ಕಾಂಗ್ರೆಸ್ಸಿನ ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಾ ಗಾಂಧಿ, ಸೋನಿಯಾಗಾಂಧಿ ಸೇರಿದಂತೆ ಪ್ರಮುಖ ನಾಯಕರೇ ಸ್ಪರ್ಧೆ ಮಾಡುತ್ತಿಲ್ಲ. ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎನ್ನುವಂತೆ ಆಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಸ್ವಚ್ಛವಾಗುತ್ತಿದ್ದು, ಬಿಜೆಪಿಯನ್ನೇನು ಸ್ವಚ್ಛ ಮಾಡುತ್ತಾರೆ ಎಂದು ಕಿಡಿಕಾರಿದ ಬಿ. ಶ್ರೀರಾಮುಲು 

ಕೊಪ್ಪಳ(ಏ.18):  ಕಾಂಗ್ರೆಸ್ ಈಗಾಗಲೇ ದೇಶದಾದ್ಯಂತ ಬ್ರೇನ್ ಡೆಡ್ ಆದ ಪಾರ್ಟಿ. ಅದನ್ನು ಎಷ್ಟೇ ಮೇಲೆತ್ತಲು ಪ್ರಯತ್ನಪಟ್ಟರೂ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಟೀಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಾ ಗಾಂಧಿ, ಸೋನಿಯಾಗಾಂಧಿ ಸೇರಿದಂತೆ ಪ್ರಮುಖ ನಾಯಕರೇ ಸ್ಪರ್ಧೆ ಮಾಡುತ್ತಿಲ್ಲ. ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎನ್ನುವಂತೆ ಆಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಸ್ವಚ್ಛವಾಗುತ್ತಿದ್ದು, ಬಿಜೆಪಿಯನ್ನೇನು ಸ್ವಚ್ಛ ಮಾಡುತ್ತಾರೆ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ, ಬಿಜೆಪಿ ಪರ ವ್ಯಾಪಕ ಅಲೆ: ಬಿಜೆಪಿ ಅಭ್ಯರ್ಥಿ ಶ್ರೀರಾಮುಲು

ಗಾಲಿ ಜನಾರ್ದನರೆಡ್ಡಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪಕ್ಷ ನಮ್ಮಂತವರನ್ನು ಕಳೆದುಕೊಳ್ಳಬಾರದು ಎಂದೇ ಪಕ್ಷ ನಮಗೆ ಮತ್ತೆ ಮತ್ತೆ ಅವಕಾಶ ನೀಡುತ್ತಿದೆ. ಅವರು ಜೊತೆಯಲ್ಲಿ ಇರುವುದು ನಮಗೆ ಹೆಚ್ಚಿನ ಬಲಬಂದಿದೆ ಎಂದರು. ಸಂಸದ ಸಂಗಣ್ಣ ಕರಡಿ ದೊಡ್ಡ ಲೀಡರ್, ಅವರು ಯಾಕೆ ಬಿಜೆಪಿ ತೊರೆದಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.