Asianet Suvarna News Asianet Suvarna News

ಕೊನೆಗೂ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ: ಸಿದ್ದರಾಮಯ್ಯಗೆ ಮೇಲುಗೈ

ಕೊನೆಗೂ ಕೆಪಿಸಿಸಿ ಅಧ್ಯಕ್ಷರ ನೇಮಕವಾಗಿದ್ದು, ಜತೆಗೆ ಮೂವರು ಕಾರ್ಯಾಧ್ಯಕ್ಷರನ್ನ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

 

Congress High Command Finally appoints DK Shivakumar as KPCC President
Author
Bengaluru, First Published Mar 11, 2020, 3:12 PM IST

ಬೆಂಗಳೂರು, (ಮಾ.11): ಕೊನೆಗೂ ಡಿಕೆ ಶಿವಕುಮಾರ್ ಅವರನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಆಯ್ಮೆ ಮಾಡಿದೆ.

ಡಿಕೆಶಿಗೆ ಅಧ್ಯಕ್ಷ ಸ್ಥಾನ ನೀಡಿದ್ದು, ಜತೆಗೆ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ ಅವರನ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು (ಬುಧವಾರ) ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

ಇದರ ಜತೆಗೆ ನೂತನ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಿರುವ ಎಐಸಿಸಿ ಮುಖ್ಯ ಸಚೇತಕರನ್ನು ಬದಲಾವಣೆ ಮಾಡಿದೆ. ವಿಧಾನಸಭೆ ಮುಖ್ಯ ಸಚೇತಕರಾಗಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್‌ ಹಾಗೂ ವಿಧಾನಪರಿಷತ್‌ ಮುಖ್ಯ ಸಚೇತಕರಾಗಿ ಎಂ. ನಾರಾಯಣ ಸ್ವಾಮಿ  ನೇಮಕಗೊಂಡಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಮುಂದುವರಿಯಲಿ ಎಂದು ಹೈಕಮಾಂಡ್ ತಿಳಿಸಿದೆ. ಇದರಿಂದ ಸಿದ್ದರಾಮಯ್ಯ ಅವರು ತಮ್ಮ ಹಠ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನ ನೇಮಕ ಮಾಡಿ. ಅದರ ಜತೆ ಮೂವರನ್ನ ಕಾರ್ಯಾಧ್ಯಕ್ಷರನ್ನ ನೇಮಕ ಮಾಡಬೇಕೆಂದು ಸಿದ್ದರಾಮಯ್ಯ  ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಟ್ಟಿದ್ದರು.

ಅಲ್ಲದೇ ವಿರೋಧ ಪಕ್ಷ ಹಾಗೂ ಶಾಸಕಾಂಗ ಪಕ್ಷನ ನಾಯಕ ಸ್ಥಾನವನ್ನ ವಿಭಜಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧಿಸಿದ್ದರು. ಒಂದು ವೇಳೆ ಎರಡು ಹುದ್ದೆಗಳನ್ನ ವಿಭಜಿಸಿದರೆ ನನಗೆ ಯಾವುದೇ ಹುದ್ದೆ ಬೇಡ ಎಂದು ಹೈಕಮಾಂಡ್‌ಗೆ ತಿಳಿಸಿದ್ದರು.

ಸಿದ್ದರಾಂಯ್ಯನವರ ಈ ಎಲ್ಲಾ ಡಿಮ್ಯಾಂಡ್‌ಗಳಿಂದ ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರ ಆಯ್ಕೆಯನ್ನ ವಿಳಂಬ ಮಾಡಿತ್ತು. ಇದೀಗ ಕೊನೆಗೂ ಅಳೆದು ತೂಗಿ ಸಿದ್ದರಾಯ್ಯನವರ ಮಾತಿನಂತೆ ಕೆಪಿಸಿಸಿ ಅಧ್ಯಕ್ಷ ಜತೆಗೆ ಮೂವರನ್ನ ಕಾರ್ಯಾಧ್ಯಕ್ಷರನ್ನ ನೇಮಕ ಮಾಡಿದೆ.

ಮಾರ್ಚ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios