ಬೆಂಗಳೂರು(ಅ.10): ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಆರ್‌ಆರ್‌ ನಗರ ಹಾಗೂ ಶಿರಾ ಕ್ಷೇತ್ರದ ಈ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ಸ್ವೀಕರಿಸಿವೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಕೂಡಾ ಬಹಳ ಕುತೂಹಲ ಮೂಡಿಸಿತ್ತು. ಸದ್ಯ ಕಾಂಗ್ರೆಸ್ ಆರ್‌ಆರ್‌ ಕ್ಷೇತ್ರದ ತನ್ನ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.

ಹೌದು ಕಳೆದ ಮೂರು ದಿನಗಳ ಹಿಂದೆ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದ ಡಿ. ಕೆ. ರವಿ ಪತ್ನಿ ಕುಸುಮಾರವರನ್ನು ಕಾಂಗ್ರೆಸ್ ಆರ್‌ ಆರ್‌ ನಗರ ಕ್ಷೇತ್ರದಿಂದ ಕಣಕ್ಕಿಳಿಸಲಿದೆ. ಕುಸುಮಾರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಕೂಡಾ ಗ್ರೀನ್ ಸಿಗ್ನಲ್ ನೀಡಿದೆ. AICC ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಅತ್ತ ಶಿರಾ ಕ್ಷೇತ್ರದಿಂದ ಟಿ ಬಿ.ಜಯಚಂದ್ರ ಕಣಕ್ಕಿಳಿಯಲಿದ್ದಾರೆ.

ಅಕಾಲಿಕ ಸಾವಿಗೀಡಾಗಿದ್ದ ದಿವಂಗತ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ, ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಮಗಳು. ಸದ್ಯ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ರಾಜಕೀಯ ಅದೃಷ್ಟ ಪರೀಕ್ಷೆಗಿಳಿದಿರುವ ಕುಸುಮಾ ಪಕ್ಷಕ್ಕೆ ಜಯ ತಂದುಕೊಡುತ್ತಾರಾ? ಕಾದು ನೊಡಬೇಕಷ್ಟೇ.