ಮೈಸೂರು ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತು ಅಂತರಿಕ ಜಗಳ. ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಚೂ ಬಿಟ್ಟ ಬಿಟ್ಟರಾ ಸಿಎಂ ಸಿದ್ದರಾಮಯ್ಯ. ವಿಧಾನಸಭಾ ಚುನಾವಣೆಯಲ್ಲಿಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಗೇಟ್ ಪಾಸ್‌? ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗನಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಪತ್ರ.

ಮೈಸೂರು (ಜು.18) : ಮೈಸೂರು ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತು ಅಂತರಿಕ ಜಗಳ. ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಚೂ ಬಿಟ್ಟ ಬಿಟ್ಟರಾ ಸಿಎಂ ಸಿದ್ದರಾಮಯ್ಯ. ವಿಧಾನಸಭಾ ಚುನಾವಣೆಯಲ್ಲಿ
ಸಿದ್ದರಾಮಯ್ಯ ಗೆ ಬೆಂಬಲ ನೀಡದ ಮಾಜಿ ಶಾಸಕ ವಾಸುಗೆ ಗೇಟ್ ಪಾಸ್‌? ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗನಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಪತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ಮಾಜಿ ಶಾಸಕ ಪಿ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಮಾಜಿ ನಗರಸಭೆ ಸದಸ್ಯ, ಆರ್.ಸುನಂದಕುಮಾರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.

ನನಗೆ ಟಿಕೆಟ್ ತಪ್ಪಿಸಿದ್ದೇ ಸಿದ್ದರಾಮಯ್ಯ: ಮಾಜಿ ಶಾಸಕ ವಾಸು ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯರ ಬೆಂಬಲಿಗರಾಗಿರುವ ಸುನಂದಕುಮಾರ್. ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ವಾಸು ಕೆಲಸ ಮಾಡಿದ್ದಾರೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದಲ್ಲದೆ ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪತ್ರದಲ್ಲಿ ತಿಳಿಸಿರು ಸಿದ್ದರಾಮಯ್ಯ ಬೆಂಬಲಿಗ ಆರ್‌ ಸುನಂದಕುಮಾರ್. 

‘ಬಿಜೆಪಿ ಪ್ರಾಯೋಜಕತ್ವದಲ್ಲೇ ಸಹಕಾರಿ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿದ್ದಾ?’