Asianet Suvarna News Asianet Suvarna News

ನಮಗೆ ಭಯಪಟ್ಟು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆದಿದೆ: ಆಯನೂರು ಮಂಜುನಾಥ್‌

ನಮಗೆ ಭಯಪಟ್ಟು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದೆ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು, ಸಂತಸದ ವಿಚಾರ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಹೇಳಿದರು. 

Congress Leader Ayanur Manjunath Talks Over BJP President Post At Shivamogga gvd
Author
First Published Nov 13, 2023, 1:00 AM IST

ಶಿವಮೊಗ್ಗ (ನ.13): ನಮಗೆ ಭಯಪಟ್ಟು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದೆ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು, ಸಂತಸದ ವಿಚಾರ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ನೇಮಕ ಆಗಿಲ್ಲ ಎಂದು ನಾವು ಪದೇಪದೆ ತಿವಿದಿದ್ದರಿಂದ ಈಗ ನೇಮಕ ಆಗಿದೆ. ರಾಜ್ಯಾದ್ಯಕ್ಷರ ನೇಮಕದಲ್ಲಿ ಗಜಪ್ರಸವ ಆಗಿದೆ. ನಿಮಗೆ ವಯಸ್ಸಾಗಿದೆ, ನಿಮ್ಮ ಕೈಯಲ್ಲಿ ಆಗುವುದಿಲ್ಲ ಎಂದು ಯಾವ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಿದರೋ ಈಗ ಅವರಿಂದಲೇ ಕೆಲಸ ತೆಗೆದುಕೊಳ್ಳಲು ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಮಾಡಲಾಗಿದೆ. ಇದು ಪರೋಕ್ಷವಾಗಿ ಯಡಿಯೂರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದರು.

ಸಚಿವರ ವಿರುದ್ಧ ಅಪಪ್ರಚಾರ: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ವಿಚಾರದಲ್ಲಿ ಯಾವುದೇ ದೇಶದ ರಾಜಕಾರಣ ಇಲ್ಲ. ಇದನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಸೇಡಿನ ಕ್ರಮ ಎಂದು ವ್ಯಾಖ್ಯಾನ ಮಾಡಿದ್ದಾರೆ. ಇದೊಂದು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ. ಜಿಲ್ಲಾ ಕೆಡಿಪಿ ಸಭೆಯಲ್ಲಿ ಲೇಔಟ್‌ ಅಕ್ರಮ ಮಣ್ಣು ತೆಗೆದ ವಿಚಾರ ಪ್ರಸ್ತಾಪವಾಗಿತ್ತು. ಅಧಿಕಾರಿಗಳು ಭ್ರಷ್ಟಾಚಾರ ನಡೆದಿರುವ ಬಗ್ಗೆ ವರದಿ ಕೊಟ್ಟಿದ್ದಾರೆ. ಈ ಹಿನ್ನೆಲೆ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಷಡಾಕ್ಷರಿ ಅವರೂ ತನಿಖೆಗೆ ನಾನು ಸಿದ್ಧ ಎಂದು ಹೇಳಿದ್ದಾರೆ. ಅವರ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. 

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ

ಇದು ಸಂಸದರಿಗೆ ಯಾವ ಆಯಾಮದಲ್ಲಿ ಸೇಡಿನ ಕ್ರಮ ಎನ್ನಿಸಿದ್ಯೋ ಗೊತ್ತಿಲ್ಲ. ಭವಿಷ್ಯ ಬಿಜೆಪಿ ಅಧಿಕಾರದಲ್ಲಿ ಈ ರೀತಿ ಆಗುತ್ತಿತ್ತೇನೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಮಧು ಬಂಗಾರಪ್ಪ ಅವರು ಸರ್ಕಾರಿ ನೌಕರರ ಪರವಾಗಿ ಇದ್ದಾರೆ. ಸರ್ಕಾರಿ ನೌಕರರ ಮೇಲೆ ಆರೋಪ ಬಂದಾಗ ತನಿಖೆಗೆ ಅನುಕೂಲವಾಗಲಿ ಎಂದು ವರ್ಗಾವಣೆ ಮಾಡಲಾಗಿದೆ. ಸರ್ಕಾರಿ ನೌಕರರ ಪರವಾಗಿ ಇರುವ ಮಧು ಬಂಗಾರಪ್ಪನವರ ಮೇಲೆ ಪ್ರತ್ಯಕ್ಷ ಮತ್ತು ಪ್ರತ್ಯಕ್ಷವಾಗಿ ದಾಳಿ ನಡೆಸಲಾಗುತ್ತಿದೆ. ಎನ್‌ಪಿಎಸ್ ಹಾಗೂ ಒಪಿಎಸ್‌ ವಿಚಾರವಾಗಿ ಮಧು ಬಂಗಾರಪ್ಪ ಅವರು ಲಕ್ಷಾಂತರ ನೌಕರರ ಪರವಾಗಿ ಇದ್ದಾರೆ. ಆದರೆ, ಬಿಜೆಪಿಯವರು ಅನಗತ್ಯವಾಗಿ ಮಧು ಬಂಗಾರಪ್ಪ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Follow Us:
Download App:
  • android
  • ios