ಕಾಂಗ್ರೆಸ್ ಸರ್ಕಾರ ನುಡಿದಂತೆ‌ ನಡೆಯುತ್ತಿದೆ: ಸಂಸದ ಡಿ.ಕೆ.ಸುರೇಶ್‌

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ನುಡಿದಂತೆ‌ ನಡೆಯುತ್ತಿದ್ದು ಚುನಾವಣೆಗೂ ಮುನ್ನ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು‌ ಜಾರಿಗೆ ತರಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು.
 

Congress government is doing as it says MP DK Suresh said gvd

ಕನಕಪುರ (ಅ.12): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ನುಡಿದಂತೆ‌ ನಡೆಯುತ್ತಿದ್ದು ಚುನಾವಣೆಗೂ ಮುನ್ನ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು‌ ಜಾರಿಗೆ ತರಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ತುಂಗಣಿ ಹಾಗೂ ಕಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರು ಅನೇಕ ಕಾರ್ಯಗಳಿಗೆ ಪ್ರತಿನಿತ್ಯ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಕೆಲವು ಬದಲಾವಣೆಗಳನ್ನು ಮಾಡಿದೆ. ಇದರಿಂದ ಜನರ ಕೆಲಸಗಳು ಸರಳವಾಗಿ ಆಗಲಿದೆ ಎಂದು ತಿಳಿಸಿದರು. 

ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳನ್ನು ಗುರುತಿಸಿ ಖಾತೆಗೆ ಹಣ ವರ್ಗಾವಣೆ ಮಾಡಿದ್ದು ಶೇ.15 ರಷ್ಟು ಜನಕ್ಕೆ ಹೋಗಿಲ್ಲ, ಅವರ ದಾಖಲೆಗಳಲ್ಲಿ ಇರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಿ ಆದಷ್ಟೂ ಬೇಗ ಎಲ್ಲಾ ಫಲಾನುಭವಿಗಳಿಗೂ ಹಣ ಬರುವಂತೆ ಮಾಡಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯ ಎಸ್ ರವಿ, ತಹಶೀಲ್ದಾರ್ ಸ್ಮಿತಾ ರಾಮು,ತಾಲೂಕು ಪಂಚಾಯಿತಿ ಬೈರಪ್ಪ, ಬಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ ಡಿ ವಿಜಯದೇವ್, ಪಕ್ಷದ ಜಿಲ್ಲಾವಕ್ತಾರ ಹೊಸಕೋಟೆ ಪುರುಷೋತ್ತಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಕೃಷ್ಣಮೂರ್ತಿ, ನಗರಸಭಾ ಮಾಜಿ ಅಧ್ಯಕ್ಷ ಕೆ.ಎನ್. ದಿಲೀಪ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶೀಲಾ, ನಂದಿನಿ, ಉಪಾಧ್ಯಕ್ಷರಾದ ವಿಶ್ವಕಾಂತ್ ಶೋಭಾ, ತಾಲೂಕು ಪಂಚಾಯಿತಿ ಬೈರಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ವೋಟ್ ಹಾಕಿದ್ರೆ ಅಭಿವೃದ್ದಿ, ಇಲ್ಲಂದ್ರೆ ನೋ ಅಭಿವೃದ್ಧಿ: ಶಾಸಕ ಬಾಲಕೃಷ್ಣ

ಜೈಲಿಗೆ ಕಳಿಸುವಂತ ಬೆದರಿಕೆಗೆಲ್ಲಾ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಅವರನ್ನು ತಿಹಾರ್‌ ಜೈಲಿಗೆ ಕಳುಹಿಸಿ ಎಂದು ಬಹುಶಃ ಇವರೇ ಅಮಿತ್ ಶಾಗೆ ಮನವಿ ಮಾಡಿಕೊಂಡು ಬಂದಿರಬೇಕು. ಇವರ ಗೊಡ್ಡು ಬೆದರಿಕೆಗಳಿಗೆ ಹೆದರುವ ಜಾಯಮಾನ ನಮ್ಮದಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಜೈಲಿಗೆ ಹೋಗುತ್ತಾರೆ ಎಂದಿರುವ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಸರ್ಕಾರದಲ್ಲಿ ಸೋಮಶೇಖರ್‌ ದೊಡ್ಡ ಫಲಾನುಭವಿಯಾಗಿದ್ದರು: ಯೋಗೇಶ್ವರ್‌

ಕುಮಾರಸ್ವಾಮಿ ಅವರು ಸುಳ್ಳಿನ ತಜ್ಞ. ಜೆಡಿಎಸ್‌ ನಾಯಕರು ಅಧಿಕಾರ ಇಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಅವರು ದೆಹಲಿಗೆ ಹೋಗಿದ್ದರು. ಬಹುಶಃ ಡಿ.ಕೆ. ಶಿವಕುಮಾರ್‌ ಅವರನ್ನು ತಿಹಾರ್‌ ಜೈಲಿಗೆ ಕಳುಹಿಸುವಂತೆ ಅಮಿತ್ ಶಾ ಅವರಿಗೆ ಇವರೇ ಮನವಿ ಮಾಡಿಕೊಂಡು ಬಂದಿರಬೇಕು. ಇವರ ದಾಖಲೆಗಳನ್ನು ಬಿಚ್ಚಿಡಬೇಕಾದ ಸಮಯ ಬಂದರೆ ನಾವೂ ಸಿದ್ಧ ಎಂದು ಹೇಳಿದರು. ಕುಮಾರಸ್ವಾಮಿ ಅವರ ಕನಸು ನನಸಾಗುವುದಿಲ್ಲ.ಅವರ ಕನಸು ಕನಸಾಗಿಯೇ ಉಳಿಯುತ್ತದೆ. ಇವರು ಯಾವ ಸಂದರ್ಭದಲ್ಲಿ ಯಾರ ಜತೆ ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಗೊತ್ತಿದೆ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಜಾಯಮಾನದವರು ಇವರು. ಇವರ ನಡೆಗಳಿಂದ ಕಾರ್ಯಕರ್ತರೇ ರೋಸಿ ಹೋಗಿದ್ದಾರೆ. ಕಾರ್ಯಕರ್ತರು ಇವರ ನಡೆ ನುಡಿ ನೋಡಿ ಅವರ ದಾರಿ ಅವರು ನೋಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Latest Videos
Follow Us:
Download App:
  • android
  • ios