ಬಿಜೆಪಿಯ ಮತಗಳು ತಮಗೆ ಪರಿಪೂರ್ಣವಾಗಿ ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗೆ ಮಾರುಹೋದ ಮಹಿಳಾ ಮತಗಳನ್ನು ಕಳೆದುಕೊಂಡಿದ್ದರ ಪರಿಣಾಮ ಸೋಲು ಅನುಭವಿಸುವಂತಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕುಮಾರ್‌ ಬಂಗಾರಪ್ಪ ಹೇಳಿದರು. 

ಶಿವಮೊಗ್ಗ (ಮೇ.19): ಬಿಜೆಪಿಯ ಮತಗಳು ತಮಗೆ ಪರಿಪೂರ್ಣವಾಗಿ ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗೆ ಮಾರುಹೋದ ಮಹಿಳಾ ಮತಗಳನ್ನು ಕಳೆದುಕೊಂಡಿದ್ದರ ಪರಿಣಾಮ ಸೋಲು ಅನುಭವಿಸುವಂತಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕುಮಾರ್‌ ಬಂಗಾರಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ 5 ಬೋಗಸ್‌ ಗ್ಯಾರಂಟಿ ಕಾರ್ಡ್‌ಗಳು ಮಹಿಳೆಯರನ್ನು ಹೆಚ್ಚು ಆಕರ್ಷಿಸಿವೆ. ಇದರ ಪರಿಣಾಮದ ಬಗ್ಗೆ ಮತದಾರರಿಗೆ ಮನವರಿಕೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. 

ಆದರೆ ಬಿಜೆಪಿಗೆ ಸಿಗಬೇಕಾದ ಮತಗಳು ಚಲಾವಣೆಯಾಗಿದ್ದು, ಪಕ್ಷದಲ್ಲಿ ಯಾವುದೇ ರೀತಿಯ ವಿರೋಧವಿಲ್ಲದೇ ಚುನಾವಣೆ ಎದುರಿಸಿದ್ದೇವೆ. ಜಿಲ್ಲೆಯ ಏಳು ಕ್ಷೇತ್ರಗಳನ್ನು ಗೆಲ್ಲುವ ಸಂಕಲ್ಪ ಹೊಂದಲಾಗಿತ್ತು. ಆದರೆ ನಾಲ್ಕು ಕ್ಷೇತ್ರ ಕಳೆದುಕೊಂಡು ಮೂರು ಕ್ಷೇತ್ರ​ಗ​ಳನ್ನು ಗೆದ್ದಿದ್ದೇವೆ. 135 ಸ್ಥಾನಗಳ ಗಳಿಕೆ ಕಾಂಗ್ರೆಸ್‌ ವಲಯದಲ್ಲೂ ಅಚ್ಚರಿ ಮೂಡಿಸಿದೆ ಎಂದರು. ತಾವು ಶಾಸಕರಾಗಿದ್ದ 5 ವರ್ಷಗಳ ಅವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ, ರಸ್ತೆ, ನೀರಾವರಿ ಯೋಜನೆಗಳೂ ಸೇರಿದಂತೆ ವಿವಿಧ ಅಭಿವೃದ್ಧಿ ಮಾಡಿ ತೋರಿಸುವ ಮೂಲಕ ಮುನ್ನಡೆ ಗಳಿಸಿದ್ದೇನೆ. 

ಕಳಂಕ ತರುವವರ ಮೇಲೆ ಹದ್ದಿನ ಕಣ್ಣು: ಬಾಲಚಂದ್ರ ಜಾರಕಿಹೊಳಿ ಎಚ್ಚರಿಕೆ

ನೂತನ ಶಾಸಕರು ತಮ್ಮ ಅವಧಿಯಲ್ಲಿ ಮಂಜೂರಾದ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ವಿಸ್ತಾರ ಸೇರಿದಂತೆ ವಿವಿಧ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು. ಸೋಲು-ಗೆಲುವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಗುಣ ತಮ್ಮದಾಗಿದ್ದು, ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗಿ ವಿಚಲಿತರಾಗದೇ ಕಾರ್ಯಕರ್ತರೊಂದಿಗೆ ಪಕ್ಷವನ್ನು ಇನ್ನಷ್ಟುಬಲಗೊಳಿಸುತ್ತೇನೆ. 

ಮುಂದಿನ ದಿನಗಳಲ್ಲಿ ಸೊರಬ ಪುರಸಭೆ, ಆನವಟ್ಟಿಪಟ್ಟಣ ಪಂಚಾಯಿತಿ, ಜಿ.ಪಂ., ತಾ.ಪಂ. ಮತ್ತು 8 ಗ್ರಾ.ಪಂ. ಚುನಾವಣೆಗಳು ನಡೆಯಲಿವೆ. ಬೂತ್‌ ಮಟ್ಟದ ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಿ ಗೆಲ್ಲುವ ಸಂಕಲ್ಪ ಮಾಡಿ​ದ್ದು, ನಂತರದ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲಾಗುವುದು ಎಂದರು. ವಿಧಾನ ಪರಿಷತ್ತು ಸದಸ್ಯ ಡಿ.ಎಸ್‌. ಅರುಣ್‌ ಮಾತನಾಡಿ, ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿರುವ 5 ಗ್ಯಾರಂಟಿ ಕಾರ್ಡ್‌ ಯೋಜನೆಯನ್ನು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಕ್ಯಾಬಿನೆಟ್‌ನಲ್ಲೇ ಬಿಡುಗಡೆ ಮಾಡಿ, ಜನರಿಗೆ ತಲುಸುವ ವ್ಯವಸ್ಥೆ ಮಾಡಿದರೆ ತಾವೂ ಕೂಡ ಖುಷಿಪಡುತ್ತೇನೆ ಎಂದರು.

ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಶ್ರಮಿಸುವೆ: ಶಾಸಕ ಕೆ.ವೈ.ನಂಜೇಗೌಡ

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಉಪಾಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ, ಪುರಸಭೆ ಸದಸ್ಯ ಎಂ.ಡಿ. ಉಮೇಶ್‌, ಜಿ.ಪಂ. ಮಾಜಿ ಸದಸ್ಯ ಗುರುಕುಮಾರ ಪಾಟೀಲ್‌ ಇದ್ದರು.