Asianet Suvarna News Asianet Suvarna News

ವಿಧಾನ ಪರಿಷತ್‌ ಚುನಾವಣೆಗೆ ಸಚಿವ ಬೋಸರಾಜು, ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್‌

ರಾಜ್ಯದಲ್ಲಿ ಜಗದೀಶ್‌ ಶೆಟ್ಟರ್ ಸೇರಿ, ತಿಪ್ಪಣ್ಣ ಕಮಕನೂರು ಹಾಗೂ ಬೋಸರಾಜು ಅವರಿಗೆ ಕರ್ನಾಟಕ ವಿಧಾನ ಪರಿಷತ್‌ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲಾಗಿದೆ.

Congress has given ticket to Bosaraju and Jagdish Shettar for Legislative Council elections sat
Author
First Published Jun 19, 2023, 5:26 PM IST | Last Updated Jun 19, 2023, 5:57 PM IST

ಬೆಂಗಳೂರು (ಜೂ.19): ರಾಜ್ಯದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದು ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಸೇರಿ, ತಿಪ್ಪಣ್ಣ ಕಮಕನೂರು ಹಾಗೂ ಬೋಸರಾಜು ಅವರಿಗೆ ಕರ್ನಾಟಕ ವಿಧಾನ ಪರಿಷತ್‌ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲಾಗಿದೆ.

ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ನಾಮಪತ್ರ‌ ಸಲ್ಲಿಕೆಗೆ ನಾಳೆ ಅಂತಿಮ ದಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಿದೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಲಕ್ಷ್ಮಣ ಸವದಿ, ಬಾಬುರಾವ್‌ ಚಿಂಚನಸೂರು ಹಾಗೂ ಆರ್.ಶಂಕರ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ವಿಧಾನಪರಿಷತ್‌ಗೆ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌ಗಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಭೋಸರಾಜ್ ಹಾಗೂ ತಿಪ್ಪಣ್ಣ ಕಮಕನೂರು ಹೆಸರು ಘೋಷಣೆ ಮಾಡಲಾಗಿದೆ. ನಾಳೆ ಈ ಮೂವರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಗೆಲುವು ಕೂಡ ಖಚಿತವಾಗಿದೆ.

ರಾಜ್ಯದ ಬಳಿ ಸ್ವಲ್ಪವೂ ಅಕ್ಕಿ ದಾಸ್ತಾನಿಲ್ಲ: ಅನ್ನಭಾಗ್ಯ ಯೋಜನೆ ಜಾರಿ ಕಷ್ಟಕಷ್ಟ

ಬಾಬುರಾವ್‌ ಚಿಂಚನಸೂರ್‌ಗೆ ಟಿಕೆಟ್‌ ಇಲ್ಲ:  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಷತ್‌ ಸ್ಥಾನಕ್ಕೆ ರಾಜಿನಾಮೆ ನೀಡಿ ಸ್ಪರ್ಧೆ ಮಾಡಿ ಸೋಲನುಭವಿಸಿದ್ದ ಬಾಬುರಾವ್‌ ಚಿಂಚನಸೂರ್‌ ಸ್ಥಾನಕ್ಕೆ ಈಗ ತಿಪ್ಪಣ್ಣ ಕಮಕನೂರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಬಾಬುರಾವ್ ಚಿಂಚನಸೂರ್ ಅವರಿಗೆ ಅನಾರೋಗ್ಯದ ಕಾರಣ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದೆ. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ತಿಪ್ಪಣ್ಣ ಕಮಕನೂರುಗೆ ಟಿಕೆಟ್‌ ನೀಡಲಾಗಿದೆ. ಆದರೆ, ತಮಗೇ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಬಾಬುರಾವ್ ಚಿಂಚನಸೂರುಗೆ ನಿರಾಶೆಯಾಗಿದೆ. ಕೋಲಿ ಸಮಾಜದ ಮತ್ತೊಬ್ಬ ನಾಯಕ ತಿಪ್ಪಣ್ಣ ಕಮಕನೂರುಗೆ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಲು ಅವಕಾಶ ಮಾಡಿಕೊಡಲಾಗಿದೆ. 

