Asianet Suvarna News Asianet Suvarna News

ರೈತರ ಬಗ್ಗೆ ಕಾಳಜಿವಿಲ್ಲದ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ ಕಿಡಿ

ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ‌ ಕಳಕಳಿ ಇಲ್ಲ. ಆದರೆ, ಅಲ್ಪ ಸಂಖ್ಯಾತರಿಗೆ ₹10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. 

Congress government not concerned about farmers Says BY Vijayendra gvd
Author
First Published Dec 8, 2023, 1:30 AM IST

ಬೆಳಗಾವಿ (ಡಿ.08): ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ‌ ಕಳಕಳಿ ಇಲ್ಲ. ಆದರೆ, ಅಲ್ಪ ಸಂಖ್ಯಾತರಿಗೆ ₹10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಾರೆ. ರಾಜ್ಯ ಸರ್ಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಇವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದನೆ ಮಾಡುತ್ತಿಲ್ಲ. ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅಧಿವೇಶನ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ಕುರಿತು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡುತ್ತೇನೆ ಎಂದರು. ಪೃಥ್ವಿಸಿಂಗ್ ಮೇಲೆ ಹಲ್ಲೆ ವಿಚಾರಕ್ಕೆ ಉತ್ತರಿಸಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಜಸ್ಟ್ ಕೇಸ್ ಮಾತ್ರ ದಾಖಲು ಮಾಡಿದ್ದಾರೆ. ಅಟೆಮ್ಟ್ ಟೂ ಮರ್ಡರ್ ಕೇಸ್ ಹಾಕೋದಿಲ್ಲ, 307 ಕೇಸ್ ಹಾಕೋದಿಲ್ಲ. ಅದರ ಬದಲು ಕಾಂಗ್ರೆಸ್ ಎಂಎಲ್‌ಸಿ ಮೇಲೆ ಎ1 ಮಾಡಿದ್ದಾರೆ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ತಿಳಿಸಿದರು.

ಬರ ಪರಿಹಾರಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ: ಯತೀಂದ್ರ ಸಿದ್ದರಾಮಯ್ಯ

ಹುಕ್ಕೇರಿ ಹಿರೇಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ: ನಗರದಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿ, ಹುಕ್ಕೇರಿ ದಸರಾ ಉತ್ಸವಕ್ಕೆ ಬಂದಾಗ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ನೀನು ರಾಜ್ಯಾಧ್ಯಕ್ಷನಾಗಿಯೇ ಬೆಳಗಾವಿಗೆ ಬರುತ್ತಿಯಾ ಎಂದು ಆಶೀರ್ವಾದ ಮಾಡಿದ್ದರು. ಅದರ ಫಲವಾಗಿ ಇಂದು ನಾನು ರಾಜ್ಯಾಧ್ಯಕ್ಷನಾಗಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲೆ ಇದೆ. ಪಕ್ಷದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕಾರ್ಯವನ್ನು ನಿರ್ವಹಿಸುತ್ತೇನೆ ಎಂದರು.

ಕಟ್ಟ ಕಡೆಯ ಮನುಷ್ಯನಿಗೂ, ಶ್ರೀಮಂತರಿಗೂ ಒಂದೇ ಕಾನೂನು: ಸಿಎಂ ಸಿದ್ದರಾಮಯ್ಯ

ಬೆಳಗಾವಿಯ ನಾಗನೂರು ರುದ್ರಾಕ್ಷಿಮಠಕ್ಕೆ ಭೇಟಿ ನೀಡಿ ಡಾ. ಅಲ್ಲಮಪ್ರಭು ಸ್ವಾಮೀಜಿ ಹಾಗೂ ಕಾರಂಜಿಮಠದ ಗುರುಸಿದ್ದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದನು ಸ್ಮರಿಸಿದರು. ಈ ಸಮಯದಲ್ಲಿ ಬಿಜೆಪಿ ನಗರ ಘಟಕದ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ, ಮುಕ್ತಾರ ಹುಸೇನ್ ಪಠಾಣ, ನಿವೃತ್ತ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಮಹಾಂತೇಶ ಒಕ್ಕುಂದ, ವೀರೇಶ ಕಿವುಡಸಣ್ಣವರ, ವೀರುಪಾಕ್ಷಯ್ಯ ನೀರಲಗಿಮಠ, ಚಂದ್ರಶೇಖರ ಸವಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Follow Us:
Download App:
  • android
  • ios