ನಾ ನಾಯಕಿ ಎಂದು ಘೋಷಿಸಿಕೊಳ್ಳೋ ಸ್ಥಿತಿ ಕಾಂಗ್ರೆಸ್ ನಾಯಕರಿಗೆ ಬಂದಿದೆ: ಸಿಎಂ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ‘ನಾ ನಾಯಕಿ’ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಕಾಂಗ್ರೆಸ್‌ನವರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ (ಜ.17) : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ‘ನಾ ನಾಯಕಿ’ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಕಾಂಗ್ರೆಸ್‌ನವರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಪ್ರಿಯಾಂಕಾ ಗಾಂಧಿ(Priyanka gandhi) ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ. ಹೀಗಾಗಿ ಅವರೇ ತಾವೇ ‘ನಾ ನಾಯಕಿ’ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಮಹಿಳೆಯರಿಗಾಗಿ ಕಾಂಗ್ರೆಸ್ ಪ್ರತ್ಯೇಕ ಬಜೆಟ್ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್‌ಗೆ ಖಚಿತವಾಗಿದೆ. ಹೀಗಾಗಿ ಏನು ಬೇಕಾದರೂ ಆಶ್ವಾಸನೆ ನೀಡುತ್ತಿದ್ದಾರೆ ಎಂದರು.
ಸಿದ್ದರಾಮರ ಚಿಂತನೆಯಂತೆ ಬಿಜೆಪಿ ಕೆಲಸ: ಸಿಎಂ ಬೊಮ್ಮಾಯಿ
ಯುವ ಜನೋತ್ಸವ(yuva janotsav) ಯುವ ವಿನಾಶೋತ್ಸವ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ(CM Basavaraj Bommai), ಕಾಂಗ್ರೆಸ್‌ನವರದ್ದು ಯಥಾ ಬುದ್ಧಿ, ತಥಾ ಮಾತು. ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್‌ಗೆ ವಿನಾಶದ ಕನಸುಗಳೇ ಬೀಳುತ್ತಿದೆ. ಹೀಗಾಗಿ ಎಲ್ಲದರಲ್ಲೂ ವಿನಾಶವನ್ನೇ ನೋಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಯಾವುದೇ ಒಳ್ಳೆ ಕೆಲಸವನ್ನು ಮೆಚ್ಚುವುದು ಕಾಂಗ್ರೆಸ್‌ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಅತ್ಯಂತ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು ಹತಾಶೆಯ ಮನಸ್ಥಿತಿ ತೋರಿಸುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ, ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಅತ್ಯಂತ ಅರ್ಥಪೂರ್ಣವಾಗಿ ನಡೆದಿದೆ. ಈ ಭಾಗದಲ್ಲಿ ಈ ರೀತಿಯ ಕಾರ್ಯಕ್ರಮಗಳಿಂದ ಯುವಕರಿಗೆ ಸಾಧನೆ ಮಾಡಲು ಸ್ಫೂರ್ತಿ ದೊರೆಯುತ್ತದೆ. ರಾಜ್ಯದ ಯುವ ನೀತಿಯಲ್ಲಿ ಶಿಕ್ಷಣ, ಉದ್ಯೋಗ, ಕ್ರೀಡೆ ಹಾಗೂ ಸಂಸ್ಕೃತಿಗೆ ಮಹತ್ವ ನೀಡಲಾಗಿದೆ. ಯುವಕರಿಗೆ ಎಲ್ಲ ರಂಗಗಳಲ್ಲಿ ಅವಕಾಶ ನೀಡಲಾಗಿದೆ. ಈ ವರ್ಷ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲೂಕು ಹಾಗೂ ಜಿಪಂ ಹಾಗೂ ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ. ಕಬಡ್ಡಿ, ಕುಸ್ತಿ, ಖೋ ಖೋ ಮುಂತಾದ ಗ್ರಾಮೀಣ ಸೊಗಡಿರುವ ಕ್ರೀಡೆಗಳನ್ನು ಪ್ರಥಮ ಬಾರಿಗೆ ಏರ್ಪಡಿಸಿ ಹೊಸ ಗ್ರಾಮೀಣ ಪ್ರತಿಭೆ ಗುರುತಿಸಿ ಅವಕಾಶ ನೀಡಲಾಗುತ್ತಿದೆ ಎಂದರು.
ಯತ್ನಾಳ್ V/s ನಿರಾಣಿ: ಇಬ್ಬರು ಬಿಜೆಪಿ ನಾಯಕರ ವಾಕ್ಸಮರಕ್ಕೆ ಸಿಎಂ ಗರಂ
‘ನಾ ನಾಯಕಿ ಅಲ್ಲ, ನಾ ನಾಲಾಯಕ್’: ಅಶ್ವತ್ಥ ನಾರಾಯಣ
ಕಾಂಗ್ರೆಸ್ ಹಮ್ಮಿಕೊಂಡಿರೋದು ‘ನಾ ನಾಯಕಿ’ ಕಾರ್ಯಕ್ರಮ ಅಲ್ಲ. ‘ನಾ ನಾಲಾಯಕ್’ ಎಂಬ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಈಗಾಗಲೇ ಉತ್ತರ ಪ್ರದೇಶದಲ್ಲಿ ಪ್ರವಾಸ ಮಾಡಿ ಸಿಂಗಲ್ ಡಿಜಿಟ್ ಫಲಿತಾಂಶ ತಂದು ಕೊಟ್ಟಿದ್ದಾರೆ. ಇನ್ನು ಅವರು ಕರ್ನಾಟಕಕ್ಕೆ ಬಂದು ಏನು ಮಾಡಲು ಸಾಧ್ಯ ಎಂದರು. ಕಾಂಗ್ರೆಸ್ ಸಂಪೂರ್ಣವಾಗಿ ಮುಳುಗುತ್ತಿರುವ ಪಕ್ಷ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರನ್ನು ರಾಜ್ಯ ಜನತೆ ಸಂಪೂರ್ಣವಾಗಿ