ಬರೀ ಮುಸ್ಲಿಂ ಸಮುದಾಯ ಓಲೈಕೆ ಮಾಡುತ್ತಿರುವ ಕಾಂಗ್ರೆಸ್: ಯತ್ನಾಳ
ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ಆಡಳಿತದಿಂದ ಇಂದು ವಿಶ್ವದಲ್ಲಿ ಭಾರತ ಮಿಂಚುವಂತಾಗಿದೆ. ವಿಶ್ವದ ಯಾವುದೇ ದೇಶಕ್ಕೆ ಸಂಕಷ್ಟ ಎದುರಾದಾಗ, ನಾಯಕತ್ವ ವಹಿಸಿ ಸಮಸ್ಯೆ ಪರಿಹರಿಸಿದ ವಿಶ್ವ ನಾಯಕ ಮೋದಿ. ದೇಶದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಕೊರೋನಾ ವೇಳೆ ಎಲ್ಲರಿಗೂ ಲಸಿಕೆ ನೀಡಿ ಪ್ರಾಣ ರಕ್ಷಣೆ ಮಾಡಿದ್ದು, ದೊಡ್ಡ ಸಾಧನೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ದೇವರಹಿಪ್ಪರಗಿ(ಮೇ.05): ಕಾಂಗ್ರೆಸ್ ಕೇವಲ ಮುಸ್ಲಿಂ ಸಮುದಾಯವನ್ನು ಮಾತ್ರ ಒಲೈಸುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಎಂದಿಗೂ ಕೂಡ ದಲಿತರ ಪರವಾಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ವಿಜಯಪುರ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮೊಹರೆ ವೃತ್ತ, ಬಜಾರ ರಸ್ತೆ ಮಾರ್ಗವಾಗಿ ರೋಡ್ ಶೋ ನಡೆಸಿ ಕರಿಸಿದ್ದೇಶ್ವರ ದೇವಸ್ಥಾನದ ಮುಂದೆ ಆವರಣದಲ್ಲಿ ಭರ್ಜರಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ , ಬಡ ಮಕ್ಕಳ ಸ್ಕಾಲರ್ ಶಿಪ್ ಹಣ ಕಿತ್ತುಕೊಂಡಿದೆ ಎಂದು ದೂರಿದ ಅವರು, ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ. ಮುಸ್ಲಿಮರ ಮೀಸಲಾತಿಯನ್ನು ತೆಗೆಯುತ್ತೇವೆ ಅಂತ ಅಮಿತ್ ಶಾ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿ, ಲಿಂಗಾಯಿತರಿಗೆ ಮೀಸಲಾತಿ ಹಂಚಿಕೊಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು.
ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಸೋಲಬೇಕು: ಸಚಿವ ರಾಮಲಿಂಗಾರೆಡ್ಡಿ
ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ಆಡಳಿತದಿಂದ ಇಂದು ವಿಶ್ವದಲ್ಲಿ ಭಾರತ ಮಿಂಚುವಂತಾಗಿದೆ. ವಿಶ್ವದ ಯಾವುದೇ ದೇಶಕ್ಕೆ ಸಂಕಷ್ಟ ಎದುರಾದಾಗ, ನಾಯಕತ್ವ ವಹಿಸಿ ಸಮಸ್ಯೆ ಪರಿಹರಿಸಿದ ವಿಶ್ವ ನಾಯಕ ಮೋದಿ. ದೇಶದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಕೊರೋನಾ ವೇಳೆ ಎಲ್ಲರಿಗೂ ಲಸಿಕೆ ನೀಡಿ ಪ್ರಾಣ ರಕ್ಷಣೆ ಮಾಡಿದ್ದು, ದೊಡ್ಡ ಸಾಧನೆ. ಜಮ್ಮು - ಕಾಶ್ಮೀರಕ್ಕೆ ಸಂಬಂಧಿಸಿದ ಕಲಂ 370 ರದ್ದುಗೊಳಿಸಿರುವುದು ಹಾಗೂ ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಮೂಲಕ ಕೋಟ್ಯಂತರ ಹಿಂದೂಗಳ ಕನಸು ಸಾಕಾರಗೊಳಿಸಿದ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಸಾಧನೆಗಳನ್ನು ಶ್ಲಾಘಿಸಿದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಸುಮಾರು ₹1 ಲಕ್ಷ ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಗ್ರಾಮ ಸಡಕ್ ರಸ್ತೆ, ವಿಮಾನ ನಿಲ್ದಾಣ, ರೈಲ್ವೆ ಯೋಜನೆ, ಹರ ಘರ್ ಜಲ್ ಸೇರಿ ಹಲವು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ರಮೇಶ ಜಿಗಜಿಣಗಿ ಅವರಿಗೆ ಹೆಚ್ಚಿನ ಬೆಂಬಲ ನೀಡಲಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಜಿಲ್ಲಾ ಒಬಿಸಿ ಅಧ್ಯಕ್ಷ ಸಿದ್ದು ಬುಳ್ಳಾ, ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ, ಡಾ.ಬಿ.ಎಸ್.ಪಾಟೀಲ (ನಾಗರಾಳ ಹುಲಿ), ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಾಯಿಬಣ್ಣ ಬಾಗೇವಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಾಂತೇಶ ಬಿರಾದಾರ, ಮುಖಂಡರಾದ ಭೀಮನಗೌಡ ಸಿದರಡ್ಡಿ, ಶಿಲ್ಪಾ ಕುದರಗೊಂಡ, ಗಾಯತ್ರಿ ದೇವೂರ, ಭೀಮನಗೌಡ ಲಚ್ಯಾಣ, ಸುರೇಶ ಚವ್ಹಾಣ ಉಪಸ್ಥಿತರಿದ್ದರು.
ದೇಶದ ಭದ್ರತೆ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎನ್‌ಡಿಎ ಅಭ್ಯರ್ಥಿಯಾದ ರಮೇಶ ಜಿಗಜಿಣಗಿ ಅವರಿಗೆ ಕ್ಷೇತ್ರದಿಂದ ಹೆಚ್ಚಿನ ಮತಗಳನ್ನು ನೀಡಲಿದ್ದೇವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿ ಸಾಲವಾಡಗಿ ತಿಳಿಸಿದ್ದಾರೆ.