ಸಣ್ಣ ನೀರಾವರಿ ಬೋಸರಾಜು ಸಚಿವ ಸ್ಥಾನ ಭದ್ರ: ರಾಜ್ಯದಲ್ಲಿ ಯಾವುದೇ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರಲ್ಲದ ಎನ್‌.ಎಸ್‌. ಬೋಸರಾಜು ಅವರನ್ನು ಕಾಂಗ್ರೆಸ್‌ ಸರ್ಕಾರದಿಂದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರನ್ನಾಗಿ ಮಾಡಲಾಗಿತ್ತು. ಸಚಿವನಾಗಿ 6 ತಿಂಗಳು ಪೂರೈಸುವದರೊಳಗೆ ರಾಜ್ಯದ ವಿಧಾನಸಭೆ ಅಥವಾ ವಿಧಾನಪರಿಷತ್‌ ಸದಸ್ಯನಾಗಬೇಕು. ಇಲ್ಲವಾದರೆ ಅವರ ಸಚಿವ ಸ್ಥಾನ ರದ್ದಾಗುತ್ತಿತ್ತು. ಆದರೆ, ಈಗ ಬೀಸರಾಜು ಅವರು ಸಚಿವರಾಗಿದ್ದು, ಒಂದು ತಿಂಗಳಲ್ಲಿಯೇ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡುವ ಮೂಲಕ ಸಚಿವ ಸ್ಥಾನವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲಾಗುತ್ತದೆ. ಆದರೆ, ಒಂದು ವರ್ಷದ ಅವಧಿಗೆ ಮಾತ್ರ ಪರಿಷತ್ ಸ್ಥಾನಮಾನ ಸಿಗಲಿದೆ. 

ಎಮ್ಮೆ ಜೊತೆ ಸೇರಲು ಬಿಡ್ತಿಲ್ಲವೆಂದು, ಮಾಲೀಕನನ್ನೇ ತಿವಿದು ಕೊಂದ ಕೋಣ

ಲಿಂಗಾಯತ ಸಮುದಾಯ ಕೈಹಿಡಿದ ಕಾಂಗ್ರೆಸ್‌: ಬಿಜೆಪಿಯಲ್ಲಿ ಸಾಕಷ್ಟು ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಇದಾದ ನಂತರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಲಿಂಗಾಯತ ನಾಯಕರ ಗೆಲುವಿಗೆ ಶ್ರಮಿಸಿದ್ದರು. ಆದರೆ, ಸ್ವತಃ ಜಗದೀಶ್‌ ಶೆಟ್ಟರ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲನುಭವಿಸಿದ್ದರಿಂದ ಲಿಂಗಾಯತ ನಾಯಕನನ್ನುಕಾಂಗ್ರೆಸ್‌ ಕೈಬಿಡುವುದಿಲ್ಲ ಎಂದು ಹೇಳಿತ್ತು. ಈಗ ನುಡಿದಂತೆ ನಡೆದುಕೊಳ್ಳುತ್ತಿದೆ.

  • ವಿಧಾನ ಪರಿಷತ್‌ ಸದಸ್ಯರಾದಲ್ಲಿ ಅಧಿಕಾರ ಅವಧಿ ಎಲ್ಲಿವರೆಗೆ?
  • ಜಗದೀಶ್‌ ಶೆಟ್ಟರ್‌- 2028
  • ಸಚಿವ ಎನ್.ಎಸ್. ಬೋಸರಾಜು- 2024
  • ತಿಪ್ಪಣ್ಣ ಕಮಕನೂರು-  2026

Congress has given ticket to Bosaraju and Jagdish Shettar for Legislative Council elections sat

Latest Videos
Follow Us:
Download App:
  • android
  • ios