Asianet Suvarna News Asianet Suvarna News

Mudda Hanumegowda: ಕಾಂಗ್ರೆಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡಲು ಮುಂದಾದ ನಾಯಕ

Mudda Hanumegowda to quit congress: ಕಾಂಗ್ರೆಸ್‌ ಪಕ್ಷದಿಂದ ಹಲವು ದಿನಗಳಿಂದ ಮುನಿಸಿಕೊಂಡಿರುವ ಮುದ್ದ ಹನುಮೇಗೌಡ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ್ದಾರೆ. ಇಂದು ಸಂಜೆಯೊಳಗೆ ರಾಜೀನಾಮೆ ನೀಡುತ್ತೇನೆ, ಆದರೆ ಕುಣಿಗಲ್‌ನಿಂದ ಮತ್ತೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. 

Congress former mla mudda hanumegowda to officially resign from party
Author
First Published Sep 1, 2022, 12:40 PM IST

ಬೆಂಗಳೂರು: ಬೆಂಗಳೂರಿನಲ್ಲಿ ಮಾಜಿ ಸಂಸದ ಮುದ್ದಹನುಮೆಗೌಡ ಕಾಂಗ್ರೆಸ್‌ ಪಕ್ಷವನ್ನು ತೊರೆಯುವ ಬಗ್ಗೆ ಮಾಹಿತಿ ನೀಡಿದ್ದು ಸಂಜೆಯೊಳಗೆ ರಾಜೀನಾಮೆ ಪತ್ರವನ್ನು ನೀಡಲಿದ್ದೇನೆ ಎಂದಿದ್ದಾರೆ. "ನಾನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ, ಅದು ಪಕ್ಷದಿಂದ ಆಗಿರಬೇಕು ಮತ್ತು ಇಲ್ಲ ನನ್ನಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದಲ್ಲಿ ಸ್ಪಷ್ಟವಾಗಿ ಹೇಳಬೇಕು. ಆದರೆ ನನಗೆ ಹೇಳಿಲ್ಲ," ಎಂದು ಮುದ್ದ ಹನುಮೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. 

ಮುಂದುವರೆದ ಅವರು, "ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣ ಇರಬೇಕು ತಾನೇ..? ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಮತ್ತು ಡಿಕೆಶಿ ಭೇಟಿ  ಮಾಡಿ ನನ್ನ ಸ್ಪಷ್ಟ ನಿರ್ಧಾರ ತಿಳಿಸಿದ್ದೇನೆ. 1989ರಲ್ಲಿ ಕಾಂಗ್ರೆಸ್ ಬಿ ಪಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ರು. ನಂತರ 2019ರಲ್ಲಿ ಸಂಸದ ಆಗಿದ್ರು ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ, ಸಂಸದರಾಗಿ ಆಯ್ಕೆಯಾಗಲು ಅವಕಾಶ ಕೊಟ್ರು. ನಾನು ಅತ್ಯಂತ ಕ್ರಿಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದಾ ಅಳಿಲು ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯು ಇದೆ. ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ. ಪಕ್ಷಕ್ಕೆ ಕೂಡ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ನಾಲ್ಕು ಬಾರಿ ಸ್ಪರ್ಧೆದಿಂದ ತಪ್ಪಿಸಲು ಅಂತಹ ಅನಿವಾರ್ಯ ಇರಲಿಲ್ಲ. ಸಿದ್ದರಾಮಯ್ಯ ಅವರು ಇಂತಹ ನಿರ್ಧಾರ ಮಾಡಬೇಡಿ ಎಂದು ಹೇಳಿದ್ರು. ನನ್ನ ರಾಜಕೀಯ ಜೀವನದಲ್ಲಿ ಯಾವ ರೀತಿ ಎದುರಿಸಿದೆ ಎಂದು ಜನರಿಗೆ ಗೊತ್ತಿದೆ. ಪಕ್ಷದಿಂದ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ," ಎಂದು ಅವರು ಹೇಳಿದರು. 

