ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಗೊಂದಲಮಯ: ಪ್ರಲ್ಹಾದ್‌ ಜೋಶಿ

ಸಿದ್ದರಾಮಯ್ಯನವರು ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಹತ್ತು ಕೆಜಿಯಲ್ಲಿ ಐದು ಕೇಂದ್ರ ಕೇಂದ್ರ ಸರ್ಕಾರ ನೀಡುತ್ತಿರುವುದು. ಆಹಾರ ಭದ್ರತಾ ಕಾಯ್ದೆ ಅಡಿ ರಾಜ್ಯಕ್ಕೆ ನೀಡಲಾಗುತ್ತಿದೆ. ಈ ವಿಷಯವನ್ನು ರಾಜ್ಯದ ಜನತೆಗೆ ಸ್ಪಷ್ಟವಾಗಿ ಸಿದ್ದರಾಮಯ್ಯನವರು ಹೇಳಬೇಕು.

Congress governments guarantee schemes are a mess Says Pralhad Joshi gvd

ಧಾರವಾಡ (ಜೂ.10): ಕಾಂಗ್ರೆಸ್‌ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಯಾರಿಗೂ ಸಿಗದಂತೆ ಹೊಸ ಹೊಸ ಷರತ್ತುಗಳನ್ನು ಹಾಕುತ್ತಿದ್ದು ಅವರ ಯೋಜನೆಗಳು ಗೊಂದಲಮಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ ಎಲ್ಲ ಐದೂ ಗ್ಯಾರಂಟಿಗಳಿಗೆ ದಿನದಿಂದ ದಿನಕ್ಕೆ ಹೊಸ ಹೊಸ ಷರತ್ತುಗಳನ್ನು ಹಾಕಲಾಗುತ್ತಿದೆ. ಇದೀಗ ಗೃಹಲಕ್ಷ್ಮೀಗೂ ಹೊಸ ಕಂಡಿಷನ್‌ ಹಾಕಿದೆ. ಈ ಮೂಲಕ ಯಾರಿಗೂ ಯೋಜನೆ ಸಿಗದಂತೆ ಹುನ್ನಾರ ಮಾಡಲಾಗುತ್ತಿದೆ. 

ಎಲ್ಲ ಗ್ಯಾರಂಟಿಗಳಲ್ಲಿ ಸುಳ್ಳು ಹೇಳಲಾಗುತ್ತಿದೆ. ಈ ಮೂಲಕ ಜನರ ದಾರಿ ತಪ್ಪಿಸಿ ಮತ ಗಿಟ್ಟಿಸಿಕೊಂಡಿದ್ದೀರಿ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಹತ್ತು ಕೆಜಿಯಲ್ಲಿ ಐದು ಕೇಂದ್ರ ಕೇಂದ್ರ ಸರ್ಕಾರ ನೀಡುತ್ತಿರುವುದು. ಆಹಾರ ಭದ್ರತಾ ಕಾಯ್ದೆ ಅಡಿ ರಾಜ್ಯಕ್ಕೆ ನೀಡಲಾಗುತ್ತಿದೆ. ಈ ವಿಷಯವನ್ನು ರಾಜ್ಯದ ಜನತೆಗೆ ಸ್ಪಷ್ಟವಾಗಿ ಸಿದ್ದರಾಮಯ್ಯನವರು ಹೇಳಬೇಕು. ಇಲ್ಲವಾದರೆ ಕೇಂದ್ರದ ಅಕ್ಕಿ ಬೇಡ ಎಂದು ಹೇಳಿ. ಈ ರೀತಿ ಸುಳ್ಳು ಹೇಳಬೇಡಿ ಎಂದರು.

108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಕೇಂದ್ರ ಗುತ್ತಿಗೆ ರದ್ದು: ಸಚಿವ ದಿನೇಶ್‌ ಗುಂಡೂರಾವ್‌

