Asianet Suvarna News Asianet Suvarna News

ಕಾಂಗ್ರೆಸ್‌ಗೆ ಬಿಸಿ ತುಪ್ಪವಾದ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ, 40 ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಇಬ್ಬರ ಫೈಟ್!

ಕಾಂಗ್ರೆಸ್ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸುಮಾರು 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಇಬ್ಬರು ಅಭ್ಯರ್ಥಿಗಳ ನಡುವೆ ಫೈಟ್ ಶುರುವಾಗಿದೆ.

congress in trouble for second list of candidates for Karnataka Assembly Election 2023 gow
Author
First Published Apr 1, 2023, 4:07 PM IST

ಬೆಂಗಳೂರು (ಏ.1): ಕಾಂಗ್ರೆಸ್ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸುಮಾರು 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಇಬ್ಬರು ಅಭ್ಯರ್ಥಿಗಳ ನಡುವೆ ಫೈಟ್ ಶುರುವಾಗಿದೆ. ಆದರೆ ನವಲಗುಂದ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ನಡುವೆ ಒಗ್ಗಟ್ಟು ಪ್ರದರ್ಶನ ಕಂಡಿದೆ. ನವಲಗುಂದ ಕ್ಷೇತ್ರದ ಆಕಾಂಕ್ಷಿಗಳಾದ ಕೋನರೆಡ್ಡಿ ಹಾಗೂ ಆನಂದ್ ಅಸೂಟಿ ನಡುವೆ ಒಗ್ಗಟ್ಟು ಮೂಡಿದೆ.  ಸಿದ್ದರಾಮಯ್ಯ ಭೇಟಿಯಾಗಿ ಇಬ್ಬರೂ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಬ್ಬರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಒಟ್ಟಿಗೆ ಕೆಲಸ ಮಾಡುವ ವಾಗ್ದಾನ ನೀಡಿದ್ದಾರೆ. ಬಿಜೆಪಿ ಸೋಲಿಸುವುದು ನಮ್ಮ ಮೊದಲ ಗುರಿ. ಹೀಗಾಗಿ ನಾವೇ ಕಿತ್ತಾಡಿಕೊಂಡರೆ ಬಿಜೆಪಿಗೆ ಲಾಭವಾಗಲಿದೆ. ಹೀಗಾಗಿ ನೀವೂ ಯಾರಿಗೆ ಟಿಕೆಟ್ ನೀಡಿದರೂ ಒಟ್ಟಿಗರ ಕೆಲಸ ಮಾಡುತ್ತೇವೆ ಎಂದು ಇಬ್ಬರು ಆಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.    

ಸುರ್ಜೆವಾಲಾ ಸಿದ್ದರಾಮಯ್ಯ ಪ್ರತ್ಯೇಕ ಮಾತುಕತೆ: ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುಪ್ತವಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಕೋಲಾರಕ್ಕೆ ತೆರಳುವ ವೇಳೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಬೇರೆ ನಾಯಕರನ್ನು ಬಿಟ್ಟು  ಒಂದೇ ಕಾರಿನಲ್ಲಿ  ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯ ತೆರಳಿದ್ದಾರೆ. 

ಇನ್ನು ರಾಹುಲ್ ಗಾಂಧಿ ಕೋಲಾರಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ರಾಹುಲ್ ಗಾಂಧಿಯವರು 9 ನೇ ತಾರೀಖು ಕೋಲಾರಕ್ಕೆ ಬರುತ್ತಾರೆ. 5 ನೇ ತಾರೀಖು ಇದ್ದ ಕಾರ್ಯಕ್ರಮ ಕ್ಯಾನ್ಸಲ್ ಆಗಿದೆ. ಅವರಿಗೆ ಬೇರೆ ಕೆಲಸ ಇದೆ , ಅಂದು ಬರೋದಕ್ಕೆ ಆಗಲ್ಲ ಆದರಿಂದ ಕ್ಯಾನ್ಸಲ್ ಆಗಿದೆ. ಕೋಲಾರದಲ್ಲಿ ಬೃಹತ್ ರ್ಯಾಲಿಯನ್ನ ಏರ್ಪಡಿಸಲಾಗಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದೆ ಎಂದಿದ್ದಾರೆ. ಇನ್ನು ದೆಹಲಿಗೆ ತೆರಳುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ದೆಹಲಿಗೆ ಯಾವಾಗ ಕರಿಯುತ್ತಾರೋ ಆಗ ಹೋಗ್ತೀನಿ ಎಂದಿದ್ದಾರೆ.

ಮಾಜಿ ಸಚಿವ ಮಾಲಕರೆಡ್ಡಿ ಕಾಂಗ್ರೆಸ್‌ಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತ್ತೊಂದು

ಡಿಕೆಶಿ ಮನೆಗೆ ಕಿಮ್ಮನೆ ರತ್ನಾಕರ್ : ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ನಿವಾಸಕ್ಕೆ  ಕಿಮ್ಮನೆ ರತ್ನಾಕರ್ ಭೇಟಿ ನೀಡಿದರು. ಈ ವೇಳೆ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದರು. ಆದರೆ ಎಐಸಿಸಿ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ನೀಡಲು ನಿರ್ಧರಿಸಿದೆ . ಆದರೆ ಮಂಜುನಾಥ್ ಗೌಡರಿಂದಲೂ ಪ್ರಬಲ ಪೈಪೋಟಿ ಹಿನ್ನೆಲೆ ಡಿಕೆ ಶಿವಕುಮಾರ್‌ರಿಂದ ಎರಡೂ ಬಣಗಳನ್ನು ಒಗ್ಗೂಡಿಸಿ ಮಾತುಕತೆ ನಡೆಸಿದೆ. ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ನೀಡಿದರೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಮಂಜುನಾಥ್ ಗೌಡ ಬಣಕ್ಕೆ ಸೂಚನೆ ನೀಡಲಾಗಿದೆ.

ಧಾರವಾಡ: ಬ್ರಾಹ್ಮಣ ಸಮಾಜಕ್ಕೆ ಟಿಕೆಟ್‌ ನೀಡಿದ ಪಕ್ಷಕ್ಕೆ ನಮ್ಮ ಬೆಂಬಲ: ವಿಪ್ರ ಅಧ್ಯಕ್ಷ ಆರ್‌ ಡಿ

ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವರಿಷ್ಠರು ಏನು ತೀರ್ಮಾನ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ನಮ್ಮಲ್ಲಿ ಮೂರು ಜನ ಅರ್ಜಿ ಹಾಕಿದ್ದಾರೆ. ಮೂರು ಜನರನ್ನ ಕೂರಿಸಿಕೊಂಡು ಒಂದು ಒಳ್ಳೇ ರೀತಿ ಚುನಾವಣೆ ನಡೆಸಿಕೊಂಡು  ಹೋಗಬೇಕಿದೆ. ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗಬೇಕಿದೆ ಎಂದಿದ್ದಾರೆ.

Follow Us:
Download App:
  • android
  • ios