ದೇಶಕ್ಕೆ ಕಾಂಗ್ರೆಸ್ ಭದ್ರ ಬುನಾದಿ ಹಾಕಿಕೊಟ್ಟಿದೆ: ಸಚಿವ ರಾಮಲಿಂಗಾರೆಡ್ಡಿ

ಈ ದೇಶಕ್ಕೆ ಭದ್ರ ಬುನಾದಿ ಹಾಕಿರೋದು ಕಾಂಗ್ರೆಸ್, ನಮ್ಮ ದೇಶ ಬಲಿಷ್ಠವಾಗಿದೆ. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ಆದಾದ ಬಳಿಕ ಬಂದ ಪ್ರಧಾನಿಗಳು ಅವರ ಶಕ್ತಿ ಅನುಸಾರ ಕೆಲಸ ಮಾಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. 
 

Congress has laid a solid foundation for the country Says Minister Ramalinga Reddy gvd

ಚನ್ನಪಟ್ಟಣ (ಜ.05): ಈ ದೇಶಕ್ಕೆ ಭದ್ರ ಬುನಾದಿ ಹಾಕಿರೋದು ಕಾಂಗ್ರೆಸ್, ನಮ್ಮ ದೇಶ ಬಲಿಷ್ಠವಾಗಿದೆ. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ಆದಾದ ಬಳಿಕ ಬಂದ ಪ್ರಧಾನಿಗಳು ಅವರ ಶಕ್ತಿ ಅನುಸಾರ ಕೆಲಸ ಮಾಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಹಿಂದೂ ರಾಷ್ಟ್ರವಾದ್ರೆ ಪಾಕಿಸ್ತಾನದ ರೀತಿ ದಿವಾಳಿ ಆಗುತ್ತೆ ಎಂಬ ವಿಚಾರಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿ, ಅದನ್ನು ಹೊರತು ಪಡಿಸಿ ಬೇರೆ ವಿಚಾರಗಳಿಗೆ ಮಾತಮಾಡಲ್ಲ ಎಂದರು.

ಬಿಜೆಪಿಗರಿಗೆ ಕೆಲಸವಿಲ್ಲ: ಕರಸೇವಕರ ಬಂಧನ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಮಾಡೋಕೆ ಕೆಲಸ ಇಲ್ಲ. ಬಂಧಿತ ಶ್ರೀಕಾಂತ್ ಪೂಜಾರಿ ಮೇಲೆ 16 ಪ್ರಕರಣಗಳಿವೆ. ನ್ಯಾಯಾಲಯದ ಆದೇಶದ ಮೇಲೆ ಆತನನ್ನ ಬಂಧಿಸಲಾಗಿದೆ. ಕಾನೂನಿನ ಪ್ರಕಾರ ಪೊಲೀಸರು ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಸುಮಾರು 20 ಸಾವಿರ ಮಂದಿಯನ್ನ ರೌಡಿಶೀಟರ್‌ನಿಂದ ತೆಗೆಸಿದರು. ಬಳಿಕ ಪಕ್ಷದ ಸಾಲು ಹಾಕಿ ಬಿಜೆಪಿಗೆ ಸೇರಿಸಿಕೊಂಡರು. ಇದು ಬಿಜೆಪಿಯವರು ಕೊಟ್ಟಿದ್ದ ಆಡಳಿತ ಎಂದು ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದರು.

ದೇವಸ್ಥಾನ ಕಟ್ಟಿಸುವ ನಾವು ಹಿಂದುತ್ವ ವಿರೋಧಿಗಳ?: ಸಂಸದ ಡಿ.ಕೆ.ಸುರೇಶ್

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಲು ಹೋರಾಟ ಮಾಡಬೇಕು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಅದು ಯಾಕೆ ಚರ್ಚೆಗೆ ಬಂತು ಅಂತ ಅವರನ್ನೇ ಕೇಳಿ. ಅವರು ರೀತಿ ಹೇಳುವ ಅವಶ್ಯಕತೆ ಇಲ್ಲ ಎಂದರು.

ಹರಿಪ್ರಸಾದ್ ಕೇಳಿ: ಗೋದ್ರಾ ರೀತಿ ಮತ್ತೊಂದು ದುರಂತ ಸಂಭವಿಸುತ್ತೆ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆ ಕುರಿತಂತೆ ಉತ್ತರಿಸಿ, ಹರಿಪ್ರಸಾದ್ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವರು. ಈ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಹಾಗಾಗಿ ಅವರಿಗೆ ಮಾಹಿತಿ ಇರಬಹುದು. ನೀವು ಅದರ ಬಗ್ಗೆ ಅವರನ್ನೇ ಕೇಳಿ ಎಂದರು.

ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ: ಕೇಂದ್ರ ಸಚಿವ ಕ್ರಿಶನ್ ಪಾಲ್‌

20 ಕ್ಷೇತ್ರದಲ್ಲಿ ಗೆಲುವು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೨೦ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಆದರೂ ನಮಗೆ ಯಾವುದೇ ಆತಂಕ ಇಲ್ಲ. ನಾವು ಚುನಾವಣೆ ಸಂದರ್ಭದಲ್ಲಿ ಕೊಟ್ಟಿದ್ದ ಆಶ್ವಾಸನೆ ಈಡೇರಿಸಿದ್ದೇವೆ. ಬಿಜೆಪಿಯವರು ಯಾವ ಮುಖ ಇಟ್ಕೊಂಡು ಚುನಾವಣೆಗೆ ಹೋಗ್ತಾರೆ ಎಂದು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios