Asianet Suvarna News Asianet Suvarna News

ಕುಮಾರಸ್ವಾಮಿ ಕೈಬಲಪಡಿಸಬೇಕಿದೆ: ಜೆಡಿಎಸ್‌ ಸೇರುವ ಮುನ್ಸೂಚನೆ ಕೊಟ್ರಾ ಕಾಂಗ್ರೆಸ್ ಹಿರಿಯ ನಾಯಕ

* ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಹೊಗಳಿದ ಕಾಂಗ್ರೆಸ್ ನಾಯಕ
* ಕರ್ನಾಟಕದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸಬೇಕಿದೆ ಎಂದು ಸಿಎಂ ಇಬ್ರಾಹಿಂ
* ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಇಬ್ರಾಹಿಂ ಹೇಳಿಕೆ

Congress Leader CM Ibrahim Bats for JDS HD Kumaraswamy and Devegowda rbj
Author
Bengaluru, First Published Sep 21, 2021, 8:32 PM IST
  • Facebook
  • Twitter
  • Whatsapp

ಶಿವಮೊಗ್ಗ, (ಸೆ.21): ಜೆಡಿಎಸ್ ನಾಯಕರಾದ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಡಿ ಹೊಗಳಿರುವುದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹೌದು..ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಭದ್ರಾವತಿ ತಾಲ್ಲೂಕು ಗೋಣಿಬೀಡಿನಲ್ಲಿ ಮಾತನಾಡಿ,  ಕರ್ನಾಟಕದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸಬೇಕಿದೆ. ಇಂದಿನಿಂದ ಶುಭಕಾಲ ಆರಂಭವಾಗಿದೆ. ಕರ್ನಾಟಕದಲ್ಲಿ ಉತ್ತಮ ಕಾಲ ಕಾಣುತ್ತೇವೆ ಎಂದು ಎಂದರು.

ಸಿದ್ದರಾಮಯ್ಯ ಸಂಧಾನ ಸಭೆ ಸಕ್ಸಸ್: ದೇವೇಗೌಡ, ಕುಮಾರಸ್ವಾಮಿ ಪ್ಲಾನ್ ಠುಸ್

ಎಚ್​.ಡಿ.ದೇವೇಗೌಡರು 11 ತಿಂಗಳು ಪ್ರಧಾನಿ ಆಗಿ ಒಳ್ಳೆಯ ಕೆಲಸ ಮಾಡಿದ್ದರು. ಅವರು ಅಪ್ಪಿತಪ್ಪಿ ಒಕ್ಕಲಿಗರ ಜಾತಿಯಲ್ಲಿ ಹುಟ್ಟಿದರು. ಬೇರೆ ಜಾತಿಯಲ್ಲಿ ಹುಟ್ಟಿದ್ದರೆ ಅವರ ಪ್ರತಿಮೆ ಅನಾವರಣವಾಗುತ್ತಿತ್ತು. ಹಳ್ಳಿಹಳ್ಳಿಗಳಲ್ಲಿ ಜನರು ಅವರ ಪ್ರತಿಮೆ ಇರಿಸುತ್ತಿದ್ದರು ಎಂದು ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಇಬ್ರಾಹಿಂ ಹಾಡಿ ಹೊಗಳಿದರು.

 ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ. ಅಂತಹ ಕೆಲಸವನ್ನು ನಾವು ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ

ಈಗಾಗಲೇ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಸೇರ್ಪಡೆಯಾಗುವುದಕ್ಕೆ ಇಂಗಿತ ವ್ಯಕ್ತಪಡಿಸಿದ್ದು, ಈ ಬಗ್ಗೆ ದೇವೇಗೌಡ್ರ ಜತೆಗೆ ಎರಡು ಸುತ್ತು ಮಾತುಗಳು ಸಹ ಮುಗಿದಿವೆ. ಆದ್ರೆ, ಕಾಂಗ್ರೆಸ್ ತೊರೆಯುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದ್ದರು.

ಆದ್ರೆ, ಇದೀಗ ಸಿ.ಎಂ ಇಬ್ರಾಹಿಂ ಅವರ ಈ ಮಾತುಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.  ಅವರು ಮುಂದಿನ ದಿನಗಳಲ್ಲಿ ಜೆಡಿಎಸ್‌ ಸೇರಲು ಈ ರೀತಿ ಮುನ್ಸೂಚೆ ಕೊಟ್ರಾ ಎನ್ನುವ ಚರ್ಚೆಗೆ ಗ್ರಾಸವಾಗಿದೆ.

Follow Us:
Download App:
  • android
  • ios