Karnataka Congress ಸಿಎಂ ಇಬ್ರಾಹಿಂ ಸ್ವಾಗತಿಸಿದ್ದ ನಾಯಕ ಕಾಂಗ್ರೆಸ್‌ನಿಂದ ಉಚ್ಚಾಟನೆ
* ಸಿಎಂ ಇಬ್ರಾಹಿಂ ಸ್ವಾಗತಿಸಿದ ನಾಯಕ ಕಾಂಗ್ರೆಸ್‌ನಿಂದ ಉಚ್ಚಾಟನೆ
* ತನ್ವೀರ್ ಸೇಠ್ ಆಪ್ತನಿಗೆ ಕಾಂಗ್ರೆಸ್ ಗೇಟ್‌ಪಾಸ್
* ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆಯ ಮೇರೆಗೆ ಉಚ್ಚಾಟನೆ
ಬೆಂಗಳೂರು, (ಫೆ.06): ಎಂಎಲ್ಸಿ ಸಿ.ಎಂ ಇಬ್ರಾಹಿಂ(CM Ibrahim) ಸ್ವಾಗತಿಸಿದ್ದ ತನ್ವೀರ್ ಸೇಠ್(Tanveer sait) ಆಪ್ತನಿಗೆ ಕಾಂಗ್ರೆಸ್ ಗೇಟ್‌ಪಾಸ್ ನೀಡಿದೆ.
ತನ್ವೀರ್ ಸೇಠ್ ಆಪ್ತ ಅಬ್ದುಲ್ ಖಾದರ್ ಶಾಹೀದ್ರನ್ನು(Abdul Khader Shaheed) 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸೂಚನೆಯ ಮೇರೆಗೆ ಅಬ್ದುಲ್ ಖಾದರ್ ಶಾಹೀದ್ರನ್ನ ಉಚ್ಚಾಟನೆ ಮಾಡಲಾಗಿದೆ.
Suvarna Special: ದೊಡ್ಡಗೌಡ್ರ ಅಲಿಂಗ ವ್ಯೂಹ, ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್?
ಮೈಸೂರು ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಅಬ್ದುಲ್ ಖಾದರ್ ಶಾಹೀದ್ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆಂದು ದೂರು ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮತ್ತು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಕ್ರಮ ಕೈಗೊಳ್ಳಲಾಗಿದೆ.
ಅಬ್ದುಲ್ ಖಾದರ್ ಶಾಹೀದ್, ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು. ಸಿದ್ದು ವಿರುದ್ಧ ಘೋಷಣೆ ಕೂಗಿ ಪಕ್ಷದಿಂದ ಅಮಾನತ್ತುಗೊಂಡಿದ್ದರು. ಈಗ ಸಿ.ಎಂ ಇಬ್ರಾಹಿಂ ಸ್ವಾಗತಿಸಿದಕ್ಕೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈಗಾಗಲೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿರುವ ಸಿಎಂ ಇಬ್ರಾಹಿಂ ಮೊನ್ನೇ ಅಷ್ಟೇ ಮೈಸೂರಿಗೆ ಹೋಗಿದ್ದರು. ಆ ವೇಳೆ ಇಬ್ರಾಹಿಂಗೆ ಭರ್ಜರಿ ಸ್ವಾಗತ ಕೋರಲಾಗಿತ್ತು.
ಇನ್ನು ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ. ಆದ್ರೆ, ಇಬ್ರಾಹಿಂ ಸ್ವಾಗತಿಸಿದ ಕಾಂಗ್ರೆಸ್ ಮುಖಂಡರುಗಳನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದೇ ಫೆ.14ರಂದು ಲವರ್ಸ್ ದಿನದಿಂದ ಕಾಂಗ್ರೆಸ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಘೋಷಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ವಿರುದ್ಧ ಅದರಲ್ಲೂ ಸಿದ್ದರಾಮಯ್ಯನವರ ಅಹಿಂದಕ್ಕೆ ಟಕ್ಕರ್ ಕೊಡಲು ಅಲಿಂಗ ಚಳವಳಿಗೆ ಮುಂದಾಗಿದ್ದಾರೆ.
ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಸಿಎಂ ಇಬ್ರಾಹಿಂ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.