ಹೀಗಿರುವಾಗ ಇಂದು ಸಂಜೆಯೊಳಗೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರುತ್ತಾರೆನ್ನಲಾಗಿದೆ.

ಮಧ್ಯಪ್ರದೇಶ ಹೈಡ್ರಾಮಾ: ಬಂಡೆದ್ದ ಸಿಂಧಿಯಾ, 22 ಸಚಿವರ ರಾಜೀನಾಮೆ!

ಬಿಜೆಪಿಗೆ ಸೇರಿದ್ರೆ ಸಿಂಧಿಯಾಗೆ ಡಿಸಿಎಂ ಸ್ಥಾನ?

ಬಿಜೆಪಿ ಮೂಲಗಳಿಂದ ಬಂದ ಮಾಹಿತಿ ಅನ್ವಯ ಪಕ್ಷವು ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭೆಗೆ ಕಳುಹಿಸಿ ಮೋದಿ ಸಂಪುಟದ ಸಚಿವರನ್ನಾಗಿಸುವ ತಯಾರಿಯಲ್ಲಿದೆ ಎನ್ನಲಾಗಿದೆ. ಇಲ್ಲದಿದ್ದರೆ ಮಧ್ಯಪ್ರದೇಶ ಸರ್ಕಾರ ಪತನಗೊಂಡರೆ, ಮುಂದೆ ಅಸ್ತಿತ್ವಕ್ಕೆ ಬರಲಿರುವ ಸರ್ಕಾರದಲ್ಲಿ ಸಿಂಧಿಯಾ ಉಪ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎನ್ನಲಾಗಿದೆ. 

ಕಮಲ್‌-ಸಿಂಧಿಯಾ ಸಮರ:

ಸಿಂಧಿಯಾ ಅವರು ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷಗಿರಿ ಮೇಲೆ ಕಣ್ಣಿಟ್ಟಿದ್ದಾರೆ. ಈಗ ಈ ಹುದ್ದೆ ಕಮಲ್‌ನಾಥ್‌ ಬಳಿಯೇ ಇದೆ. ಈ ಕಾರಣಕ್ಕೆ ಇಬ್ಬರ ನಡುವೆಯೂ ಜಟಾಪಟಿ ನಡೆದೇ ಇದೆ. ‘ಕಮಲ್‌ನಾಥ್‌ ಸರ್ಕಾರ ಪ್ರಣಾಳಿಕೆ ಭರವಸೆ ಈಡೇರಿಸದಿದ್ದರೆ ಬೀದಿಗಿಳಿಯುವೆ’ ಎಂದು ಸಿಂಧಿಯಾ ಇತ್ತೀಚೆಗೆ ಗುಡುಗಿದ್ದರು. ‘ಬೀದಿಗಿಳಿಯಲಿ ಬಿಡಿ’ ಎಂದು ಕಮಲ್‌ನಾಥ್‌ ಕೂಡ ತಿರುಗೇಟು ನೀಡಿದ್ದರು.

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಲಾಬಲ ಲೆಕ್ಕಾಚಾರ:

ಮಧ್ಯಪ್ರದೇಶ ವಿಧಾನಸಭೆ 230 ಶಾಸಕರನ್ನು ಹೊಂದಿದ್ದು, ಶಾಸಕರಿಬ್ಬರ ನಿಧನದ ಕಾರಣ ಈಗ 2 ಸ್ಥಾನ ಖಾಲಿ ಇವೆ. ಹೀಗಾಗಿ ಬಲ 228ಕ್ಕೆ ಕುಸಿದಿದ್ದು, ಬಹುಮತಕ್ಕೆ 115 ಸ್ಥಾನ ಬೇಕು. ಕಾಂಗ್ರೆಸ್‌ ಹಾಗೂ ಅದರ ಮಿತ್ರಪಕ್ಷಗಳು ಈಗ 121 ಸ್ಥಾನ ಹೊಂದಿವೆ. ಈಗ ಬಂಡಾಯ 18 ಶಾಸಕರು ರಾಜೀನಾಮೆ ನೀಡಿದರೆ, ಅದರ ಬಲ 102ಕ್ಕೆ ಇಳಿಯಲಿದೆ. ಆಗ ಸದನದ ಬಲವೂ 210ಕ್ಕೆ ಇಳಿಯಲಿದೆ. ಈ ಸಂದರ್ಭದಲ್ಲಿ ಬಹುಮತಕ್ಕೆ 106 ಸ್ಥಾನ ಸಾಕಾಗುತ್ತದೆ. 107 ಸದಸ್ಯರ ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಲಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"