ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲು ಹಗರಣಗಳನ್ನು ಬಯಲಿಗೆಳೆಯಲು ಕಾಂಗ್ರೆಸ್ ಪ್ಲ್ಯಾನ್!

ವಿಧಾನಮಂಡಲ ಅಧಿವೇಶನದಲ್ಲಿ ನಾಳೆ ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಮಾಡಿದ್ದಾರೆನ್ನಲಾದ ಹಗರಣಗಳನ್ನು ಬಯಲಿಗೆಳೆಯಲು ಕಾಂಗ್ರೆಸ್ ಮುಂದಾಗಿದೆ.

Congress has come forward to expose the scam of ex CM Bommai and ex minister Sriramulu sat

ಬೆಂಗಳೂರು (ಜು.17): ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರ ಹಗರಣಗನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಚರ್ಚೆ ಮಾಡುತ್ತಾ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಖಭಂಗ ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್ ಕೂಡ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಬಯಲಿಗೆಳೆಯಲು ಸನ್ನದ್ಧವಾಗುತ್ತಿದೆ. ನಾಳೆಯ ಅಧಿವೇಶನದ ಚರ್ಚೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲು ಮಾಡಿದ್ದಾರೆನ್ನಲಾದ ಹಗರಣಗಳನ್ನು ಬಯಲಿಗೆಳೆಯಲಿದ್ದಾರೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದಲ್ಲಿ ಹಲವು ಅಕ್ರಮಗಳು ಬಯಲಿಗೆ ಬರುತ್ತಿವೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣಗಳ ಬಗ್ಗೆ ಬಿಜೆಪಿ ನಾಯಕರು ಅಧಿವೇಶನದಲ್ಲಿ ಮುನ್ನೆಲೆಗೆ ತಂದು ಭಾರಿ ಚರ್ಚೆ ಮಾಡುತ್ತಿದ್ದಾರೆ. ಈ ಮೂಲಕ ಆಡಳಿತಾರೀಢ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಖಭಂಗವಾಗುವಂತೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ಬಿಜೆಪಿ ನಾಯಕರಿಗೆ ತಿರುಗೇಟು ನೀಡಲು ಸನ್ನದ್ಧವಾಗುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಮುನ್ನೆಲೆಗೆ ತರಲು ನಿರ್ಧರಿಸಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಮಾಡಿದ್ದಾರೆನ್ನಲಾದ ಹಗರಣಗಳನ್ನು ಬಯಲಿಗೆಳೆಯಲು ಕಾಂಗ್ರೆಸ್ ಮುಂದಾಗಿದೆ.

ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕುಗ್ಗಿಸಿದ ಕಾಂಗ್ರೆಸ್ ಸರ್ಕಾರ

ಕಳೆದ ಮೂರ್ನಾಲ್ಕು ದಿನಗಳಿಂದ ಬಿಜೆಪಿ ನಾಯಕರು ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಪ್ರಸ್ತಾವನೆ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಾರೆ. ಇದಕ್ಕೆ ಪ್ರತ್ಯಸ್ತ್ರವನ್ನು ಹುಡುಕುತ್ತಿದ್ದ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ದಾಖಲೆ ಬಹಿರಂಗಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ನಿನ್ನೆ ವಿಧಾನಸಭೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಸ್ತಾಪಿಸಿದ್ದ ಕಾಂಗ್ರೆಸ್ ನಾಯಕರು ನಾಳೆ ಮತ್ತೊಂದು ಅವ್ಯವಹಾರದ ಕುರಿತು ದಾಖಲೆ ಸಹಿತ ಚರ್ಚೆ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಮೂಲಕ ಬಿಜೆಪಿ ನಾಯಕರ ಬಾಯಿ ಮುಚ್ಚಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಟ್ರಕ್ ಟರ್ಮಿನಲ್‌ನಲ್ಲಿ ನಡೆದಿರುವ 200 ಕೋಟಿ ರೂ. ಅಕ್ರಮದ ಕುರಿತು ನಾಳೆ ಕಾಂಗ್ರೆಸ್ ನಾಯಕರು ಚರ್ಚೆ ಮಾಡಲಿದ್ದಾರೆ. ನಿಯಯ 69ರಡಿ ಟ್ರಕ್ ಟರ್ಮಿನಲ್ ಅಕ್ರಮ ಪ್ರಸ್ತಾಪಕ್ಕೆ ಮುಂದಾಗಲಿದೆ. ಟ್ರಕ್ ಟರ್ಮಿನಲ್‌ನಲ್ಲಿ ಬಿಜೆಪಿ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್ ವೀರಯ್ಯ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಈಗಾಗಲೇ ಡಿ.ಎಸ್ ವೀರಯ್ಯ ಮತ್ತು ಕೆಲವು ಅಧಿಕಾರಿಗಳು ಈಗಾಗಲೇ ಜಲು ಸೇರಿದ್ದಾರೆ. ಜೊತೆಗೆ, ನಾಳೆ ಟ್ರಕ್ ಟರ್ಮಿನಲ್ ಅಕ್ರಮದ ವಿವಿಧ ಹಂತಗಳನ್ನು ಪ್ರಸ್ತಾಪಿಸಲು ಕಾಂಗ್ರೆಸ್ ಶಾಸಕರು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರು ಜಿಟಿ ವರ್ಲ್ಡ್ ಮಾಲ್ ರೈತನಿಗೆ 1 ಕೋಟಿ ರೂ. ಮಾನನಷ್ಟ ಪರಿಹಾರ ಕೊಡಬೇಕು; ಪ್ರಣವಾನಂದ ಶ್ರೀ ಆಗ್ರಹ

ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡರಿಂದ ನಾಳೆ ದಾಖಲೆ ಸಹಿತ ಹಗರಣದ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೆಸರು ಪ್ರಸ್ತಾಪಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಇಬ್ಬರು ನಾಯಕರು ವಿವಿಧ ಹಂತಗಳಲ್ಲಿ ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಅಂತ ದಾಖಲೆ ಬಹಿರಂಗಕ್ಕೆ ಲೆಕ್ಕಾಚಾರ ಮಾಡಿಕೊಂಡಿದ್ದಾರೆ. ಟ್ರಕ್ ಟರ್ಮಿನಲ್ ಅಕ್ರಮದ ಕುರಿತು ಪ್ರಸ್ತಾಪಕ್ಕೆ ಸ್ಪೀಕರ್ ಯು.ಟಿ. ಖಾದರ್ ಅವಕಾಶ ಕೊಡಲಿದ್ದಾರೆ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ಬೆನ್ನಲ್ಲೇ ಪ್ರತಿಪಕ್ಷಗಳ ವಿರುದ್ದ ಟ್ರಕ್ ಟರ್ಮಿನಲ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕಾಂಗ್ರೆಸ್ ಪ್ರತ್ಯಸ್ತ್ರವನ್ನು ಸಿದ್ಧಪಡಿಸಿಕೊಂಡಿದೆ.

Latest Videos
Follow Us:
Download App:
  • android
  • ios