ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ: ಸಚಿವ ಸಂತೋಷ್ ಲಾಡ್
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಸೇರಿಕೊಂಡು ಜಾಗೃತಿ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಸಮಾವೇಶ ನಡೆಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಹುಬ್ಬಳ್ಳಿ (ಫೆ.03): ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಸೇರಿಕೊಂಡು ಜಾಗೃತಿ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಸಮಾವೇಶ ನಡೆಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಕಾರ್ಯಕ್ರಮ ಫೆ. 24ರಂದು ಮಾಡಬೇಕು ಎಂದು ಯೋಚಿಸಲಾಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಸಮಯ ಕೇಳಲಾಗುತ್ತಿದೆ. ಅವರು ದಿನಾಂಕ ಕೊಟ್ಟ ಮೇಲೆ ನಿಗದಿಪಡಿಸಲಾಗುವುದು. ಆಗ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಸೇರಿಸಲಾಗುವುದು ಎಂದರು.
ಶೋಷಿತರ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮಜಾ: ಎಚ್.ಡಿ.ಕುಮಾರಸ್ವಾಮಿ
ಫೆ. 3ರಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಹಾಗೂ ಪ್ರಸಾದ್ ಅಬ್ಬಯ್ಯ ಕ್ಷೇತ್ರದ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 20 ಸಾವಿರಕ್ಕೂ ಅಧಿಕ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ. 5ರಂದು ಶಾಸಕರಾದ ಅರವಿಂದ ಬೆಲ್ಲದ ಮತ್ತು ವಿನಯ ಕುಲಕರ್ಣಿ ಕ್ಷೇತ್ರದ ಫಲಾನುಭವಿಗಳ ಕಾರ್ಯಕ್ರಮ ಆಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ನವಲಗುಂದ, ಕುಂದಗೋಳ, ಕಲಘಟಗಿ ಹೀಗೆ ಪ್ರತಿ ಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಫೆ. 24ರಂದು ಫಲಾನುಭವಿಗಳ ಜಿಲ್ಲಾ ಸಮಾವೇಶ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜನಜಾಗೃತಿಗಾಗಿ ಜಿಲ್ಲೆಯಲ್ಲಿ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ. ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶವನ್ನು ಬರುವ ಫೆ. 24ರಂದು ಆಯೋಜಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಲೂಟಿಕೋರರನ್ನ ಲೋಕಸಭೆಗೆ ಕಳಿಸಿದರೆ ಇನ್ನೇನಾಗುತ್ತೆ?: ಡಿಕೆಸು ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಕೆಡಿಪಿ ಸಭೆ ನಂತರ ಮಾತನಾಡಿ, ಬರುವ ಫೆಬ್ರವರಿ 24ರಂದು ನವಲಗುಂದ ಮತಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿಗಳು ಬರುವ ಕಾರ್ಯಕ್ರಮ ನಿಗದಿ ಆಗಿದೆ. ಸರ್ಕಾರದ ನಿರ್ದೇಶನದಂತೆ ಐದು ಮುಖ್ಯ ಯೋಜನೆಗಳ ಹಾಗೂ ಇತರ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಫೆಬ್ರವರಿ 24ರಂದು ಫಲಾನುಭವಿಗಳ ಜಿಲ್ಲಾ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಸಿದ್ಧತೆ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದ್ದು, ಆಗಮಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.