ಲೋಕಸಭಾ ಚುನಾವಣೆ 2024: ಸಮೀಕ್ಷೆ ಏನೇ ಇದ್ರೂ, ಕಾಂಗ್ರೆಸ್‌ಗೆ ಎರಡಂಕಿ ಸ್ಥಾನ ಗೆಲ್ಲುವ ವಿಶ್ವಾಸ

ಗ್ಯಾರಂಟಿ ಯೋಜನೆಗಳು, ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆಯಿಂದಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು ಸಿಗಲಿದೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಏನೇ ಹೇಳಿದರೂ, ಈ ಬಾರಿ ರಾಜ್ಯದಲ್ಲಿ ಎರಡಂಕಿ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂಬ ವಿಶ್ವಾಸದಲ್ಲಿದ್ದಾರೆ.
 

Congress is Confident of Getting 14 to 16 Seats in Karnataka in Lok Sabha Election 2024 grg

ಬೆಂಗಳೂರು(ಜೂ.02):  ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮಟ್ಟಿಗೆ ಕಾಂಗ್ರೆಸ್ ಆಶಾವಾದಿಯಾಗಿದ್ದು, ಪಕ್ಷ ನಡೆಸಿದ ಆಂತರಿಕ ಸಮೀಕ್ಷೆ 14 ರಿಂದ 16 ಸ್ಥಾನ ದೊರೆಯಲಿದೆ ಎಂದು ತಿಳಿಸಿದೆ. ಇನ್ನು ಗ್ಯಾರಂಟಿ ಯೋಜನೆ ನಿಜಕ್ಕೂ ಕೆಲಸಮಾಡಿದರೆ ಈ ಸಂಖ್ಯೆ 20 ಮುಟ್ಟಿದರೂ ಅಚ್ಚರಿಯಿಲ್ಲ ಎಂಬ ನಂಬಿಕೆ ಕಾಂಗ್ರೆಸ್ಸಿಗರದ್ದು. ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾದರೂ ಕಾಂಗ್ರೆಸ್ ಮಾತ್ರ ಈ ಬಾರಿ ರಾಜ್ಯದಲ್ಲಿ ಎರಡಂಕಿ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂಬ ವಿಶ್ವಾಸದಲ್ಲಿದೆ. 

ಗ್ಯಾರಂಟಿ ಯೋಜನೆಗಳು, ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆಯಿಂದಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು ಸಿಗಲಿದೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಏನೇ ಹೇಳಿದರೂ, ಈ ಬಾರಿ ರಾಜ್ಯದಲ್ಲಿ ಎರಡಂಕಿ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂಬ ವಿಶ್ವಾಸದಲ್ಲಿದ್ದಾರೆ.

ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲೂ ಬಿಜೆಪಿಗೆ ಜೈ ಎಂದ ಮತದಾರ..!

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪೂರ್ಣಗೊಂಡ ನಂತರ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಬಾರಿ 14ರಿಂದ 16 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವರದಿ ದೊರೆತಿತ್ತು. ಆಂತರಿಕ ಸಮೀಕ್ಷೆಯಲ್ಲಿ 28 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಲ್ಲಿ ಗೆಲುವು ಖಚಿತವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳಲ್ಲಿ 50-50 ಅವಕಾಶವಿದೆ ಎಂದು ತಿಳಿದು ಬಂದಿತ್ತು.

ಅದರಲ್ಲೂ ಮೊದಲ ಹಂತಕ್ಕಿಂತ ಎರಡನೇ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷೆಗೂ ಮೀರಿ ಸ್ಥಾನಗಳು ಲಭ್ಯವಾಗುವ ಸಾಧ್ಯತೆಯಿದೆ ಎಂಬುದು ನಾಯಕರ ಅಭಿಪ್ರಾಯ. ಅದರ ಜತೆಗೆ, ರಾಜ್ಯ ಗುಪ್ತಚರ ಇಲಾಖೆ ನೀಡಿದ ವರದಿಯಲ್ಲಿಯೂ ಕಾಂಗ್ರೆಸ್ 12ರಿಂದ 14 ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ಅಂಶವನ್ನು ಉಲ್ಲೇಖಿಸಲಾಗಿತ್ತು. ಹೀಗೆ ಪಕ್ಷದ ಆಂತರಿಕ ಸಮೀಕ್ಷೆ ಮತ್ತು ಗುಪ್ತಚರ ಇಲಾಖೆಯ ವರದಿಯನ್ನಾಧರಿಸಿ ಎರಡಂಕಿ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂಬ ವಿಶ್ವಾಸ ಪಕ್ಷದ ನಾಯಕರದ್ದು.

Latest Videos
Follow Us:
Download App:
  • android
  • ios