ಬೆಂಗಳೂರು, (ಅ.21): ಮುಂದಿನ ದಿನಗಳಲ್ಲಿ ರಾಜ್ಯದ ಕಾಂಗ್ರೆಸ್-ಜೆಡಿಎಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು (ಬುಧವಾರ) ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಉಪಚುನಾವಣೆ ಕಣದ ಅಖಾಡ ಬಿಸಿ ಏರುತ್ತಿದೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ತಳಮಳ ಶುರುವಾಗಿದೆ. ಕಾಂಗ್ರೆಸ್ ನಲ್ಲಿ ಇದ್ದವರು ಗೂಂಡಾಗಿರಿಯಿಂದ ಬೇಸತ್ತು ಬಿಜೆಪಿ ಸೇರಲಿದ್ದಾರೆ. ಜೆಡಿಎಸ್ ನಲ್ಲಿದ್ದವರು ಕುಟುಂಬ ರಾಜಕಾರಣದಿಂದ ಬೇಸತ್ತು ಬಿಜೆಪಿ ಸೇರಲಿದ್ದಾರೆ ಎಂದರು.

3 ವರ್ಷ ಬಿಎಸ್‌ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! 

ಬಿಜೆಪಿಗೆ ಕೇವಲ ಕಾರ್ಪೋರೇಟ್ ಮಾತ್ರವಲ್ಲ, ಮುಂದಿನ ದಿನಗಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನ ಘಟಾನುಘಟಿಗಳೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.