ಬೆಂಗಳೂರು, (ಸೆ.27): ದೇಶಕ್ಕೆ ಆರು ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಮಾಜಿ ಶಾಸಕ ಸಿಎಂ ಇಬ್ರಾಹಿಂ ಅವರು ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.

ಇಂದು ಕಾಂಗ್ರೆಸ್ ಪಕ್ಷದಿಂದ ಆರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಲೋಕಸಭೆ, ವಿಧಾನಸಭೆ ಪರಾಜಿತ ಅಭ್ಯರ್ಥಿಗಳು ಪಕ್ಷದ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಮುಖಂಡರು ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಕುರಿತು ಸಭೆಯಲ್ಲಿ ಹಿರಿಯರು ಸಲಹೆ ಮತ್ತು ಸೂಚನೆ ನೀಡಿದ್ದಾರೆ.

ಬಂದ್ ಆಗುತ್ತಿದೆ ಕರ್ನಾಟಕ, ಪೂನಂ ಪಾಂಡೆಯ ಮತ್ತೊಂದು ನಾಟಕ; ಸೆ.27ರ ಟಾಪ್ 10 ಸುದ್ದಿ! 

ಈ ವೇಳೆ ಭಾಷಣ ಮಾಡಿದ ಸಿಎಂ ಇಬ್ರಾಹಿಂ, ಕೋವಿಡ್ ಮನುಷ್ಯನಿಗೆ 6 ತಿಂಗಳ ಹಿಂದೆ ಬಂದಿದೆ. ಆದರೆ ದೇಶಕ್ಕೆ 6 ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

 ಡಿಕೆ ಶಿವಕುಮಾರ್ ಅವರನ್ನು ನಾನು ಅಂಭಿನಂದಿಸುತ್ತೇನೆ. ಕೊರೋನಾ ಸಂದರ್ಭದಲ್ಲಿ ತುಂಬಾ ಓಡಾಡಿ ಕೆಲಸ ಮಾಡುತ್ತಿದ್ದಾರೆ. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲ ಪಡಿಸಿದರೆ ನಿಜವಾಗಿಯೂ ನಾವು ಅಧಿಕಾರಕ್ಕೆ ಬರುತ್ತೇವೆ. ಡಿಸೆಂಬರ್ ನಲ್ಲಿ ರಾಜಕೀಯದಲ್ಲಿ ಬದಲಾವಣೆ ಆಗುತ್ತೆ ಎಂದು ಭವಿಷ್ಯ ನುಡಿದರು.