Asianet Suvarna News Asianet Suvarna News

60 ವರ್ಷ ರಾಜಕಾರಣ ಮಾಡಿದ್ದೇನೆ, ಕಾಂಗ್ರೆಸ್ ಸೋಲಿಸಿಯೇ ಸಿದ್ಧ: ಎಚ್‌ಡಿ ದೇವೇಗೌಡ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ ಎಂದು ಎಚ್‌ಡಿ ದೇವೇಗೌಡ ತಿಳಿಸಿದರು

Congress government will see an end says HD Devegowda at bengaluru rav
Author
First Published Jan 7, 2024, 6:43 AM IST

ಬೆಂಗಳೂರು (ಜ.7) : ರಾಜ್ಯ ಸರ್ಕಾರವು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ ಹಿಂದಿನ ಪ್ರಕರಣ ರೀ ಓಪನ್ ಮಾಡಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಟೀಕಾಪ್ರಹಾರ ನಡೆಸಿದ್ದಾರೆ.

ಶುಕ್ರವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸೇಡಿನ ರಾಜಕೀಯ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಎನ್‌ಡಿಎ ಜತೆ ಕೈ ಜೋಡಿಸಲಾಗಿದ್ದು, ಇದರ ಬಗ್ಗೆ ಸಂಶಯ ಬೇಡ. ಕರಸೇವಕರ ಮೇಲಿನ ಪ್ರಕರಣ ಮರು ತನಿಖೆ ಮಾಡಿದ್ದು ಸೇಡಿನ ರಾಜಕೀಯ. ಮೈತ್ರಿ ಇರುವವರೆಗೆ ಸೇಡಿನ ರಾಜಕೀಯ ಮಾಡಿದರೆ ನಾವು ದನಿ ಎತ್ತಲಿದ್ದೇವೆ. ಇಂತಹ ಸಮಯದಲ್ಲಿ ನಾವು ಮಾತನಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ನಾನು ಸಂವಿಧಾನ ಭಕ್ತ. ನನಗೆ ಆಹ್ವಾನ ನೀಡಲು ಬಿಜೆಪಿಗರು ಯಾರು? : ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ ಅಂತ್ಯ ಕಾಣಲಿದೆ:

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಎನ್‌ಡಿಎ ಸೋಲಿಸಿ ರಾಜ್ಯದಲ್ಲಿ 20 ಸೀಟು ಗೆಲ್ಲುತ್ತೇವೆ ಅಹಂನಿಂದ ಹೇಳುತ್ತಿದ್ದಾರೆ. 20 ಸೀಟು ಗೆಲ್ಲೋದು ಎಂದರೆ ಕನಸು ಮಾತ್ರ. ಈ ಬಾರಿ ಪ್ರಧಾನಿ ನರೇಂದ್ರ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಎಲ್ಲರ ನಿರೀಕ್ಷೆ ಮೀರಿ ಜನರು ಎನ್ ಡಿಎ ಮೈತ್ರಿಗೆ ಅಭೂತಪೂರ್ವ ತೀರ್ಪು ಕೊಡುತ್ತಾರೆ. ಎನ್‌ಡಿಎ ಮೈತ್ರಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow Us:
Download App:
  • android
  • ios