ಇದನ್ನೂ ಓದಿ: Ticket Fight: ಕುಣಿಗಲ್ ಟಿಕೆಟ್‌ಗಾಗಿ ರಂಗನಾಥ್, ಮುದ್ದ ಹನುಮೇಗೌಡ ನಡುವೆ ಫೈಟ್

"ಇಷ್ಟು ವರ್ಷಗಳ ನಡೆದ ರಾಜಕೀಯ ಧೋರಣೆಗಳು ಇಂತಹ ಪರಿಸ್ಥಿತಿಗೆ ಕಾರಣ. ಇವತ್ತು ಈ ನಿರ್ಧಾರ ಮಾಡಿದ್ದೇನೆ, ಮುಂದೆ ಒಳ್ಳೆಯ ಅವಕಾಶಗಳು ಬರುತ್ತವೆ
ಇತ್ತೀಚೆಗೆ ನಡೆದ ರಾಜಕೀಯ ವಿದ್ಯಮಾನಗಳಿಂದ ಇಂತಹ ನಿರ್ಧಾರಕ್ಕೆ ಬಂದಿದ್ದೇನೆ. ಸುರ್ಜೇವಾಲಾ ದೂರವಾಣಿ ಮೂಲಕ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ರು. ಇತ್ತೀಚೆಗೆ ನನ್ನ ಜತೆ ಮಾತನಾಡಿಲ್ಲ. 2023 ಕ್ಕೆ ನಾನು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಆಗುವುದು ಖಚಿತ. ನಾನು ಕಾಂಗ್ರೆಸ್ ಇಂದ ದೂರ ಸರಿದಿದ್ದೇನೆ. ಸಾಂಕೇತಿಕವಾಗಿ ಭೇಟಿ ಮಾಡಬೇಕಿತ್ತು, ಹೀಗಾಗಿ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಇಂದ ದೂರ ಹೋಗಿದ್ದೇನೆ. ಇಂದು ಸಂಜೆ ಒಳಗೆ ಅಧಿಕೃತವಾಗಿ ರಾಜೀನಾಮೆ ಕೊಡ್ತೀನಿ," ಎಂದು ಅಧಿಕೃತವಾಗಿ ರಾಜೀನಾಮೆ ನೀಡುವ ಬಗ್ಗೆ ಅವರು ಮಾಹಿತಿ ನೀಡಿದರು. 

"ಕುಣಿಗಲ್ ನಲ್ಲಿ ನಾನು ಎರಡು ಬಾರಿ ಶಾಸಕ ಆಗಿದ್ದೆ. ಮುಂದೆ 2023ರಲ್ಲೂ ನಾನೇ ಸ್ಪರ್ಧೆ ಮಾಡಬೇಕು ಎಂದು ಅಲ್ಲಿ ಜನ ಇಚ್ಚೆ ಪಡುತ್ತಿದ್ದಾರೆ. ಅತೀ ಶೀಘ್ರದಲ್ಲೇ ಒಂದು ಒಳ್ಳೆಯ ನಿರ್ಧಾರಕ್ಕೆ ಬರುತ್ತೇನೆ," ಎಂದರು. ಬಿಜೆಪಿ ಆಪರೇಷನ್ ಕಮಲ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ನಾನು ಅಧಿಕಾರದಲ್ಲಿ ಇದ್ದೀನಾ ಆಪರೇಷನ್ ಮಾಡಲು..?," ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ದೇವೇಗೌಡರ ಹಾದಿ ಸುಗಮ: ಮುದ್ದಹನುಮೇಗೌಡ ಕಣದಿಂದ ನಿರ್ಗಮನ?

ಸುರ್ಜೇವಾಲ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಪೋನ್ ಮಾಡಿ ಪಕ್ಷದಲ್ಲಿ ಇರಲು ಹೇಳಿದ್ರು ಅಷ್ಟೇ, ಯಾರ ಬಗ್ಗೆ ವೈಯಕ್ತಿಕವಾಗಿ ಮಾತನಾಡಲು ಬಯಸುವುದಿಲ್ಲ ಎಂದ ಅವರು, ಇವತ್ತೇ ರಾಜೀನಾಮೆ ಪತ್ರವನ್ನು ಕಳುಹಿಸುತ್ತೇನೆ ಎಂದು ಪುನರುಚ್ಚರಿಸಿದರು. ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಲು ಈ ರೀತಿ ಮಾಡುತ್ತಿಲ್ಲ, ಕುಣಿಗಲ್ ವಿಧಾನಸಭೆ ಕ್ಷೇತ್ರದಿಂದ ಮುಂದೆ ಸ್ಪರ್ಧೆ ಮಾಡುತ್ತೇನೆ ಎಂದರು. ನನ್ನ ನಿರ್ಧಾರ ಅಚಲವಾಗಿದೆ ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದೂ ಅವರು ಸ್ಪಷ್ಟಪಡಿಸಿದರು. 

Follow Us:
Download App:
  • android
  • ios