ಚಕ್ರವರ್ತಿ ಸೂಲಿಬೆಲೆಗೆ ಎಂ.ಬಿ. ಪಾಟೀಲ್‌ ಎಚ್ಚರಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜೋಶಿ, ಅವರು ಮಾತಾಡಿದ ಭಾಷೆ ಬಗ್ಗೆ ಕ್ಷಮೆ ಕೇಳಬೇಕು. ಮೋದಿಯವರಿಗೆ ಅಯೋಗ್ಯವಾದ ಭಾಷೆ ಬಳಸಿದ್ದರು. ಆಗಲೂ ಕೇಂದ್ರದಲ್ಲಿ ನಮ್ಮ ಸರ್ಕಾರವಿತ್ತು. ಆಗಲೂ ನಾವು ಸಂಯಮದಿಂದ ವರ್ತಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣೆಗಳು ಸಹಜ. ಇವರು ಮಾಡುತ್ತಿರುವುದನ್ನು ನೋಡಿ ಹಿಟ್ಲರ್‌ ಸರ್ಕಾರ ಎಂದು ಚಕ್ರವರ್ತಿ ಹೇಳಿದ್ದಾರೆ. ಅಷ್ಟಕ್ಕೇ ಜೈಲಿಗೆ ಹಾಕುತ್ತೇವೆ ಅಂದರೆ ಹೇಗೆ? ಇದು ದಾಷ್ಟ್ರ್ಯ, ದುರಹಂಕಾರದ ಮಾತು. ಕಾಂಗ್ರೆಸ್ಸಿನವರಿಗೆ ಪಿತ್ತ ನೆತ್ತಿಗೆ ಏರಿದೆ. ಅದಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ. ಜನರು ಇದಕ್ಕೆ ಉತ್ತರ ಕೊಡುತ್ತಾರೆ. ಅಧಿ​ಕಾರದ ದುರಹಂಕಾರ ಬಂದಾಗ ಹೀಗಾಗುತ್ತದೆ ಎಂದರು.

ಡಿವಿಎಸ್‌ ವಿರುದ್ಧ ಅಪಪ್ರಚಾರ ತಪ್ಪು: ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ವಿರುದ್ದ ಯಾರಾದರೂ ಅಪಪ್ರಚಾರ ಮಾಡಿದ್ದರೇ ಅದು ತಪ್ಪು. ಅವರ ಬೆನ್ನಿಗೆ ಪಕ್ಷ ಇರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸದಾನಂದ ಗೌಡರ ಅಸಮಾಧಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಡಿವಿಎಸ್‌, ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾರದರೂ ಅವರ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೋ ಎನ್ನುವುದೂ ಗೊತ್ತಿಲ್ಲ. ಎಲ್ಲಾ ಸಂಸದರ ಹಾಗೆ ಅವರ ಬಗ್ಗೆಯೂ ನಮಗೆ ಅತ್ಯಂತ ಗೌರವವಿದೆ ಎಂದರು.

ಗ್ಯಾರಂಟಿ ಯೋಜನೆ ಹೆಸರಲ್ಲಿ ಕಾಂಗ್ರೆಸ್ಸಿಂದ ಮೋಸ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಇದೇ ವೇಳೆ, ಕಾಂಗ್ರೆಸ್‌ನ ಗ್ಯಾರಂಟಿ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನ ಗ್ಯಾರಂಟಿಗಳು ಗೊಂದಲದ ಗೂಡಾಗಿವೆ. ರಾಜ್ಯ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸತ್ಯ ಹೇಳಿದ್ದಾರೆ. ಅವರನ್ನು ನಾನು ಅಭಿನಂದಿಸುತ್ತೇನೆ. ಸರ್ಕಾರದಲ್ಲಿದ್ದೂ ಸತ್ಯ ಮಾತಾಡಿದ್ದಾರೆ ಎಂದರು. ಕಾಂಗ್ರೆಸ್‌, ಚುನಾವಣಾ ಪೂರ್ವದಲ್ಲಿ ಏನು ಹೇಳಿತ್ತು. ಈಗ ಹೇಗೆ ನಡೆದುಕೊಳ್ಳುತ್ತಿದೆ ಎಂಬುದು ಗೊತ್ತಾಗುತ್ತಿದೆ. ಯುವನಿಧಿ, ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಹತ್ತಾರು ಗೊಂದಲಗಳಿವೆ. ಮೊದಲು ಎಲ್ಲರಿಗೂ ಉಚಿತ ಎಂದರು. ಈಗ ಷರತ್ತುಗಳು ಅನ್ವಯ ಎನ್ನುತ್ತಿದ್ದಾರೆ. ಅವೆಲ್ಲಾ ಬೋಗಸ್‌ ಘೋಷಣೆಗಳು ಎಂದು ಕುಟುಕಿದರು.

Latest Videos
Follow Us:
Download App:
  • android
  • ios